ETV Bharat / state

ಟರ್ಫ್ ಕ್ಲಬ್ ಉಸ್ತುವಾರಿ ನೇಮಕಕ್ಕೆ ಸಿದ್ದರಾಮಯ್ಯ 1.30 ಕೋಟಿ ರೂ ಪಡೆದಿದ್ದರು: ಎನ್​ ಆರ್​ ರಮೇಶ್ ಆರೋಪ - ಈಟಿವಿ ಭಾರತ ಕನ್ನಡ

2014 ರಲ್ಲಿ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರು ಕಿಂಗ್ಸ್ ಕೋರ್ಟ್ ವಿವೇಕ್ ಎಂದೇ ಖ್ಯಾತಿ ಪಡೆದಿರುವ ಎಲ್. ವಿವೇಕಾನಂದ ಎಂಬುವರಿಂದ 1.30 ಕೋಟಿ ರೂಪಾಯಿ ಪಡೆದು ಬೆಂಗಳೂರು ಟರ್ಫ್ ಕ್ಲಬ್ ಉಸ್ತುವಾರಿ ಹುದ್ದೆಗೆ ನೇಮಕ ಮಾಡಿದ್ದಾರೆ ಎಂದು ಬಿಜೆಪಿ ವಕ್ತಾರ ಎನ್.ಆರ್. ರಮೇಶ್ ಆರೋಪಿಸಿದ್ದಾರೆ.

siddaramaiah-received-rs-1-dot-30-crore-for-the-appointment-of-turf-club-in-charge
ಟರ್ಫ್ ಕ್ಲಬ್ ಉಸ್ತುವಾರಿ ನೇಮಕಕ್ಕೆ 1.30 ಕೋಟಿ ರೂ ಪಡೆದಿದ್ದ ಸಿದ್ದರಾಮಯ್ಯ : ಎನ್ಆರ್ ರಮೇಶ್ ಆರೋಪ
author img

By

Published : Oct 30, 2022, 3:54 PM IST

ಬೆಂಗಳೂರು : ತಮ್ಮ ಆಡಳಿತ ಅವಧಿಯಲ್ಲಿ ಪ್ರಭಾವಿ ಹುದ್ದೆಗೆ ನೇಮಕಾತಿ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚೆಕ್ ಮೂಲಕ ಹಣ ಪಡೆದಿದ್ದಾರೆ ಎಂ.ದು ಆರೋಪವನ್ನು ಬಿಜೆಪಿ ವಕ್ತಾರರು ಮಾಡಿದ್ದಾರೆ. ಈ ಗಂಭೀರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಬಿಜೆಪಿ ವಕ್ತಾರ ಎನ್.ಆರ್. ರಮೇಶ್ ಒತ್ತಾಯಿಸಿದ್ದಾರೆ.

ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ದಾಖಲೆ ಬಿಡುಗಡೆಗೊಳಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ರಮೇಶ್, 2014 ರಲ್ಲಿ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರು ಕಿಂಗ್ಸ್ ಕೋರ್ಟ್ ವಿವೇಕ್ ಎಂದೇ ಖ್ಯಾತಿ ಪಡೆದಿರುವ ಎಲ್. ವಿವೇಕಾನಂದ ಅವರಿಂದ 1 ಕೋಟಿ 30 ಲಕ್ಷ ರೂಪಾಯಿ ಪಡೆದು ಬೆಂಗಳೂರು ಟರ್ಫ್ ಕ್ಲಬ್ ಉಸ್ತುವಾರಿ ಹುದ್ದೆಗೆ ನೇಮಕ ಮಾಡಿದ್ದಾರೆ ಎಂದು ಆರೋಪಿಸಿದರು.

3 ವರ್ಷಗಳ ಅವಧಿಗೆ ಬೆಂಗಳೂರು ಟರ್ಫ್ ಕ್ಲಬ್‌ ಕಾರ್ಯಕಾರಿ ಸಮಿತಿಯ ಸದಸ್ಯ ಸ್ಥಾನಕ್ಕೆ ನೇಮಕ ಮಾಡಿದ್ದರು. ಇದಕ್ಕೆ ಪುಷ್ಠಿ ನೀಡುವಂತೆ ಲೋಕಾಯುಕ್ತಕ್ಕೆ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ 2018 ರ ಏಪ್ರಿಲ್ 21 ರಂದು ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸಾಲ ಪಡೆದುಕೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ ಎಂದು ಹೇಳಿದರು.

ಕಿಕ್ ಬ್ಯಾಕ್ ಅಕ್ಷಮ್ಯ ಅಪರಾಧ : ಕೇಂದ್ರ ಸರ್ಕಾರದ ಗೃಹ ಇಲಾಖೆಯ ನಿಯಮ 4.1 ಸ್ಪಷ್ಟವಾಗಿ ಹೇಳುವಂತೆ ಮುಖ್ಯಮಂತ್ರಿ ಅಥವಾ ಸಚಿವರಾಗಲೀ ಯಾವುದೇ ವ್ಯಕ್ತಿಗೆ ಪ್ರಭಾವಿ ಹುದ್ದೆಯನ್ನು ನೀಡಿ, ಫಲಾನುಭವಿಯಿಂದ ಯಾವುದೇ ರೀತಿಯ ಉಡುಗೊರೆಗಳನ್ನಾಗಲಿ ಅಥವಾ ಯಾವುದೇ ರೂಪದಲ್ಲಿ ಹಣವನ್ನು ಸ್ವೀಕರಿಸುವುದು ಅಕ್ಷಮ್ಯ ಅಪರಾಧವಾಗಿದೆ ಎಂದು ಇದೇ ವೇಳೆ ಎನ್​ ಆರ್​ ರಮೇಶ್​ ಹೇಳಿದರು.

ಸಿಬಿಐ ತನಿಖೆಗೆ ವಹಿಸುವಂತೆ ಬೊಮ್ಮಾಯಿಗೆ ಮನವಿ : ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಕಲಂ ಅಡಿಯಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಭಾವಿ ವ್ಯಕ್ತಿಯೊಬ್ಬರಿಂದ 1 ಕೋಟಿ 30 ಲಕ್ಷ ರೂಪಾಯಿಗಳಷ್ಟು ಹಣವನ್ನು ಚೆಕ್ ಮೂಲಕ ಪಡೆದು ಕ್ಲಬ್ ನ ಕಾರ್ಯಕಾರಿ ಸಮಿತಿಯ ಸದಸ್ಯ ಸ್ಥಾನಕ್ಕೆ ನಿಯೋಜನೆ ಮಾಡಿರುವುದು ಕಾನೂನು ಬಾಹಿರವಾಗಿದೆ. ಹೀಗಾಗಿ ಕಿಕ್ ಬ್ಯಾಕ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ಅಥವಾ ಸಿಬಿಐ ತನಿಖೆಗೆ ವಹಿಸುವಂತೆ ದಾಖಲೆ ಸಮೇತ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿರುವುದಾಗಿ ರಮೇಶ್ ತಿಳಿಸಿದರು.

ಇದನ್ನೂ ಓದಿ : ಆಯ್ದ ಪತ್ರಕರ್ತರಿಗೆ ಗಿಫ್ಟ್ ಆಮಿಷ.. ಇದೊಂದು ಇಂಟೆನ್ಷನಲ್ ಬ್ರೈಬ್ ಎಂದ ಹೆಚ್. ವಿಶ್ವನಾಥ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.