ETV Bharat / state

ಶೆಟ್ಟರ್ ಭವಿಷ್ಯ, ಈಶ್ವರಪ್ಪ ಉತ್ತರಾಧಿಕಾರಿ ಆಯ್ಕೆ ಕಗ್ಗಂಟು: 12 ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸದ ಬಿಜೆಪಿ..!

ಬಿಜೆಪಿ 23 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ಇನ್ನು 12 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳ ಆಯ್ಕೆ ಮಾಡುವುದು ಬಾಕಿ ಇದೆ.

ಶೆಟ್ಟರ್ ಭವಿಷ್ಯ,ಈಶ್ವರಪ್ಪ ಉತ್ತರಾಧಿಕಾರಿ ಆಯ್ಕೆ ಕಗ್ಗಂಟು

author img

By

Published : Apr 13, 2023, 6:43 AM IST

Updated : Apr 13, 2023, 9:28 AM IST

ಬೆಂಗಳೂರು: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆ ಆದರೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಚುನಾವಣಾ ಭವಿಷ್ಯ, ಈಶ್ವರಪ್ಪ ಕ್ಷೇತ್ರದ ಉತ್ತರಾಧಿಕಾರಿ ಯಾರು ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ನಿಷ್ಠಾವಂತ ನಾಯಕರಾದ ರಾಮದಾಸ್, ಲಿಂಬಾವಳಿ ಭವಿಷ್ಯ, ಸೋಮಣ್ಣ ಪುತ್ರನ ಚುನಾವಣಾ ರಾಜಕೀಯ ಪ್ರವೇಶ ಕುರಿತ ಸಸ್ಪೆನ್ಸ್ ಮುಂದುವರೆದಿದೆ. 23 ಅಭ್ಯರ್ಥಿಗಳನ್ನೊಳಗೊಂಡ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ಆಗಿದ್ದು, 23ರಲ್ಲಿ 10 ಬಿಜೆಪಿ ಕ್ಷೇತ್ರಗಳಾಗಿದ್ದು ಅದರಲ್ಲಿ ಕೇವಲ ಮೂವರಿಗೆ ಮಾತ್ರ ಟಿಕೆಟ್ ನೀಡಿದ್ದು, ಉಳಿದ 7 ಕ್ಷೇತ್ರಕ್ಕೆ ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಎರಡು ಕ್ಷೇತ್ರಕ್ಕೆ ಮಹಿಳಾ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್​ ಗಿಂತ ತಡವಾಗಿ ಅಭ್ಯರ್ಥಿಗಳ ಹೆಸರನ್ನ ಪ್ರಕಟಿಸಿದ ಆಡಳಿತರೂಢ ಬಿಜೆಪಿ ಈ ಎರಡೂ ಪಕ್ಷಗಳಿಗೆ ಹೋಲಿಸಿದರೆ ಅತಿ ಹೆಚ್ಚಿನ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಬಿಜೆಪಿಯು ಇದುವರೆಗೆ ಒಟ್ಟು ಪ್ರಕಟಿಸಿದ ಎರಡು ಪಟ್ಟಿಗಳಲ್ಲಿ 212 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇನ್ನು ಕೇವಲ 12 ಕ್ಷೇತ್ರಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳ ಹೆಸರು ಆಯ್ಕೆ ಮಾಡುವುದು ಮಾತ್ರ ಬಾಕಿ ಇದೆ.

ಮತ್ತೊಂಡದೆಡೆ ಕಾಂಗ್ರೆಸ್ ಪಕ್ಷವು ಎರಡು ಪಟ್ಟಿಗಳಲ್ಲಿ 166 ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ‌. ಮೊದಲ ಪಟ್ಟಿಯಲ್ಲಿ 124 ಎರಡನೇ ಪಟ್ಟಿಯಲ್ಲಿ 42 ಅಭ್ಯರ್ಥಿ ಆಯ್ಕೆ ಮಾಡಿದೆ. ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಮುಂಚಿತವಾಗಿಯೇ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ ಮಾಡಿದ್ದು, 93 ಜನರಿಗೆ ಟಿಕೆಟ್ ನೀಡಿದೆ. ವಿಧಾನಸಭೆಯ 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 58 ಮತ್ತು ಜೆಡಿಎಸ್ 131 ಅಭ್ಯರ್ಥಿಗಳ ಹೆಸರು ಪ್ರಕಟಿಸುವುದು ಬಾಕಿ ಇದೆ.

