ಬೆಂಗಳೂರು: ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿಗಳ ಭಾಷಣದ ವಿಡಿಯೋವನ್ನು ಬೇರೆ ಅರ್ಥ ಬರುವ ರೀತಿಯಲ್ಲಿ ಎಡಿಟ್ ಮಾಡಿ, ತಿರುಚಿ ಟ್ವೀಟ್ ಮಾಡಿದ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಕಾನೂನು ಪ್ರಕೋಷ್ಟ ಕ್ರಿಮಿನಲ್ ದೂರು ಸಲ್ಲಿಸಿದೆ.
ವಿಡಿಯೋವನ್ನು ಬಿಜೆಪಿಯ ವಿರುದ್ಧ ಅಪಪ್ರಚಾರ ಮಾಡುವ ದುರುದ್ದೇಶದಿಂದ ಕರ್ನಾಟಕ ಕಾಂಗ್ರೆಸ್ನ ಅಧಿಕೃತ ಸೋಷಿಯಲ್ ಮೀಡಿಯಾ ಪೇಜ್ಗಳಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತಂತೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಾನೂನು ಪ್ರಕೋಷ್ಟ ದೂರು ಸಲ್ಲಿಸಿದೆ.
ಕರ್ನಾಟಕ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥರು ಮತ್ತು ಸದರಿ ಪೇಜ್ಗಳ ಅಡ್ಮಿನ್ಗಳ ವಿರುದ್ಧ ತಕ್ಷಣ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಲಾಗಿದೆ. ಬಿಜೆಪಿ ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ಯೋಗೇಂದ್ರ ಹೊಡಾಘಟ್ಟ, ಬೆಂಗಳೂರು ಕೇಂದ್ರ ಜಿಲ್ಲಾ ಸಂಚಾಲಕ ಎಂ. ಯಶವಂತ್, ಶಿವಕುಮಾರ್ ಯಾದವ್ ಬೆಂಗಳೂರು ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರು.
ಇದನ್ನೂ ಓದಿ: ಶೆಡ್ಯೂಲ್ 9ಗೆ ಮೀಸಲಾತಿ ಸೇರಿಸುವ ಸಂಬಂಧ ಕಾನೂನು ಆಯೋಗ, ತಜ್ಞರ ಜೊತೆ ಚರ್ಚಿಸಿ ಕೇಂದ್ರಕ್ಕೆ ಶಿಫಾರಸು: ಸಿಎಂ