ETV Bharat / state

ಕೊರೊನಾ ವಾರಿಯರ್​ಗಳಾಗಿ ಬಿಜೆಪಿ ಕಾರ್ಯಕರ್ತರ ನೇಮಕ..  ಡಿಸಿಎಂ ಅಶ್ವತ್ಥ್‌ ನಾರಾಯಣ - coronavirus precautions

ಈ ಮೊದಲಿನಿಂದಲೂ ಪಕ್ಷದ ಕಾರ್ಯಕರ್ತರು ಕೊರೊನಾ ವಾರಿಯರ್​ಗಳಾಗಿ ಕೆಲಸ ಮಾಡುತ್ತಿದ್ದಾರೆ. ಲಾಕ್‌ಡೌನ್ ಸಮಯದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಈ ಸೇವೆ ಇನ್ನೂ ಮುಂದುವರೆಯಬೇಕಾಗಿದೆ..

ಡಿಸಿಎಂ ಅಶ್ವತ್ಥ ನಾರಾಯಣ
ಡಿಸಿಎಂ ಅಶ್ವತ್ಥ ನಾರಾಯಣ
author img

By

Published : Jul 5, 2020, 8:40 PM IST

ಬೆಂಗಳೂರು : ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿರುವ ಕೋವಿಡ್-19 ನಿಯಂತ್ರಣಕ್ಕೆ ಟೊಂಕಕಟ್ಟಿ ನಿಂತಿರುವ ಬಿಜೆಪಿ ಕಾರ್ಯಕರ್ತರು, ಇನ್ನೆರಡು ದಿನಗಳಲ್ಲಿ ಕೊರೊನಾ ವಾರಿಯರ್ ಗಳಾಗಿ ನಗರದ ಪ್ರತಿ ವಾರ್ಡ್​ಗಳಲ್ಲಿ ಜನ ಸೇವೆಗೆ ಮುಂದಾಗಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥ್‌ ನಾರಾಯಣ ಹೇಳಿದ್ದಾರೆ.

ಇಂದು ಮಲ್ಲೇಶ್ವರ ಹಾಗೂ ಹೆಬ್ಬಾಳ ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರ ವರ್ಚುವಲ್ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ವಾರ್ಡ್​ನಲ್ಲಿಯೂ ಆರೋಗ್ಯವಂತ 50 ಕಾರ್ಯಕರ್ತರು ಈ ಸೇವಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅವೆರಲ್ಲರಿಗೂ ಸೂಕ್ತ ತರಬೇತಿ ಹಾಗೂ ಹಾಫ್ ಪಿಪಿಎ ಕಿಟ್​ಗಳನ್ನು ನೀಡಿ ನಿಯೋಜಿಸಲಾಗುವುದು ಎಂದು ತಿಳಿಸಿದರು.

ಈ ಮೊದಲಿನಿಂದಲೂ ಪಕ್ಷದ ಕಾರ್ಯಕರ್ತರು ಕೊರೊನಾ ವಾರಿಯರ್​ಗಳಾಗಿ ಕೆಲಸ ಮಾಡುತ್ತಿದ್ದಾರೆ. ಲಾಕ್‌ಡೌನ್ ಸಮಯದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ಈ ಸೇವೆ ಇನ್ನೂ ಮುಂದುವರೆಯಬೇಕಾಗಿದೆ. ನಮ್ಮ ಪಕ್ಷದ ಕಾರ್ಯಕರ್ತರು ಕೂಡಲೇ ಸನ್ನದ್ಧರಾಗಿ ಮುಂದೆ ಬರಬೇಕು ಎಂದು ಡಿಸಿಎಂ ಕರೆ ನೀಡಿದರು.

