ETV Bharat / state

ಡಬಲ್ ಎಂಜಿನ್ ಸರ್ಕಾರದ ಯೋಜನೆಗಳನ್ನು ಮುಂದಿಟ್ಟು ಬಿಜೆಪಿ ಮತಬೇಟೆ: ಕೇಂದ್ರದ ಪುರಸ್ಕೃತ ಯೋಜನೆ ಹಣ ಏನಾಗಿದೆ? - double engine govt schemes

ಆಯುಷ್ಮಾನ್ ಭಾರತ್ ಯೋಜನೆ, ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ, ಜಲಜೀವನ ಮಿಷನ್ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗಳನ್ನು ಜನರ ಮುಂದೆ ಇಟ್ಟು ಬಿಜೆಪಿ ಮತ ಕೇಳುತ್ತಿದೆ. ಆದರೆ ಬಿಜೆಪಿ ಸರ್ಕಾರದ ವೈಫಲ್ಯ, ಭ್ರಷ್ಟಾಚಾರ ಹಾಗೂ ತಮ್ಮ ಪಕ್ಷದ ಗ್ಯಾರಂಟಿ ಕಾರ್ಡ್ ಜನರಿಗೆ ತಲುಪಿಸಿ ಕಾಂಗ್ರೆಸ್ ಮತಸೆಳೆಯುವಲ್ಲಿ ಬ್ಯುಜಿಯಾಗಿದೆ.

bjp
ಬಿಜೆಪಿ
author img

By

Published : Apr 28, 2023, 7:43 AM IST

ಬೆಂಗಳೂರು: ರಾಜ್ಯ ಚುನಾವಣೆ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಈಗಾಗಲೇ ಅಭ್ಯರ್ಥಿಗಳು ಬಿರುಸಿನ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಡಬಲ್ ಎಂಜಿನ್ ಸರ್ಕಾರದ ಅಗತ್ಯತೆ ಮೇಲೆ ಬಿಜೆಪಿ ಚುನಾವಣೆ ರಣಕಣಕ್ಕೆ ಇಳಿದಿದೆ. ಜೊತೆಗೆ ಮೋದಿ ಸರ್ಕಾರದ ಸಾಧನೆಯನ್ನು ‌ಮುಂದಿಟ್ಟುಕೊಂಡು ಬಿಜೆಪಿ ಚುನಾವಣೆ ಎದುರಿಸುತ್ತಿದೆ. ಅಷ್ಟಕ್ಕೂ ಮೋದಿ ಸರ್ಕಾರದ ಯಾವೆಲ್ಲಾ ಯೋಜನೆಗಳನ್ನು ಮುಂದಿಟ್ಟು ಬಿಜೆಪಿ ಕಣಕ್ಕಿಳಿಯುತ್ತಿದೆ ಎಂಬ ವರದಿ ಇಲ್ಲಿದೆ.

ರಾಜ್ಯದಲ್ಲಿ ಚುನಾವಣೆ ಅಖಾಡ ರಂಗೇರುತ್ತಿದೆ. ಈಗಾಗಲೇ ಅಭ್ಯರ್ಥಿಗಳು ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಮೂರು ರಾಜಕೀಯ ಪಕ್ಷಗಳು ತಮ್ಮ ತಮ್ಮ ಅಜೆಂಡಾ, ಭರವಸೆಗಳೊಂದಿಗೆ ಮತದಾರರನ್ನು ಸೆಳೆಯುವ ಕೆಲಸ ಮಾಡುತ್ತಿವೆ. ಇತ್ತ ಕಾಂಗ್ರೆಸ್ ಬಿಜೆಪಿ ಸರ್ಕಾರದ ವೈಫಲ್ಯ, ಭ್ರಷ್ಟಾಚಾರ ಹಾಗೂ ಗ್ಯಾರಂಟಿ ಕಾರ್ಡ್​​ನೊಂದಿಗೆ ಚುನಾವಣೆ ಎದುರಿಸುತ್ತಿದ್ದರೆ, ಅತ್ತ ಬಿಜೆಪಿ ಮೋದಿ ಸರ್ಕಾರದ ಯೋಜನೆ, ತಮ್ಮ ಸರ್ಕಾರದ ಯೋಜನೆ, ಡಬಲ್ ಇಂಜಿನ್ ಸರ್ಕಾರದ ಸಾಧನೆಗಳನ್ನು ಜನರ ಮುಂದಿಡುತ್ತಿದ್ದಾರೆ. ಆದರಲ್ಲೂ ಬಿಜೆಪಿ ಕೇಂದ್ರ ಸರ್ಕಾರದ ಕೆಲ ಯೋಜನೆಗಳನ್ನು ಜನರ ಮುಂದೆ ಇಟ್ಟು ಮತಸೆಳೆಯಲು ಮುಂದಾಗಿದೆ.

