ETV Bharat / state

'10 ವರ್ಷ ಅವಕಾಶ ಕೊಟ್ಟರೂ ಬೆಂಗಳೂರನ್ನು ಅಭಿವೃದ್ಧಿ ಮಾಡಲು ಬಿಜೆಪಿಗೆ ಸಾಧ್ಯವಿಲ್ಲ' - Mohan Dasari lastest news

ಎರಡು ವರ್ಷಗಳಲ್ಲಿ ರಾಜಧಾನಿ ಬೆಂಗಳೂರಿನ ಚಹರೆ ಬದಲು ಮಾಡುತ್ತೇನೆ ಎಂದು ಹೇಳಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಒಂದೇ ಒಂದು ಗಲ್ಲಿ, ಸರ್ಕಾರಿ ಶಾಲೆ, ಆಸ್ಪತ್ರೆಯನ್ನು ಅಭಿವೃದ್ಧಿ ಮಾಡಿ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಸವಾಲು ಹಾಕಿದ್ದಾರೆ.

ಮೋಹನ್ ದಾಸರಿ
ಮೋಹನ್ ದಾಸರಿ
author img

By

Published : Dec 20, 2020, 8:00 PM IST

ಬೆಂಗಳೂರು: ಪುಲಿಕೇಶಿ ನಗರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಂದ ಬೃಹತ್ ಪಾದಯಾತ್ರೆ ನಡೆಸಲಾಯಿತು.

ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ಮಿಷನ್ 2020 ಸಂವಾದದಲ್ಲಿ ಮಾತನಾಡಿ, ಎರಡು ವರ್ಷಗಳಲ್ಲಿ ರಾಜಧಾನಿ ಬೆಂಗಳೂರಿನ ಚಹರೆ ಬದಲು ಮಾಡುತ್ತೇನೆ ಎಂದು ಹೇಳಿರುವ ಮುಖ್ಯಮಂತ್ರಿಗಳು, ಒಂದೇ ಒಂದು ಗಲ್ಲಿ, ಸರ್ಕಾರಿ ಶಾಲೆ, ಆಸ್ಪತ್ರೆಯನ್ನು ಅಭಿವೃದ್ಧಿ ಮಾಡಿ ಎಂದು ಸವಾಲು ಹಾಕಿದ್ದಾರೆ.

ಪುಲಿಕೇಶಿ ನಗರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರಿಂದ ಬೃಹತ್ ಪಾದಯಾತ್ರೆ

ಓದಿ:ವಿಲೀನದಂತಹ ಅವಿವೇಕತನ ಪ್ರದರ್ಶನ ಜೆಡಿಎಸ್​​​ ಮಾಡುವುದಿಲ್ಲ: ಹೆಚ್​.ಡಿ.ಕುಮಾರಸ್ವಾಮಿ

ಕಳ್ಳ ಮಾರ್ಗ ಹಿಡಿದಿರುವ ರಾಜ್ಯ ಬಿಜೆಪಿ ಸರ್ಕಾರ ನ್ಯಾಯಾಂಗದ ಮೂಲಕ ಬಿಬಿಎಂಪಿ ಚುನಾವಣೆಯನ್ನು ಮುಂದೂಡುತ್ತಲೇ ಇದೆ. ಬಿಜೆಪಿಯವರು ಏನೇ ಮಾಡಿದರೂ ಬಿಬಿಎಂಪಿ ಚುನಾವಣೆಯಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಅವರು ಹೇಳಿದರು.

ಪುಲಿಕೇಶಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಶಾಷಾವಲಿ ಮಾತನಾಡಿ, ಪುಲಿಕೇಶಿ ವಿಧಾನಸಭಾ ಕ್ಷೇತ್ರವನ್ನು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮೂರು ಪಕ್ಷಗಳು ಉಪಯೋಗಿಸಿಕೊಂಡಿದ್ದು, ಆಮ್ ಆದ್ಮಿ ಪಕ್ಷ ಇದಕ್ಕೆ ಮುಂದಿನ ದಿನಗಳಲ್ಲಿ ಅವಕಾಶ ಮಾಡಿಕೊಡುವುದಿಲ್ಲ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.