ETV Bharat / state

ನಮ್ಮ ಮೂವರೂ ಅಭ್ಯರ್ಥಿಗಳು ಗೆಲ್ಲಲಿದ್ದಾರೆ : ಬಿಎಸ್‌ವೈ - BJP candidates going to win the 3 seats in rajyasbha says BSY

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ಎರಡನೇ ಬಾರಿಗೆ ರಾಜ್ಯಸಭೆ ಸದಸ್ಯತ್ವಕ್ಕೆ ನಾಮಪತ್ರ ಸಲ್ಲಿಕೆ ಮಾಡಿದ್ದು, ನಾಮಪತ್ರ ಸಲ್ಲಿಸಿದ ಬಳಿಕ ನಿರ್ಮಲಾ‌ ಸೀತಾರಾಮನ್ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ್ದಾರೆ..

bjp-candidates-going-to-win-the-3-seats-in-rajyasbha-says-bsy
ನಮ್ಮ ಮೂವರೂ ಅಭ್ಯರ್ಥಿಗಳು ಗೆಲ್ಲಲಿದ್ದಾರೆ: ಬಿಎಸ್ ವೈ
author img

By

Published : May 31, 2022, 12:43 PM IST

ಬೆಂಗಳೂರು : ರಾಜ್ಯಸಭೆಯಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಮೂರನೇ ಅಭ್ಯರ್ಥಿಗಳನ್ನು ಗೆಲ್ಲಿಸುವ ಪ್ರಯತ್ನ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯಸಭೆ ಅಭ್ಯರ್ಥಿಯಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್​ವೈ, ನಮ್ಮೆಲ್ಲರ ಭಾವನೆಗೆ ಗೌರವ ಕೊಟ್ಟು ನಿರ್ಮಲಾ ಸೀತಾರಾಮನ್ ಅವರಿಗೆ ಅವಕಾಶ ಕೊಟ್ಟಿದ್ದಾರೆ.

ಅದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಇಬ್ಬರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಮೂರನೇ ಅಭ್ಯರ್ಥಿಯಾಗಿ ಲೇಹರ್ ಸಿಂಗ್ ಅವರನ್ನು ಕಣಕ್ಕಿಳಿಸಿದ್ದೇವೆ. ಅವರನ್ನೂ ಗೆಲ್ಲಿಸೋ ಪ್ರಯತ್ನ ಮಾಡ್ತಿದ್ದೇವೆ ಎಂದರು.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ಎರಡನೇ ಬಾರಿಗೆ ರಾಜ್ಯಸಭೆ ಸದಸ್ಯತ್ವಕ್ಕೆ ನಾಮಪತ್ರ ಸಲ್ಲಿಕೆ ಮಾಡಿದ್ದು, ನಾಮಪತ್ರ ಸಲ್ಲಿಸಿದ ಬಳಿಕ ನಿರ್ಮಲಾ‌ ಸೀತಾರಾಮನ್ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದ್ದಾರೆ.

ಓದಿ : ರಾಜ್ಯಸಭೆಯಲ್ಲಿ ಜನ ಮೆಚ್ಚುವ ರೀತಿ ಕೆಲಸ ಮಾಡುವೆ: ಜಗ್ಗೇಶ್ ಭರವಸೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.