ಆಯುಷ್ಮಾನ್ ಭಾರತ್ ಯೋಜನೆ: ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆ ಆಯುಷ್ಮಾನ್ ಭಾರತ್ ಅನುಕೂಲಗಳ ಬಗ್ಗೆ ರಾಜ್ಯ ಬಿಜೆಪಿ ಜನರ ಮತಸೆಳೆಯಲು ಮುಂದಾಗಿದೆ. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿ ರಾಜ್ಯ ಪ್ರವಾಸದ ವೇಳೆ ಆಯಷ್ಮಾನ್ ಭಾರತ್ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದರು. ಆಯುಷ್ಮಾನ್ ಭಾರತದಿಂದ ಹೇಗೆ ರಾಜ್ಯದ ಬಡವರು ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯಸೇವೆ ನೀಡಲಾಗುತ್ತಿದೆ ಎಂಬುದನ್ನು ಜನರ ಮುಂದೆ ಇಡುತ್ತಿದೆ. ಆಯುಷ್ಮಾನ್ ಭಾರತ್ ಯೋಜನೆ ಮೂಲಕ ರಾಜ್ಯದಲ್ಲಿ ಸುಮಾರು 30 ಲಕ್ಷಕ್ಕೂ ಅಧಿಕ ಬಡವರಿಗೆ ಉಚಿತ ಚಿಕಿತ್ಸೆ ನೀಡಿದೆ. ಆ ಮೂಲಕ ಬಡವರಿಗೆ ಸುಮಾರು 4,000 ಕೋಟಿ ರೂ.ರಷ್ಟು ಉಳಿತಾಯವಾಗಿದೆ. ಅದನ್ನೇ ಹೆಚ್ಚೆಚ್ಚು ರಾಜ್ಯದ ಜನರಿಗೆ ಮನವರಿಕೆ ಮಾಡಲು ಕಾರ್ಯಕರ್ತರಿಗೆ ತಿಳಿಸಲಾಗಿದೆ.

ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ: ಕೇಂದ್ರ ಸರ್ಕಾರದ ಮತ್ತೊಂದು ಜನಪ್ರಿಯ ಯೋಜನೆ ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೂಲಕ ರಾಜ್ಯದ ರೈತರ ಮನಗೆಲ್ಲಲು ಬಿಜೆಪಿ ಮುಂದಾಗಿದೆ. ರೈತರಿಗೆ ನಿಶ್ಚಿತ ಆದಾಯ ಕಲ್ಪಿಸುವ ಯೋಜನೆ ಮೂಲಕ ಪ್ರತಿ ರೈತ ಕುಟುಂಬಕ್ಕೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ರೂ.ಗಳನ್ನು ನೀಡಲಾಗುತ್ತದೆ. ಒಂದು ಹಣಕಾಸು ವರ್ಷದಲ್ಲಿ ಮೂರು ಬಾರಿ ನಿಶ್ಚಿತ ಆದಾಯ ನೀಡಲಾಗುತ್ತದೆ. ಅಲ್ಲಿಗೆ, ಒಂದು ಫಲಾನುಭವಿ ರೈತ ಕುಟುಂಬಕ್ಕೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ರೂ.ಗಳಂತೆ ಒಂದು ವರ್ಷದಲ್ಲಿ 6 ಸಾವಿರ ರೂ.ಗಳು ಸಂದಾಯವಾಗುತ್ತದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರವೂ ಎರಡು ಕಂತಿನಂತೆ ವರ್ಷಕ್ಕೆ 4,000 ಸಹಾಯಧನ ನೀಡುತ್ತಿದೆ. ಈ ಯೋಜನೆ ಮೂಲಕ ಸುಮಾರು 55 ಲಕ್ಷ ರಾಜ್ಯದ ರೈತರು 10 ಸಾವಿರ ರೂ. ಸಹಾಯಧನ ಪಡೆದಿದ್ದಾರೆ. ಈ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ರೈತ ಸಮುದಾಯದ ಮತ ಸೆಳೆಯಲು ಬಿಜೆಪಿ ಮುಂದಾಗಿದೆ.

