ETV Bharat / state

ಖರ್ಗೆ, ಖಂಡ್ರೆ ಕುರಿತು ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆಗೆ ಆಪ್​ನಿಂದಲೂ ಖಂಡನೆ: ಕೈ ನಾಯಕರ ಕ್ಷಮೆಯಾಚಿಸಿದ ಬಿಜೆಪಿ - ಶಾಸಕ ಆರಗ ಜ್ಞಾನೇಂದ್ರ ಅವರ ಆಕ್ಷೇಪಾರ್ಹ ಹೇಳಿಕೆ

ಶಾಸಕ ಆರಗ ಜ್ಞಾನೇಂದ್ರ ಅವರು ಎಐಸಿಸಿ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಈಶ್ವರ್ ಖಂಡ್ರೆ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವುದಕ್ಕೆ ಬಿಜೆಪಿ ಕ್ಷಮೆಯಾಚಿಸಿದೆ.​

bjp-apologizes-to-congress-leaders-for-araga-jnanendra-statement
ಖರ್ಗೆ, ಖಂಡ್ರೆ ಕುರಿತು ಆರಗ ಜ್ಞಾನೇಂದ್ರ ಆಕ್ಷೇಪಾರ್ಹ ಹೇಳಿಕೆ: ಕೈ ನಾಯಕರ ಕ್ಷಮೆ ಯಾಚಿಸಿದ ಬಿಜೆಪಿ
author img

By

Published : Aug 3, 2023, 3:29 PM IST

Updated : Aug 3, 2023, 5:10 PM IST

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ , ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿಕೆ

ಬೆಂಗಳೂರು : ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ಇತ್ತೀಚೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದ ಹೋರಾಟ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಈಶ್ವರ್​ ಖಂಡ್ರೆ ಅವರ ಕುರಿತು ಶಾಸಕ ಆರಗ ಜ್ಞಾನೇಂದ್ರ ಅವರ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಂಬಂಧ ಬಿಜೆಪಿ ಕ್ಷಮೆಯಾಚಿಸಿದೆ.

ಕುಮಾರಪಾರ್ಕ್​ನಲ್ಲಿರುವ ಗಾಂಧಿ ಭವನದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಶಾಸಕ ಆರಗ ಜ್ಞಾನೇಂದ್ರ ಹೇಳಿಕೆಗೆ ಪಕ್ಷದ ಪರವಾಗಿ ಮಲ್ಲಿಕಾರ್ಜುನ ಖರ್ಗೆ ಹಾಗು ಈಶ್ವರ್​ ಖಂಡ್ರೆ ಅವರ ಕ್ಷಮೆಯಾಚಿಸಿದರು. ಮೊನ್ನೆ ಮಾಜಿ ಗೃಹ ಸಚಿವ, ಹಾಲಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡುವ ಭರದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಈಶ್ವರ ಖಂಡ್ರೆ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಗುಲ್ಬರ್ಗಾದಲ್ಲಿ ಬಿಸಿಲು ಹೆಚ್ಚು, ಮಲೆನಾಡಿನ ಪರಿಸರದ ಬಗ್ಗೆ ಗೊತ್ತಿಲ್ಲ, ಹಾಗಾಗಿ ಮರ ಗಿಡ ನೆರಳು ಗೊತ್ತಿಲ್ಲ ಎನ್ನುವ ಭರದಲ್ಲಿ ಆ ರೀತಿ ಹೇಳಿಕೆ ನೀಡಿದ್ದರು. ಇದರಿಂದಲೇ ಅಲ್ಲಿ ಬಿಸಿಲು ಹೆಚ್ಚು ಎಂದು ಗೊತ್ತಾಗುತ್ತದೆ ಎಂದು ಮಾತನಾಡಿದ್ದರು. ಆದರೆ ಬಿಜೆಪಿ ವ್ಯಕ್ತಿಯ ಬಣ್ಣ ನೋಡಿ ನಿರ್ಧಾರ ಕೈಗೊಳ್ಳುವ ಪಕ್ಷವಲ್ಲ, ವ್ಯಕ್ತಿಗಳ ಗುಣಾವಗುಣಗಳನ್ನು ನೋಡಿ ನಿರ್ಧಾರ ತೆಗೆದುಕೊಳ್ಳುವ ಪಕ್ಷ ಎಂದು ಸ್ಪಷ್ಟೀಕರಣ ನೀಡಿದರು.

