ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭೆ ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ್ ಹಾಗೂ ಸಚಿವ ಆರ್ ಅಶೋಕ್ ಅವರೊಂದಿಗೆ ಆಗಮಿಸಿದ ಮುನಿರತ್ನ ಬೆಳಗ್ಗೆ 11.15ಕ್ಕೆ ನಾಮಪತ್ರ ಸಲ್ಲಿಸಿದರು.
ಇವರೊಂದಿಗೆ ನೂರಾರು ಕಾರ್ಯಕರ್ತರು ಕೂಡ ನಾಮಪತ್ರ ಸಲ್ಲಿಕೆ ಕೇಂದ್ರದತ್ತ ಮೆರವಣಿಗೆಯಲ್ಲಿ ಆಗಮಿಸಿದ್ದು, ಕೋವಿಡ್ ನಿಯಮಾವಳಿಗಳ ಹಿನ್ನೆಲೆ ಇವರನ್ನು ನಾಮಪತ್ರ ಸಲ್ಲಿಕೆ ಕೇಂದ್ರದಿಂದ 100 ಮೀಟರ್ ದೂರದಲ್ಲಿ ತಡೆಯಲಾಗಿದೆ. ಕೇಂದ್ರದೊಳಗೆ ಕೇವಲ ಅಭ್ಯರ್ಥಿಯ ಜೊತೆ ಇಬ್ಬರು ನಾಯಕರನ್ನು ಮಾತ್ರ ಬಿಡಲಾಗಿದೆ.
ಜೆಡಿಎಸ್ ಅಭ್ಯರ್ಥಿ ನಾಮಪತ್ರ
ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ, ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಪಕ್ಷದ ಹಿರಿಯ ನಾಯಕರಾದ ಪ್ರಕಾಶ್ ಜೊತೆ ಆಗಮಿಸಿ ನಾಮಪತ್ರ ಸಲ್ಲಿಸಿದರು.