ETV Bharat / state

ಟಿಕೆಟ್​ಗಾಗಿ ಒತ್ತಡವಿದೆ, ಗೆಲ್ಲುವ ಸಾಧ್ಯತೆ ನೋಡಿ​ ಹಂಚಿಕೆ: ಆದಷ್ಟು ಬೇಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಎಂದ ಬಿಎಸ್​ವೈ - Etv Bharat Kannada

ಹೈಕಮಾಂಡ್ ಜೊತೆ ಚರ್ಚಿಸಿ ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಬಿ.ಎಸ್​ ಯಡಿಯೂರಪ್ಪ ತಿಳಿಸಿದ್ದಾರೆ.

ಬಿ ಎಸ್​ ಯಡಿಯೂರಪ್ಪ
ಬಿ ಎಸ್​ ಯಡಿಯೂರಪ್ಪ
author img

By

Published : Apr 7, 2023, 2:31 PM IST

ಬೆಂಗಳೂರು: ಪಕ್ಷದ ಟಿಕೆಟ್​ಗಾಗಿ ಒತ್ತಡ ಇರುವುದು ನಿಜ ಆದರೂ ಯಾರು ಗೆಲ್ಲಬಹುದು ಎನ್ನುವ ಆಧಾರದಲ್ಲಿ ಹೈಕಮಾಂಡ್ ಜೊತೆ ಚರ್ಚಿಸಿ ಟಿಕೆಟ್ ಅಂತಿಮಗೊಳಿಸಲಾಗುತ್ತದೆ. ಶೀಘ್ರದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’’ಟಿಕೆಟ್ ಅಂತಿಮಗೊಳಿಸುವ ಹಿನ್ನೆಲೆಯಲ್ಲಿ ಸಂಜೆ ದೆಹಲಿಗೆ ಹೋಗುತ್ತಿದ್ದೇನೆ. ಪಟ್ಟಿ ಸಿದ್ಧ ಮಾಡಬೇಕಿರುವ ಕಾರಣ ಪ್ರಮುಖರ ಜೊತೆಗೆ ಚರ್ಚೆ ಮಾಡಬೇಕಿದೆ. ಎಲ್ಲರೊಂದಿಗೆ ಚರ್ಚೆ ಮಾಡಿ ಪಟ್ಟಿ ಫೈನಲ್ ಮಾಡಲಾಗುವುದು ಎಂದರು. ಟಿಕೆಟ್​ಗಾಗಿ ಬಹಳ ಒತ್ತಡ ಇರೋದು ನಿಜ. ಈಗಾಗಲೇ ಪ್ರತಿ ಕ್ಷೇತ್ರಕ್ಕೂ ಇಬ್ಬರು ಮೂವರು ಹೆಸರನ್ನು ಅಂತಿಮ ಮಾಡಿ ಹೈಕಮಾಂಡ್​ಗೆ ಕಳುಹಿಸಲಾಗಿದೆ. ನಾನು, ಮುಖ್ಯಮಂತ್ರಿಗಳು ಮತ್ತು ಪ್ರಮುಖರು ದೆಹಲಿಗೆ ಹೋಗುತ್ತೇವೆ. ಯಾರು ಗೆಲ್ತಾರೆ ಅನ್ನೋ ಬಗ್ಗೆ ಚರ್ಚಿಸಿ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ‘‘ ಎಂದರು.

ಬಿಜೆಪಿ ಪೂರ್ವಭಾವಿ ಸಭೆ ರದ್ದು: ಇಂದು ಸಂಜೆ ದೆಹಲಿಯಲ್ಲಿ ಟಿಕೆಟ್ ಸಂಬಂಧ ಪೂರ್ವಭಾವಿ ಸಭೆ ನಿಗದಿಯಾಗಿತ್ತು. ಆ ಸಭೆಯಲ್ಲಿ ಪಾಲ್ಗೊಳ್ಳಲು ಇಂದು ಬೆಳಗ್ಗೆಯೇ ದೆಹಲಿಗೆ ತೆರಳಲು ಯಡಿಯೂರಪ್ಪ ಸಿದ್ದರಾಗಿದ್ದರು. ಆದರೆ, ಪೂರ್ವಭಾವಿ ಸಭೆ ರದ್ದಾದ ಹಿನ್ನೆಲೆಯಲ್ಲಿ ಬೆಳಗ್ಗೆ ದೆಹಲಿಗೆ ತೆರಳುವುದನ್ನು ರದ್ದುಗೊಳಿಸಿ ಇಂದು ಸಂಜೆ ಯಡಿಯೂರಪ್ಪ ದೆಹಲಿಗೆ ತೆರಳುತ್ತಿದ್ದಾರೆ. ನಾಳೆ ನವದೆಹಲಿಯಲ್ಲಿ ಪಕ್ಷದ ವರಿಷ್ಠ ಸಮಿತಿಯಾಗಿರುವ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುತ್ತದೆ. ಭಾನುವಾರ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಇದ್ದು ಆ ಸಭೆಯಲ್ಲಿ ಒಪ್ಪಿಗೆ ಪಡೆದು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

ಇದನ್ನೂ ಓದಿ: 'ನಮ್ಮ ಜತೆಗೆ ಸೂಪರ್ ಸ್ಟಾರ್ ಬಂದಿದ್ದಾರೆಂಬ ಆತಂಕ, ಕಳವಳ ವಿರೋಧಿಗಳನ್ನ ಕಾಡುತ್ತಿದೆ': ಸಿಎಂ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.