ಇನ್ನೆರಡು ದಿನಗಳಲ್ಲಿ ಬಿಬಿಎಂಪಿ ಕಾರ್ಯಕರ್ತರ ಹೆಸರುಗಳನ್ನು ನೋಂದಾಯಿಸಿಕೊಳ್ಳಲಿದೆ. ಕಾರ್ಯಕರ್ತರು ಸ್ವ-ಇಚ್ಚೆಯಿಂದ ಹೆಸರು ನೋಂದಾಯಿಸಿಕೊಳ್ಳಬೇಕು. ಅವರವರ ವಾರ್ಡ್‌ನ ಪ್ರತಿ ಪ್ರದೇಶದ ಮಾಹಿತಿಯ ಜತೆಗೆ ಸೋಂಕಿತರನ್ನು ಗುರುತಿಸುವುದು, ಅವರನ್ನು ಪ್ರಾಥಮಿಕ ಹಂತದ ತಪಾಸಣೆಗೆ ಕಳುಹಿಸುವುದು, ಆಸ್ಪತ್ರೆ ಇಲ್ಲವೇ ಹೋಮ್ ಕೇರ್‌ನಲ್ಲೇ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವುದೂ ಸೇರಿ ಅಗತ್ಯವದ ಎಲ್ಲ ಸೇವೆಗಳನ್ನು ಮಾಡಬೇಕಾಗುತ್ತದೆ ಎಂದು ಕಾರ್ಯಕರ್ತರಿಗೆ ಮಾಹಿತಿ ನೀಡಿದರು.

ಎಲ್ಲಿ ಸೋಂಕು ಹೆಚ್ಚಿರುತ್ತಿದೆ ಎಂಬುದನ್ನು ಗುರುತಿಸಬೇಕು. ಪಾಲಿಕೆಗೆ ತಕ್ಷಣ ಮಾಹಿತಿ ನೀಡುವುದರ ಜತೆ, ಜನರು ಮತ್ತು ಪಾಲಿಕೆಯ ನಡುವೆ ಕೊಂಡಿಯಾಗಿ ಕೆಲಸ ಮಾಡಬೇಕು. ಜನಸಾಂದ್ರತೆ ಇರುವ ಪ್ರದೇಶಗಳಲ್ಲಿ ಸೋಂಕು ಸಹಜವಾಗಿಯೇ ಹೆಚ್ಚಾಗಿರುತ್ತದೆ. ಅದನ್ನು ಕಡಿಮೆ ಮಾಡಲು ನಮ್ಮ ಕಾರ್ಯಕರ್ತರ ಪಡೆ ಬಿಬಿಎಂಪಿಗೆ ಹೆಗಲು ಕೊಟ್ಟು ಕೆಲಸ ಮಾಡಬೇಕು. ಹೋಮ್ ಕೇರ್ ವ್ಯವಸ್ಥೆಯನ್ನು ಯಶಸ್ವಿಗೊಳಿಸಬೇಕು. ಇನ್ನೂ ಕನಿಷ್ಟ 4 ತಿಂಗಳಾದ್ರೂ ಈ ಸಮಸ್ಯೆ ಇರುತ್ತದೆ. ಅಷ್ಟೂ ದಿನಗಳ ಕಾಲ ನಿಸ್ವಾರ್ಥವಾಗಿ ಜನಸೇವೆ ಮಾಡಬೇಕು ಎಂದು ಡಿಸಿಎಂ ಕಾರ್ಯಕರ್ತರಲ್ಲಿ ಹುರುಪು ತುಂಬಿದರು.

ಬೆಡ್ ಗಳಿಗೆ ಕೊರತೆ ಇಲ್ಲ : ನಮ್ಮ ಪಕ್ಷದ ಜತೆಗೆ ನಮ್ಮ ಸರ್ಕಾರವೂ ಸೋಂಕು ತಡೆಗೆ ಅನೇಕ ರೀತಿಯಲ್ಲಿ ಪ್ರಯತ್ನಿಸುತ್ತಿದೆ. ಚಿಕಿತ್ಸೆ, ಬೆಡ್​ಗಳು, ವೈದ್ಯರು, ನರ್ಸ್‌ಗಳು ಹಾಗೂ ಪೂರಕ ಸಿಬ್ಬಂದಿ ಕೊರತೆಯಾಗದಂತೆ ಸರ್ಕಾರ ನೋಡಿಕೊಂಡಿದೆ. ಖಾಸಗಿ ಆಸ್ಪತ್ರೆಗಳು ಸರ್ಕಾರದ ಜತೆ ಕೈಜೋಡಿಸಿವೆ. ಈಗಾಗಲೇ ಸರ್ಕಾರದಿಂದ 1500 ಬೆಡ್ ಸಿದ್ಧವಾಗಿವೆ. ಖಾಸಗಿ ಆಸ್ಪತ್ರೆಗಳಿಂದ 7 ಸಾವಿರ ಬೆಡ್ ಸಿಕ್ಕಿವೆ. ಕೋವಿಡ್ ಕೇರ್​ನಲ್ಲಿ 15,000 ಬೆಡ್‌ಗಳಿವೆ. ಇನ್ನು ಒಂದೇ ಕಡೆ 10 ಸಾವಿರ ಬೆಡ್ ಹಾಕಿ ಅದನ್ನು ಸುಸಜ್ಜಿತ ಚಿಕಿತ್ಸಾ ಕೇಂದ್ರವನ್ನಾಗಿ ಮಾಡುತ್ತಿದ್ದೇವೆ. ಅಗತ್ಯಬಿದ್ರೆ ಖಾಸಗಿ ಆಸ್ಪತ್ರೆಗಳಲ್ಲಿನ ಮತ್ತಷ್ಟು ಬೆಡ್‌ಗಳು ಸರ್ಕಾರ ವಶಕ್ಕೆ ಪಡೆಯಲಿದೆ.

