ಬೆಂಗಳೂರು : ನಗರದ ಅಂಬೇಡ್ಕರ್ ಭವನದಲ್ಲಿಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಜನ್ಮದಿನ ಆಚರಿಸಲಾಯಿತು .
ನಂತರ ಮಾತನಾಡಿದ ಮಾಜಿ ಸಚಿವ ಎಚ್ ಕೆ ಪಾಟೀಲ್ ಸರ್ಕಾರ ಇದ್ದಾಗ ಬರೋರು ಬೇರೆ ಇವತ್ತು ಕಾರ್ಯಕ್ರಮದಲ್ಲಿ ಉಳಿದವರು ಬೇರೆ ಎಂದು ಹೇಳುವ ಮೂಲಕ ಕಾರ್ಯಕ್ರಮಕ್ಕೆ ಗೈರಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ
ಮಾಜಿ ಸಚಿವ ಎಚ್ ಆಂಜನೇಯ ಮಾತನಾಡಿ ಸಾಮಾಜಿಕ ನ್ಯಾಯಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್, ಕಾಂಗ್ರೆಸ್ ನಿಂದ ಮಾತ್ರ ಸಾಮಾಜಿಕ ನ್ಯಾಯ ಸಿಗುತ್ತೆ. ಸಿದ್ದರಾಮಯ್ಯ ಅವಧಿಯಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲಾಗಿತ್ತು. ಎಲ್ಲ ಜಾತಿಗಳಿಗೆ,ವರ್ಗದವರಿಗೆ ಸಿದ್ದರಾಮಯ್ಯ ಅವಧಿಯಲ್ಲಿ ಅವಕಾಶ ಸಿಕ್ಕಿತ್ತು. ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯ ಬಯಸಲು ಆಗೋದಿಲ್ಲ ಬಿಜೆಪಿಯವರು ವಾಮಮಾರ್ಗದಲ್ಲಿ ಅಧಿಕಾರ ಹಿಡಿದಿದ್ದಾರೆ. ಅಲ್ಲದೆ ಸಂಪುಟ ವಿಸ್ತರಣೆಗೆ 1ತಿಂಗಳು ತೆಗೆದುಕೊಂಡಿದ್ದಾರೆ. ಇನ್ನೂ ಖಾತೆ ಹಂಚಿಕೆಗೆ ಎಷ್ಟು ತಿಂಗಳು ತೆಗೆದುಕೊಳ್ತಾರೋ ನೋಡೋಣ ಎಂದು ಮಾಜಿ ಸಚಿವ ಆಂಜನೇಯ ಸರ್ಕಾರದ ವಿರುದ್ದ ವ್ಯಂಗ್ಯವಾಡಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ,ಹರಿಪ್ರಸಾದ್, ಕೆಜೆ ಜಾರ್ಜ್, ರಾಮಲಿಂಗಾ ರೆಡ್ಡಿ ಭಾಗಿಯಾಗಿದ್ದರು.