ಜಲಜೀವನ ಮಿಷನ್ ಯೋಜನೆ: ಪ್ರಧಾನಿ ಮೋದಿ ಮಹತ್ವಾಕಾಂಕ್ಷೆ ಜಲಜೀವನ್ ಯೋಜನೆ ಮೂಲಕ ರಾಜ್ಯದ ಗ್ರಾಮೀಣ ಭಾಗದ ಜನರ ಮತಸೆಳೆಯಲು ರಾಜ್ಯ ಬಿಜೆಪಿ ಮುಂದಾಗಿದೆ. ಮನೆಗಳಿಗೆ ನಲ್ಲಿ ನೀರು ಒದಗಿಸುವ ಈ ಯೋಜನೆಗೆ ರಾಜ್ಯ ಸರ್ಕಾರ ತನ್ನ ಕೊಡುಗೆಯನ್ನೂ ನೀಡುತ್ತಿದೆ. ಜಲ ಜೀವನ ಯೋಜನೆಯಡಿ ರಾಜ್ಯದ ಸುಮಾರು 30 ಲಕ್ಷ ಗ್ರಾಮೀಣ ಭಾಗದ ಮನೆಗಳಿಗೆ ಕೊಳವೆ ನೀರನ್ನು ಸಂಪರ್ಕಿಸಲಾಗಿದೆ. ಯಾವ ರೀತಿ ಡಬಲ್ ಇಂಜಿನ್ ಸರ್ಕಾರದ ಮೂಲಕ ಕೇಂದ್ರದ ಬಿಜೆಪಿ ಹಾಗೂ ಬಿಜೆಪಿ ಸರ್ಕಾರ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ ಎಂಬುದನ್ನು ಚುನಾವಣಾ ವಿಷಯವಾಗಿ ಬಿಜೆಪಿ ಜನರ ಮುಂದೆ ಇಡುತ್ತಿದೆ. ಈ ಬಗ್ಗೆ ಪ್ರಧಾನಿ ಮೋದಿ ಹಾಗು ಅಮಿತ್ ಶಾ ತಮ್ಮ ಚುನಾವಣಾ ರ್ಯಾಲಿಗಳಲ್ಲಿ ಈಗಾಗಲೇ ಉಲ್ಲೇಖಿಸುತ್ತಿದ್ದಾರೆ.

ಕಿಸಾನ್ ಕ್ರೆಡಿಟ್ ಕಾರ್ಡ್: ರೈತರ ಅನುಕೂಲಕ್ಕೆ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮತ್ತೊಂದು ಜನಪ್ರಿಯ ಯೋಜನೆ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ. ಈ ಯೋಜನೆಯನ್ನೂ ರಾಜ್ಯ ಬಿಜೆಪಿ ರೈತರ ಮನಗೆಲ್ಲಲು ಮತ ಅಸ್ತ್ರವಾಗಿ ಬಳಸುತ್ತಿದೆ.‌ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ ಮೂಲಕ ರೈತರಿಗೆ 'ಕ್ರೆಡಿಟ್ ಕಾರ್ಡ್' ನೀಡಲಾಗುತ್ತದೆ. ಈ ಕಾರ್ಡ್ ಮೂಲಕ ಅವರು ತಮ್ಮ ಅಗತ್ಯಕ್ಕೆ ಅನುಗುಣವಾಗಿ 1.6 ಲಕ್ಷ ರೂಪಾಯಿವರೆಗೆ ಸಾಲ ಪಡೆಯಬಹುದು. ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಪಡೆಯಬಹುದಾಗಿದೆ. ಅಂದರೆ, ತಿಂಗಳಿಗೆ ಶೇ 0.5ಕ್ಕಿಂತಲೂ ಕಡಿಮೆ ಬಡ್ಡಿಗೆ ಸಾಲ ಲಭ್ಯವಾಗುತ್ತೆ. ಇದರ ಜೊತೆಗೆ ಮೀನುಗಾರರಿಗೆ ಕಿಸಾನ್‌ ಕ್ರೆಡಿಟ್ ಕಾರ್ಡ್ ಸೇವೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ ಮೂಲಕ ರಾಜ್ಯದ ಜನರ ಮತಬೇಟೆ ಮಾಡಲು ಬಿಜೆಪಿ ಕಸರತ್ತು ನಡೆಸುತ್ತಿದೆ.

