ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕ ಕ್ಷೇತ್ರದಿಂದ ನಡೆಯುವ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಜೆಡಿಎಸ್ ತೊರೆದು ಬಿಜೆಪಿ ಸೇರಿರುವ ಪುಟ್ಟಣ್ಣ ಗುರುವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಗುರುವಾರ ಬೆಳಗ್ಗೆ 11ಗಂಟೆಗೆ ಶಾಂತಿನಗರದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಾಮ ಪತ್ರ ಸಲ್ಲಿಸುತ್ತಿದ್ದು, ಪಕ್ಷದ ಮುಖಂಡರು ಉಪಸ್ಥಿತರಿರಲಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಮಾಡಲು ಗುರುವಾರವೇ ಕಡೆಯ ದಿನವಾಗಿದ್ದು ಕೊನೆಯ ದಿನದಂದು ಪುಟ್ಟಣ್ಣ ಉಮೇದುವಾರಿಕೆ ಸಲ್ಲಿಕೆ ಮಾಡುತ್ತಿದ್ದಾರೆ.