ಬೆಂಗಳೂರು: ವಿಧಾನ ಪರಿಷತ್ ಚುನಾವಣಾ ಕಣ ರಂಗೇರಿದ್ದು, ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿ ನಡೆಯುತ್ತಿದೆ. ಇದರ ನಡುವೆ, ಮಂಡ್ಯ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರು ಪಕ್ಷೇತರ ಸಂಸದೆ ಸುಮಲತಾ ಅಂಬರೀಷ್ ಭೇಟಿ ಮಾಡಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು, ಮಂಡ್ಯ ಜಿಲ್ಲಾ ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಮಂಜು ಅವರೊಂದಿಗೆ ಜೆ.ಪಿ ನಗರದಲ್ಲಿರುವ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ, ಅಭ್ಯರ್ಥಿಯನ್ನು ಪರಿಚಯ ಮಾಡಿಕೊಟ್ಟು ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕೋರಿದರು.
ನಿನ್ನೆಯಷ್ಟೇ ಬಿಜೆಪಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಸಹಕಾರ ಕೋರಿದ್ದ ಬೂಕಹಳ್ಳಿ ಮಂಜು, ನಂತರ ನಿರ್ಮಲಾನಂದ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದರು. ಇಂದು ಮಂಡ್ಯ ಸಂಸದೆ ಭೇಟಿ ಮಾಡಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಹಾಸನ ಅಂದ್ರೆ ಬಿಜೆಪಿಯವರಿಗೆ ವಾಂತಿ, ಭೇದಿ ಶುರುವಾಗುತ್ತೆ: ಹೆಚ್.ಡಿ.ರೇವಣ್ಣ