ಕೇಂದ್ರ ಪುರಸ್ಕೃತ ಯೋಜನೆ ಪ್ರಗತಿ ಏನಿದೆ?: ವಿವಿಧ ಇಲಾಖೆಗಳಲ್ಲಿ ಕೇಂದ್ರ ಅನುದಾನಿತ ಯೋಜನೆಗಳು ಜಾರಿಯಲ್ಲಿವೆ. ಈ ಯೋಜನೆಗಳಿಗಾಗಿ ಕೇಂದ್ರ ಸರ್ಕಾರ 2022-23ರಲ್ಲಿ ರಾಜ್ಯಕ್ಕೆ ಸುಮಾರು 21,435 ಕೋಟಿ ರೂ. ಅನುದಾನ ಹಂಚಿಕೆ ಮಾಡಿತ್ತು. 2022-23ರಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಡಿ ರಾಜ್ಯ ಸುಮಾರು 76% ಪ್ರಗತಿ ಕಂಡಿದೆ.

ಆದರೆ ಸಾಂಖ್ಯಿಕ ಇಲಾಖೆ ನೀಡಿರುವ ಅಂಕಿ ಅಂಶದಂತೆ 2022-23ರಲ್ಲಿ ಕೇಂದ್ರ ಸರ್ಕಾರ ವಿವಿಧ ಪುರಸ್ಕೃತ ಯೋಜನೆಗಳಿಗೆ ತನ್ನ ಪಾಲಿನ 21,435 ಕೋಟಿ ರೂ. ಅನುದಾನದ ಪೈಕಿ ರಾಜ್ಯಕ್ಕೆ ಬಿಡುಗಡೆ ಮಾಡಿದ್ದು 10,506 ಕೋಟಿ ರೂ. ಮಾತ್ರ. ಉಳಿದಂತೆ 10,929 ಕೋಟಿ ರೂ. ಅನುದಾನ ಇನ್ನೂ ಬಾಕಿ ಇದೆ. ರಾಜ್ಯ ಸರ್ಕಾರ ತನ್ನ ಪಾಲಿನಲ್ಲಿ ಹಂಚಿದ್ದ 17,082 ಕೋಟಿ ರೂ. ಪೈಕಿ 14,281 ಕೋಟಿ ರೂ. ಬಿಡುಗಡೆ ಮಾಡಿದೆ. ಆದರೆ ಕೇಂದ್ರ ಸರ್ಕಾರ ತನ್ನ ಪಾಲಿನ ಅರ್ಧಕ್ಕೂ ಹೆಚ್ಚಿನ ಪಾಲನ್ನು ಬಿಡುಗಡೆ ಮಾಡಿಲ್ಲ.

ಇದನ್ನೂಓದಿ: ಹುಬ್ಬಳ್ಳಿಯಲ್ಲಿ ಸ್ಮೃತಿ ಇರಾನಿ ರೋಡ್​​ ಶೋ ವೇಳೆ ದಿಢೀರ್​ ಕಾಣಿಸಿಕೊಂಡ 'ಶೆಟ್ಟರ್'!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.