ಬೆಂಗಳೂರು ಮಹಾನಗರದ ವ್ಯಾಪ್ತಿಗೆ ಒಳಪಡುವ ಗೋವಿಂದರಾಜ ನಗರ, ಮಹದೇವಪುರ, ಹೆಬ್ಬಾಳ, ಕೃಷ್ಣರಾಜ, ಹುಬ್ಬಳ್ಳಿ ಧಾರವಾಡ ಸೆಂಟ್ರಲ್, ಶಿವಮೊಗ್ಗ , ನಾಗಠಾಣಾ, ಸೇಡಂ, ಮಾನ್ವಿ, ಕೊಪ್ಪಳ, ರೋಣ ಹಾಗೂ ಹಗರಿಬೊಮ್ಮನಹಳ್ಳಿ ಕ್ಷೇತ್ರಗಳಿಗೆ ಭಾರತೀಯ ಜನತಾ ಪಕ್ಷವು ಅಭ್ಯರ್ಥಿಗಳ ಹೆಸರು ಪ್ರಕಟಿಸುವುದು ಬಾಕಿ ಇದೆ. ಬಿಜೆಪಿಯ ಘಟಾನುಘಟಿ ನಾಯಕರುಗಳಾದ ಮಾಜಿ ಸಿಎಂ ಜಗದೀಶ ಶೆಟ್ಟರ್, ಮಾಜಿ ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ, ಹಿರಿಯ ಬಿಜೆಪಿ ಮುಖಂಡರಾದ ಮಾಜಿ ಸಚಿವ ಅರವಿಂದ ಲಿಂಬಾವಳಿ ಸ್ಪರ್ಧೆ ಮಾಡುವಂತ ಕ್ಷೇತ್ರಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಲ್ಲಿ ಬಿಜೆಪಿಗೆ ಇನ್ನೂ ಸಾಧ್ಯವಾಗಿಲ್ಲ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಪ್ರತಿನಿಧಿಸುವ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಶೆಟ್ಟರ್ ಅವರಿಗೆ ಟಿಕೆಟ್ ನೀಡದೇ ಇರುವ ಬಗ್ಗೆ ಬಿಜೆಪಿ ಹೈಕಮಾಂಡ್ ತನ್ನ ನಿಲುವನ್ನು ತಿಳಿಸಿದೆ. ಆದರೆ ಇದಕ್ಕೆ ಜಗದೀಶ್ ಶೆಟ್ಟರ್ ಅವರು ತೀವ್ರವಾದ ಅಸಮಾಧಾನ ವ್ಯಕ್ತಪಡಿಸಿದ್ದರಿಂದ ಅವರ ಮನವೊಲಿಸುವ ಪ್ರಯತ್ನವನ್ನು ಬಿಜೆಪಿ ಹೈಕಮಾಂಡ್ ನಡೆಸಿದೆ. ಶೆಟ್ಟರ್ ಅವರು ಚುನಾವಣೆಗೆ ತಾವು ಸ್ಪರ್ಧೆ ಮಾಡಲೇಬೇಕೆಂದು ಪಟ್ಟು ಹಿಡಿದರೆ ಹೈಕಮಾಂಡ್ ಒತ್ತಡಕ್ಕೆ ಒಳಗಾಗಿ ತನ್ನ ನಿರ್ಧಾರವನ್ನು ಬದಲಿಸಿ, ಶೆಟ್ಟರ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆಯೂ ಹೆಚ್ಚಾಗಿದೆ.

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಅವರು ಪ್ರತಿನಿಧಿಸುವ ಶಿವಮೊಗ್ಗ ಕ್ಷೇತ್ರಕ್ಕೂ ಅಭ್ಯರ್ಥಿಯನ್ನ ಬಿಜೆಪಿ ಆಯ್ಕೆ ಮಾಡಿಲ್ಲ. ಈ ಕ್ಷೇತ್ರದಲ್ಲಿ ಟಿಕೆಟ್ ಯಾರಿಗೆ ನೀಡಬೇಕೆನ್ನುವ ಬಗ್ಗೆ ಬಿಜೆಪಿಯಲ್ಲಿ ಗೊಂದಲ ಇದೆ. ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿರುವ ಈಶ್ವರಪ್ಪನವರು ತಮ್ಮ ಮಗ ಕಾಂತೇಶ್ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ಈ ನಡುವೆ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ತಮಗೆ ಟಿಕೆಟ್ ನೀಡುವಂತೆ ಪಕ್ಷದ ಮುಖಂಡರಲ್ಲಿ ಮನವಿ ಮಾಡಿ ಪಟ್ಟು ಹಿಡಿದಿದ್ದಾರೆ. ಅಭ್ಯರ್ಥಿಯಾಗಿ ಆಯ್ಕೆ ಮಾಡದಿದ್ದರೆ ಕಾಂಗ್ರೆಸ್ ಪಕ್ಷ ಸೇರುವ ಇಲ್ಲವೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಸಂದೇಶವನ್ನು ಆಯನೂರು ಮಂಜುನಾಥ್ ಪಕ್ಷದ ಮುಖಂಡರಿಗೆ ರವಾನಿಸಿದ್ದಾರೆ.

ಬಿಜೆಪಿಯ ಹಿರಿಯ ಮುಖಂಡರಲ್ಲಿ ಒಬ್ಬರಾದ ಮಾಜಿ ಸಚಿವ ಅರವಿಂದ ಲಿಂಬಾವಳಿ ಪ್ರತಿನಿಧಿಸುವ ಕ್ಷೇತ್ರ ಮಹದೇವಪುರ ಕ್ಕೆ ಎರಡೂ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಮಾಡದೇ ಕುತೂಹಲ ಹೆಚ್ಚಿಸಿದೆ. ಮೊದಲ ಪಟ್ಟಿಯಲ್ಲಿಯೇ ಅರವಿಂದ ಲಿಂಬಾವಳಿ ಅವರ ಹೆಸರು ಪ್ರಕಟವಾಗುವುದನ್ನ ನಿರೀಕ್ಷಿಸಲಾಗಿತ್ತು. ಆದರೆ ಎರಡೂ ಪಟ್ಟಿಗಳಲ್ಲಿ ಹೆಸರು ಘೋಷಣೆ ಮಾಡದೇ ಇರುವ ಹಿಂದಿನ ಮರ್ಮ ನಿಗೂಢವಾಗಿದೆ. ಶಾಸಕರಾಗಿರುವ ಲಿಂಬಾವಳಿ ಕ್ಷೇತ್ರದಲ್ಲಿ ಬಿಜೆಪಿ ಹೊಸ ಪ್ರಯೋಗ ನಡೆಸಲಿದೆಯಾ..? ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಏಳು ಶಾಸಕರ ಕೈ ತಪ್ಪಿದ ಟಿಕೆಟ್

Last Updated : Apr 13, 2023, 9:28 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.