ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಪ್ರವಾಸದ ವೇಳೆ ಪಂಜಾಬ್‍ನಲ್ಲಾದ ಭದ್ರತಾ ಲೋಪ ಖಂಡಿಸಿ ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಚೆನ್ನಮ್ಮ ವೃತ್ತದಿಂದ ಕಾಂಗ್ರೆಸ್ ಭವನದವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯ ಅಣಕು ಶವಯಾತ್ರೆ ಮಾಡಿದರು.
ಪೂರ್ವನಿಯೋಜಿತವಾಗಿ ಕಾಂಗ್ರೆಸ್ ಕಚೇರಿ ಬಳಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಪ್ರತಿಭಟನಾಕಾರರು ಕಾಂಗ್ರೆಸ್ ಭವನದತ್ತ ಬರುತ್ತಿದ್ದಂತೆ ರಸ್ತೆ ಮಧ್ಯದಲ್ಲಿಯೇ ಪೊಲೀಸರು ತಡೆದರು. ಈ ವೇಳೆ ಪೊಲೀಸರು ಹಾಗು ಬಿಜೆಪಿ ಕಾರ್ಯಕರ್ತರ ನಡುವೆ ನೂಕುನುಗ್ಗಲು ಉಂಟಾಯಿತು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.