ETV Bharat / state

ಮೈತ್ರಿ ವಿಚಾರದಲ್ಲಿ ವರಿಷ್ಠರ ನಿರ್ಧಾರಕ್ಕೆ ನಾವು ಬದ್ದ: ಬಿ.ಎಸ್‌.ಯಡಿಯೂರಪ್ಪ - ನವದೆಹಲಿಯಲ್ಲಿ ನಡೆಯುವ ಸಭೆ

ನವದೆಹಲಿಯಲ್ಲಿಂದು ನಡೆಯುವ ಸಭೆಯಲ್ಲಿ ಜೆಡಿಎಸ್‌ ಜೊತೆಗಿನ ಮೈತ್ರಿ ವಿಚಾರದ ಚರ್ಚೆ ನಡೆಯಲಿದೆ. ವರಿಷ್ಠರ ನಿರ್ಧಾರವೇ ನಮ್ಮ ನಿರ್ಧಾರ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.

Former CM Yediyurappa  BJP and JDS alliance  alliance will be discussed in today  ಸಭೆಯಲ್ಲಿ ಮೈತ್ರಿ ವಿಚಾರದ ಚರ್ಚೆ  ವರಿಷ್ಠರ ನಿರ್ಧಾರಕ್ಕೆ ನಾವು ಬದ್ದ  ನವದೆಹಲಿಯಲ್ಲಿ ನಡೆಯುವ ಸಭೆ  ಸಭೆಯಲ್ಲಿ ವರಿಷ್ಠರ ನಿರ್ಧಾರವೇ ನಮ್ಮ ನಿರ್ಧಾರ
ಇಂದು ನಡೆಯುವ ಸಭೆಯಲ್ಲಿ ಮೈತ್ರಿ ವಿಚಾರದ ಚರ್ಚೆ, ವರಿಷ್ಠರ ನಿರ್ಧಾರಕ್ಕೆ ನಾವು ಬದ್ದ
author img

By ETV Bharat Karnataka Team

Published : Sep 13, 2023, 11:33 AM IST

ಬೆಂಗಳೂರು: ಪಕ್ಷದ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ದೆಹಲಿಗೆ ತೆರಳುತ್ತಿದ್ದಾರೆ. ಈ ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರದ ಬಗ್ಗೆಯೂ ಚರ್ಚೆಯಾಗಲಿದೆ ಎಂದು ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಹಾಗು ಕೇಂದ್ರ ಚುನಾವಣಾ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ನವದೆಹಲಿಗೆ ತೆರಳುವ ಮುನ್ನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸ ಧವಳಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್​ವೈ, ದೆಹಲಿಯಲ್ಲಿಂದು ಪಕ್ಷದ ಚುನಾವಣೆ ಸಮಿತಿ ಸಭೆ ಇದೆ. ನಾನು ಈ ಸಭೆಗೆ ಅಪೇಕ್ಷಿತನಿರುವುದರಿಂದ ಇವತ್ತು ದೆಹಲಿಗೆ ಹೋಗಿ ನಾಳೆ ರಾಜ್ಯಕ್ಕೆ ವಾಪಸ್ ಬರುತ್ತೇನೆ. ಸಭೆಯಲ್ಲಿ ಲೋಕಸಭಾ ಚುನಾವಣೆ ಬಗ್ಗೆಯೂ ಚುನಾವಣೆ ಚರ್ಚೆ ಆಗಬಹುದು. ಜೆಡಿಎಸ್ ಜೊತೆಗಿನ ಮೈತ್ರಿ ಕುರಿತು ಅಂತಿಮವಾಗಿ ಅಮಿತ್ ಶಾ ಹಾಗೂ ನರೇಂದ್ರ ಮೋದಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಅದಕ್ಕೆ ನಾವು ಬದ್ಧ ಎಂದರು.

ಇಂದು ಕಾವೇರಿ ನೀರಿನ ಬಗ್ಗೆ ಸರ್ವಪಕ್ಷ ಸಭೆ ಕರೆದಿದ್ದಾರೆ. ನನಗೂ ಆಹ್ವಾನ ನೀಡಿದ್ದರು. ಆದರೆ ಅನಿವಾರ್ಯ ಕಾರಣದಿಂದ ದೆಹಲಿಗೆ ಹೋಗಬೇಕಾಗಿದೆ. ಹೀಗಾಗಿ ಸಭೆಗೆ ಬರಲಾಗುವುದಿಲ್ಲ ಎಂದು ತಿಳಿಸಿದ್ದೇನೆ. ಇತರ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಬಿಜೆಪಿ - ಜೆಡಿಎಸ್ ಮೈತ್ರಿ ಮಾತುಕತೆ: ಸೆ.20 ರೊಳಗೆ ಅಂತಿಮ?

ರಾಜ್ಯಾದ್ಯಂತ ಮುಂದಿನ ಹೋರಾಟದ ಬಗ್ಗೆ ತೀರ್ಮಾನ: ಸಿಎಂ ಸಿದ್ದರಾಮಯ್ಯ ಸರ್ಕಾರ ಇಷ್ಟು ಬೇಗ ಜನಪ್ರಿಯತೆ ಕಳೆದುಕೊಳ್ಳುತ್ತದೆ ಎಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ ಎಂದು ಯಡಿಯೂರಪ್ಪ ನಿನ್ನೆ (ಮಂಗಳವಾರ) ಹೇಳಿದ್ದರು. ತಮ್ಮ ನಿವಾಸದಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯಾದ್ಯಂತ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತವೆ. ಕಡಿಮೆ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ರಾಜ್ಯದ ಜನ ಛೀಮಾರಿ ಹಾಕುತ್ತಿದ್ದಾರೆ ಎಂದಿದ್ದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ಕರೆದಿದ್ದ ರಾಜ್ಯ ಪದಾಧಿಕಾರಿಗಳ ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಗೌರಿ ಗಣೇಶ ಹಬ್ಬದ ನಂತರ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ಇಂದು ಕರೆದಿದ್ದ ಸಭೆಯಲ್ಲಿ ಅನೇಕ ವಿಚಾರಗಳು ಚರ್ಚೆ ಆದವು. ಬುಧವಾರ ದೆಹಲಿಗೆ ಹೋಗುತ್ತಿದ್ದೇನೆ. ಕೇಂದ್ರದ ಚುನಾವಣಾ ಸಮಿತಿ ಸಭೆ ದೆಹಲಿಯಲ್ಲಿ ಇದೆ. ಹಾಗಾಗಿ ದೆಹಲಿಗೆ ತೆರಳುತ್ತಿದ್ದೇನೆ. ನಮ್ಮ ವರಿಷ್ಠರನ್ನು ಭೇಟಿ ಮಾಡ್ತೇನೆ. ಏನು ಚರ್ಚೆ ಆಗುತ್ತೋ ನೋಡಬೇಕು ಎಂದು ಹೇಳಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.