ಮಾತಿನ ಭರದಲ್ಲಿ ನಮ್ಮ ಶಾಸಕ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ ಅಷ್ಟೇ. ಇದನ್ನೇ ಕಾಂಗ್ರೆಸ್​ನವರು ಏನೋ ಬಹಳ ದೊಡ್ಡ ತಪ್ಪು ಮಾಡಿದ್ದಾರೆ ಎಂದು ಬಿಂಬಿಸುತ್ತ ಆರಗ ಜ್ಞಾನೇಂದ್ರ ದಲಿತರಿಗೆ ಅವಮಾನ ಮಾಡಿದರು. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅವಮಾನ ಮಾಡಿದರು ಎಂದು ದೊಡ್ಡ ವಿವಾದ ಮಾಡುತ್ತಿದ್ದಾರೆ. ಆದರೆ ಮಲ್ಲಿಕಾರ್ಜುನ ಖರ್ಗೆ ಇರಬಹುದು, ಈಶ್ವರ ಖಂಡ್ರೆ ಇರಬಹುದು ಅವರ ಕುರಿತು ಮಾತನಾಡಿದ ಬಗ್ಗೆ ಪಕ್ಷದ ವತಿಯಿಂದ ಕ್ಷಮೆ ಯಾಚಿಸುತ್ತೇನೆ. ಇದನ್ನು ದೊಡ್ಡ ವಿಷಯ ಮಾಡಬೇಕಿಲ್ಲ. ಅವರು ಎತ್ತಿರುವ ವಿಷಯದ ಬಗ್ಗೆ ಚರ್ಚೆ ಮಾಡಿ ಆ ವಿಚಾರದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿ. ಆದರೆ ಅವರ ಬಗ್ಗೆ ಮಾತನಾಡಿದ್ದರಿಂದ ಅವರಿಗೆ ಅವಮಾನವಾಗಿದ್ದಲ್ಲಿ ಪಕ್ಷದ ವತಿಯಿಂದ ಕ್ಷಮೆ ಯಾಚಿಸುತ್ತೇನೆ ಎಂದು ತಿಳಿಸಿದರು.

ಆರಗ ಜ್ಞಾನೇಂದ್ರ ಹೇಳಿಕೆಗೆ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಖಂಡನೆ : ರಾಷ್ಟ್ರದ ದಲಿತ ನಾಯಕ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತ ಆರಗ ಜ್ಞಾನೇಂದ್ರ ಮಾತುಗಳು ದುಃಖದ ಹಾಗೂ ಸಹಿಸದ ವಿಚಾರ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಖಂಡನೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಮಾತನಾಡಿದ ಅವರು, ಕುಲ ಕುಲವೆಂದು ಹೊಡೆದಾಡಬೇಡಿ ಎಂಬ ಕನಕದಾಸರ ನುಡಿಯಂತೆ ನಾವೆಲ್ಲರೂ ದೇಶದ ಅಸ್ಪೃಶ್ಯತೆಯನ್ನು ನಿವಾರಿಸುವ, ತೊಡೆದು ಹಾಕುವ ,ಸರ್ವರಿಗೂ ಸಮಪಾಲು- ಸಮ ಬಾಳನ್ನು ನೀಡುವ ಕಾಲಘಟ್ಟದಲ್ಲಿ ಇದ್ದೇವೆ. ಆದರೆ ಮನಸ್ಮೃತಿಯ ಹರಿಕಾರರಂತೆ ಆರಗ ಜ್ಞಾನೇಂದ್ರ ಹೇಳಿಕೆ ನೀಡಿರುವುದು ಇವರ ಸಂಸ್ಕೃತಿಯನ್ನು ತೋರಿಸುತ್ತದೆ. ಇದು ನಮ್ಮ ಸಂವಿಧಾನಕ್ಕೆ, ರಾಷ್ಟ್ರದ ದಲಿತ ಸಮುದಾಯಗಳಿಗೆ ಹಾಗೂ ಉತ್ತರ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ. ಯಾವುದೇ ಕಾರಣಕ್ಕೂ ಇವರ ಹೇಳಿಕೆ ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್ ಸರ್ಕಾರವು ಇವರ ಮೇಲೆ ಮೊಕದ್ದಮೆಯನ್ನು ಹಾಕಿ, ಇವರ ವಿರುದ್ಧ ಎಫ್ಐಆರ್ ಮಾಡಬೇಕಿದೆ. ಇವರ ಶಾಸಕತ್ವವನ್ನು ಅನೂರ್ಜಿತಗೊಳಿಸುವಂತಹ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಂಡಲ್ಲಿ ಮುಂದಿನ ದಿನಮಾನಗಳಲ್ಲಿ ಯಾರೂ ದಲಿತ ವರ್ಗಗಳನ್ನು ತುಚ್ಛವಾಗಿ ನೋಡುವುದು, ಮಾತನಾಡುವುದು ತಪ್ಪುತ್ತದೆ. ಸರ್ಕಾರ ಈ ಕೂಡಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಬೇಕೆಂದು ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು.

ಇದನ್ನೂ ಓದಿ : ದಲಿತರಿಗೆ ರಾಜ್ಯಾಧ್ಯಕ್ಷ ಸ್ಥಾನ, ಬಿಜೆಪಿಯಲ್ಲಿ ಹೊಸ ಚರ್ಚೆ ಆರಂಭ: ಯಾರಾಗ್ತಾರೆ ರಾಜ್ಯ ಬಿಜೆಪಿ ಸಾರಥಿ?

Last Updated : Aug 3, 2023, 5:10 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.