ETV Bharat / state

ಮೋದಿ, ಅಮಿತ್ ಶಾ ಬೆನ್ನಲ್ಲೇ ಜೆ.ಪಿ ನಡ್ಡಾ ರಾಜ್ಯ ಪ್ರವಾಸ: 2 ದಿನ ಬಿರುಸಿನ ಪ್ರಚಾರ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ.

BJP chief JP Nadda
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ
author img

By

Published : Feb 19, 2023, 11:58 AM IST

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ಪರಿಗಣಿಸಿರುವ ಬಿಜೆಪಿ ಹೈಕಮಾಂಡ್ ಸರಣಿಯಾಗಿ ವರಿಷ್ಠ ನಾಯಕರನ್ನು ರಾಜ್ಯಕ್ಕೆ ಕಳುಹಿಸಿಕೊಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ನಂತರ ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯ ಪ್ರವಾಸಕ್ಕೆ ಆಗಮಿಸುತ್ತಿದ್ದಾರೆ. 2 ದಿನ ಅವರು ರಾಜ್ಯ ಪ್ರವಾಸ ನಡೆಸಲಿದ್ದಾರೆ.

ನಡ್ಡಾ ಪ್ರವಾಸದ ವಿವರ: ನಡ್ಡಾ ರಾಜ್ಯಕ್ಕೆ ಭೇಟಿ ನೀಡುವ ಕುರಿತು ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮಾಹಿತಿ ನೀಡಿದ್ದಾರೆ. ಇಂದು ರಾತ್ರಿ ಮಂಗಳೂರಿಗೆ ಆಗಮಿಸಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಫೆ. 20ರಂದು ಬೆಳಗ್ಗೆ ಉಡುಪಿಯಲ್ಲಿ ಬೂತ್ ಮಟ್ಟದ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ನಂತರ, ಮಧ್ಯಾಹ್ನ ಬೈಂದೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಂಜೆ ಕೊಪ್ಪದಲ್ಲಿ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ನಂತರ ಶೃಂಗೇರಿಯಲ್ಲಿ ಜನಪ್ರತಿನಿಧಿಗಳ ಸಭೆಯಲ್ಲಿ ಭಾಗಿಯಾಗುವರು.

ಫೆ.21ರಂದು ಬೆಳಗ್ಗೆ ಚಿಕ್ಕಮಗಳೂರಿನಲ್ಲಿ ಪ್ರಬುದ್ಧರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ಬೇಲೂರಿನ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಸಂಜೆ ಹಾಸನದ ಬೂತ್ ಮಟ್ಟದ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದು ರಾತ್ರಿ ಬೆಂಗಳೂರಿಗೆ ಆಗಮಿಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ವಾಪಸ್​​ ಆಗಲಿದ್ದಾರೆ.

ಎರಡು ತಿಂಗಳಿನಲ್ಲಿ ನಾಲ್ಕು ಬಾರಿ ಪ್ರಧಾನಿ ನರೇಂದ್ರ ಮೋದಿ ಹಾಗೂ 5 ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸಕ್ಕೆ ಆಗಮಿಸಿ ಹಳೆ ಮೈಸೂರು ಭಾಗ, ಕಲ್ಯಾಣ ಕರ್ನಾಟಕದಲ್ಲಿ ಸಂಚಲನ ಮೂಡಿಸಿದ್ದಾರೆ. ಇದೀಗ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಸರದಿ. ಕರಾವಳಿ ಮತ್ತು ಮಲೆನಾಡು ಭಾಗವನ್ನು ಕೇಂದ್ರವಾಗಿರಿಸಿಕೊಂಡು ಎರಡು ದಿನ ಪಕ್ಷದ ಪರ ಬಿರುಸಿನ ಪ್ರಚಾರ ನಡೆಸಿ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ.

ಏರ್ ಶೋ ಉದ್ಘಾಟಿಸಿದ್ದ ಪಿಎಂ: ಫೆ.13 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿ ಏರ್ ಶೋ ಉದ್ಘಾಟಿಸಿದ್ದರು. ಫೆಬ್ರವರಿ 27ಕ್ಕೆ ಮತ್ತೆ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. ಇದರ ನಡುವೆ ಜೆ.ಪಿ.ನಡ್ಡಾ ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಏರೋ ಇಂಡಿಯಾ ಕೇವಲ ಶೋ ಅಲ್ಲ, ಭಾರತದ ಶಕ್ತಿ: ಪ್ರಧಾನಿ ಮೋದಿ ಬಣ್ಣನೆ

ಅಮಿತ್​ ಶಾ ಪ್ರವಾಸ: ಇತ್ತೀಚೆಗಷ್ಟೇ ರಾಜ್ಯ ಪ್ರವಾಸ ಮಾಡಿ ಸಂಚಲನ ಉಂಟು ಮಾಡುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಕರ್ನಾಟಕದಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಗೆಲುವು ಸಾಧಿಸಲಿದೆ. ಅದರೊಂದಿಗೆ ಮಧ್ಯಪ್ರದೇಶ, ತ್ರಿಪುರಾ, ರಾಜಸ್ಥಾನ, ಛತ್ತೀಸ್​ಗಢದಲ್ಲೂ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಅವರು, ಕರ್ನಾಟಕದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಕಳೆದ 2 ತಿಂಗಳಲ್ಲಿ ನಾನು ರಾಜ್ಯಕ್ಕೆ 5 ಬಾರಿ ಭೇಟಿ ನೀಡಿದ್ದೇನೆ. ರಾಜ್ಯದ ಜನರ ನಾಡಿಮಿಡಿತವನ್ನು ಗ್ರಹಿಸಿದ್ದೇನೆ. ಪ್ರಧಾನಿ ಮೋದಿಯವರ ಜನಪ್ರಿಯತೆಯನ್ನು ಅಲ್ಲಿ ಕಂಡಿದ್ದೇನೆ. ಈ ಬಾರಿಯೂ ಬಿಜೆಪಿಗೆ ಭಾರಿ ಜನಾದೇಶ ಸಿಗುತ್ತದೆ ಎಂದು ಅಮಿತ್ ಶಾ ಹೇಳಿದ್ದರು.

ಇದನ್ನೂ ಓದಿ: ಮಂಡ್ಯದಲ್ಲೂ ಬದಲಾವಣೆ, ಕರ್ನಾಟಕದಲ್ಲಿ ಬಿಜೆಪಿ ಗೆಲ್ಲೋದು ಖಚಿತ: ಅಮಿತ್​ ಶಾ ವಿಶ್ವಾಸ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.