ಬೆಂಗಳೂರು: ಆರ್ ಆರ್ ನಗರ, ಶಿರಾ ಕ್ಷೇತ್ರದ ಉಪ-ಚುನಾವಣೆಯ ಫಲಿತಾಂಶ ಹೊರಬರುತ್ತಿದ್ದು, ಬಿಜೆಪಿ ಮುನ್ನಡೆ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಸಿಎಂ ನಿವಾಸ ಕಾವೇರಿಯಲ್ಲಿ ಗೆಲುವಿನ ಸಂಭ್ರಮ ಆಚರಿಸಲಾಗುತ್ತಿದೆ.
ಸಿಎಂ ನಿವಾಸಕ್ಕೆ ಆಗಮಿಸಿದ ಸಚಿವರಾದ ಆರ್.ಅಶೋಕ್, ಗೃಹ ಸಚಿವ ಬೊಮ್ಮಾಯಿ, ಶ್ರೀರಾಮುಲು, ಬೈರತಿ ಬಸವರಾಜ್, ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಇತರ ಮುಖಂಡರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಎರಡು ಕ್ಷೇತ್ರದಲ್ಲಿ ಗೆಲುವು ನಮ್ಮದೇ ಎಂದು ಸಂತಸ ಹಂಚಿಕೊಂಡಿದ್ದಾರೆ.
ಇದೇ ವೇಳೆ ಸಿಎಂಗೆ ಸಿಹಿ ತಿನ್ನಿಸಿ ಹೂಗುಚ್ಛ ನೀಡಿ ಅಭಿನಂದಿಸುವ ಮೂಲಕ ಸಚಿವ ಆರ್.ಅಶೋಕ್ ಸಂತಸ ವ್ಯಕ್ತಪಡಿಸಿದರು.