ಬೆಂಗಳೂರು : ನಾಮಪತ್ರ ಸಲ್ಲಿಕೆಗೆ ಆಗಮಿಸಲು ಬಿಜೆಪಿ ಅಭ್ಯರ್ಥಿಗೆ ಹೆಲಿಕ್ಯಾಪ್ಟರ್ ವ್ಯವಸ್ಥೆ ಮಾಡಲಾಗಿದೆ. ಕೊನೆ ಕ್ಷಣದಲ್ಲಿ ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಹೆಲಿಕ್ಯಾಪ್ಟರ್ ಮೂಲಕ ಅಭ್ಯರ್ಥಿಯನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ. ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಇಂದು ಬೆಳಗ್ಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಬಿಜೆಪಿ ಅಭ್ಯರ್ಥಿ ಹೇಮಲತಾ ನಾಯಕ್ ಕರೆತರಲು ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ.
ಕೊಪ್ಪಳದಿಂದ ಚಿತ್ರದುರ್ಗದವರೆಗೆ ಕಾರಿನಲ್ಲಿ ಬಂದಿರುವ ಹೇಮಲತಾ ಅವರು ಬೆಂಗಳೂರು ತಲುಪುವುದು ತಡವಾಗುವ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಆಗಮಿಸಲಿದ್ದಾರೆ. ಚಿತ್ರದುರ್ಗದಿಂದ ಬೆಂಗಳೂರಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸುತ್ತಿರುವ ಹೇಮಲತಾ ನಾಯಕ್ ಜಕ್ಕೂರು ಏರೋಡ್ರಂನಲ್ಲಿ ಇಳಿದು ವಿಧಾನಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಮಧ್ಯಾಹ್ನ 3 ಗಂಟೆವರೆಗೆ ಕಾಲಾವಕಾಶವಿದೆ. ಹೆಚ್ಚುವರಿ ಅಭ್ಯರ್ಥಿಯಾಗಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ಅವರನ್ನು ಆಯ್ಕೆ ಮಾಡಲಾಗಿದೆ. ದಾಖಲೆಗಳನ್ನು ಸಿದ್ಧಪಡಿಸಿಕೊಂಡಿರುವಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ಸಮಯಕ್ಕೆ ಸರಿಯಾಗಿ ಹೇಮಲತಾ ನಾಯಕ್ ಆಗಮಿಸದೇ ಇದ್ದಲ್ಲಿ ಅಥವಾ ಹವಾಮಾನ ವೈಪರೀತ್ಯದಿಂದ ಬದಲಾವಣೆಯಾದಲ್ಲಿ ಗೀತಾ ವಿವೇಕಾನಂದ ಅವರಿಂದ ನಾಮಪತ್ರ ಸಲ್ಲಿಕೆ ಮಾಡಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಓದಿ :ತಪ್ಪಿದ ಪರಿಷತ್ ಪ್ರವೇಶ ಅವಕಾಶ.. ಸಹನೆ, ಸೌಜನ್ಯದಿಂದ ವರ್ತಿಸಲು ಬೆಂಬಲಿಗರಿಗೆ ಬಿ.ವೈ ವಿಜಯೇಂದ್ರ ಮನವಿ