ETV Bharat / state

ಸ್ಪೀಕರ್​​ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು

ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರಕ್ಕೆ ಸ್ಪೀಕರ್ ರಮೇಶ್ ಕುಮಾರ್ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ದೂರು ಸಲ್ಲಿಸಿದೆ.

author img

By

Published : Jul 10, 2019, 4:20 PM IST

ಸ್ಪೀಕರ್ ನಡೆ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು

ಬೆಂಗಳೂರು: ಶಾಸಕರ ರಾಜೀನಾಮೆ ಅಂಗೀಕಾರಕ್ಕೆ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಬಿಜೆಪಿ ಉನ್ನತ ಮಟ್ಟದ ನಿಯೋಗದಿಂದ ದೂರು ಸಲ್ಲಿಕೆ ಮಾಡಿದ್ದು, ಕೂಡಲೇ ಶಾಸಕರ ರಾಜೀನಾಮೆ ಅಂಗೀಕಾರ ಮಾಡುವಂತೆ ನಿರ್ದೇಶನ ನೀಡಲು ಮನವಿ ಮಾಡಿದೆ.

ವಿಧಾನಸೌಧದಲ್ಲಿ ಧರಣಿ ನಡೆಸಿದ ನಂತರ ರಾಜಭವನಕ್ಕೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತು. ಸ್ಪೀಕರ್ ನಡೆ, ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿ ಕ್ರಮಬದ್ಧವಾಗಿರುವ ರಾಜೀನಾಮೆ ಪತ್ರಗಳನ್ನು ಅಂಗೀಕಾರ ಮಾಡುವಂತೆ ಸ್ಪೀಕರ್​​ಗೆ ಸೂಚಿಸುವಂತೆ ಮನವಿ ಮಾಡಿದ್ರು.

ಸ್ಪೀಕರ್ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು

ಈ ವೇಳೆ ಮಾತನಾಡಿದ ಯಡಿಯೂರಪ್ಪ, ಈಗಾಗ್ಲೇ ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರಿಗೆ ಶಾಸಕರ ರಾಜೀನಾಮೆ ಅಂಗೀಕರಿಸುವಂತೆ ಸೂಚಿಸಲು ಮನವಿ ಮಾಡಿದ್ದೀವಿ. ಕುಮಾರಸ್ವಾಮಿ ಬಹುಮತ ಕಳ್ಕೊಂಡಿದ್ದಾರೆ. ತಕ್ಷಣ ಕುಮಾರಸ್ವಾಮಿ ರಾಜೀನಾಮೆ ಕೊಡಬೇಕು. ಶಾಸಕರ ರಾಜೀನಾಮೆಯನ್ನ ಸ್ಪೀಕರ್ ಕೂಡ ಅಂಗೀಕರಿಸಬೇಕು. ಹಾಗೆಯೇ ಇನ್ನೂ ಇಬ್ಬರು ರಾಜೀನಾಮೆ ಕೊಡುವ ಸಾಧ್ಯತೆ ಇದೆ. ಹಾಗೂ ಸಮ್ಮಿಶ್ರ ಸರ್ಕಾರ ಬಹುಮತ ಸಾಬೀತು ಪಡಿಸುವಲ್ಲಿ ವಿಫಲವಾದ್ರೆ ಅಧಿವೇಶನ ನಡೆಯುವ ಪ್ರಶ್ನೆಯೇ ಇಲ್ಲ. ರಾಜ್ಯಪಾಲರು ಮಧ್ಯಪ್ರವೇಶ ಮಾಡಿ ಬಹುಮತ ಸಾಬೀತು ಪಡಿಸುವಂತೆ ಸಿಎಂಗೆ ಸೂಚಿಸುವಂತೆ ಮನವಿ ಮಾಡಲಾಗಿದೆ ಎಂದರು.

Intro:ಸ್ಪೀಕರ್ ನಡೆ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು

ಬೆಂಗಳೂರು: ಶಾಸಕರ ರಾಜೀನಾಮೆ ಅಂಗೀಕಾರಕ್ಕೆ ವಿಳಂಬ ನೀತಿ ಅನುಸರಿಸುತ್ತಿರುವ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಬಿಜೆಪಿ ಉನ್ನತ ಮಟ್ಟದ ನಿಯೋಗದಿಂದ ದೂರು ಸಲ್ಲಿಕೆ ಮಾಡಿದ್ದು ಕೂಡಲೇ ಶಾಸಕರ ರಾಜೀನಾಮೆ ಅಂಗೀಕಾರ ಮಾಡುವಂತೆ ನಿರ್ದೇಶನ ನೀಡಲು ಮನವಿ ಮಾಡಿತು.
ವಿಧಾನಸೌಧದಲ್ಲಿ ಧರಣಿ ನಡೆಸಿದ ನಂತರ ರಾಜ ಭವನಕ್ಕೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತು.ಸ್ಪೀಕರ್ ನಡೆ ,ರಾಜ್ಯದ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿ ಕ್ರಮಬದ್ಧ ಆಗಿರುವ ರಾಜೀನಾಮೆಗಳ ಅಂಗೀಕಾರ ಮಾಡುವಂತೆ ಸ್ಪೀಕರ್ ಗೆ ಸೂಚಿಸುವಂತೆ ತಿಳಿಸಿದ್ದಾರೆ

ಯಡಿಯೂರಪ್ಪ ಮಾತಾಡಿ ಈಗಾಗ್ಲೇ ಅತೃಪ್ತ ಶಾಸಕರು ರಾಜಿನಾಮೇ ನಿಡಿದ್ದು ರಾಜ್ಯಪಾಲರಿಗೆ ಶಾಸಕರ ರಾಜೀನಾಮೆ ಅಂಗೀಕರಿಸುವಂತೆ ಸೂಚಿಸಲು ಮನವಿ ಮಾಡಿದ್ದಿವಿ. ಈಗಾಗ್ಲೇ ಕುಮಾರಸ್ವಾಮಿ ಬಹುಮತ ಕಳ್ಕೊಂಡಿದಾರೆ.ತಕ್ಷಣ ಕುಮಾರಸ್ವಾಮಿ ರಾಜೀನಾಮೆ ಕೊಡಬೇಕು ಶಾಸಕರ ರಾಜೀನಾಮೆಯನ್ನ ಕೆಲ ಸ್ಪೀಕರ್ ಕೂಡ ಅಂಗೀಕರಿಸಬೇಕು ಮತ್ತು ಇಬ್ಬರು ರಾಜೀನಾಮೆ ಕೊಡುವ ಸಾಧ್ಯತೆ ಇದೆ ಹಾಗೆ ಸಂಮಿಶ್ರ ಸರ್ಕಾರ ಬಹುಮತ ಸಾಬೀತು ಪಡಿಸುವಲ್ಲಿ ವಿಫಲರಾದ್ರೆ ಅಧಿವೇಶನ ನಡೆಯುವ
ಪ್ರಶ್ನೆಯೆ ಇಲ್ಲ.ರಾಜ್ಯಪಾಲರು ಮಧ್ಯಪ್ರವೇಶ ಮಾಡಿ
ಬಹುಮತ ಸಾಬೀತು ಪಡಿಸುವಂತೆ ಸಿಎಂ ಗೆ ಸೂಚಿಸುವಂತೆ ಮನವಿ ಮಾಡಿದ್ದಾರೆBody:KN_BNG_06_YADIYURPA_7204498Conclusion:KN_BNG_06_YADIYURPA_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.