ಈ ನಡುವೆ ಶೇ.80ರಷ್ಟು ಜನರಿಗೆ ಕೆಲ ಪ್ರಾಥಮಿಕ ಲಕ್ಷಣಗಳು ಕಾಣಿಸಿವೆ. ಅವರಿಗೆ ಅವರವರ ಮನೆಗಳಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಬಂದಾಗ ಬೆಂಗಳೂರಿನಲ್ಲಿ ಕೇವಲ ಎರಡು ಲ್ಯಾಬ್​ಗಳಷ್ಟೇ ಇದ್ದವು. ಈಗ ನೂರಾರು ಲ್ಯಾಬ್​ಗಳಿವೆ. ಹೀಗಾಗಿ ಯಾರೂ ಹೆದರಬೇಕಾಗಿಲ್ಲ. ಪ್ರತಿಯೊಬ್ಬರೂ ಧೈರ್ಯವಾಗಿ ಪರಿಸ್ಥಿತಿಯನ್ನು ಎದುರಿಸಬೇಕು ಎಂದು ಹೇಳಿದರು.

ಹೆಬ್ಬಾಳದಿಂದ 300 ಕಾರ್ಯಕರ್ತರು : ವರ್ಚುವಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಹೆಬ್ಬಾಳದ ಮಾಜಿ ಶಾಸಕ ಹಾಗೂ ವಿಧಾನ ಪರಿಷತ್ ಸದಸ್ಯ ನಾರಾಯಣ ಸ್ವಾಮಿ, ಹೆಬ್ಬಾಳ ಕ್ಷೇತ್ರದಿಂದ ಕೊರೊನಾ ವಾರಿಯರ್​ಗಳಾಗಿ ಕೆಲಸ ಮಾಡಲು 300ಕ್ಕೂ ಹೆಚ್ಚು ಕಾರ್ಯಕರ್ತರು ಸಿದ್ಧವಾಗಿದ್ದಾರೆ. ಅಗತ್ಯಬಿದ್ದರೆ ಮತ್ತಷ್ಟು ಕಾರ್ಯಕರ್ತರು ಈ ಮಹಾ ಕಾರ್ಯಕ್ಕೆ ಕೈಜೋಡಿಸಲಿದ್ದಾರೆ ಎಂದರು. ಇದೇ ವೇಳೆ ಜಿಕೆವಿಕೆಯಲ್ಲಿ ತೆರೆಯಲಾಗಿರುವ 700 ಬೆಡ್ ಗಳ ಕೋವಿಡ್ ಚಿಕಿತ್ಸಾ ಕೇಂದ್ರದ ಉಸ್ತುವಾರಿಯನ್ನು ಡಿಸಿಎಂ ಅವರು ನಾರಾಯಣಸ್ವಾಮಿ ಅವರಿಗೆ ವಹಿಸಿಸದರು. ಬೆಂಗಳೂರು ಉತ್ತರ ಜಿಲ್ಲೆಯ ಬಿಜೆಪಿ ಆಧ್ಯಕ್ಷ ನಾರಾಯಣ ಗೌಡ ಸೇರಿದಂತೆ ಅನೇಕ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.