ETV Bharat / state

ರಿಪಬ್ಲಿಕ್ ಟಿ.ವಿ. ಮುಖ್ಯಸ್ಥರ ಬಂಧನಕ್ಕೆ ರಾಜ್ಯ ಬಿಜೆಪಿ ಖಂಡನೆ - Arnab goswami arrest by police

ಸಮಕಾಲೀನ ಸಮಸ್ಯೆಗಳನ್ನು ಅತ್ಯಂತ ಸಮರ್ಥವಾಗಿ ಪ್ರಸಾರ ಮಾಡುತ್ತಿದ್ದ ರಿಪಬ್ಲಿಕ್ ಟಿ.ವಿ. ಮುಖ್ಯಸ್ಥರ ಮೇಲೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಸೂಚನೆ ಮೇರೆಗೆ‌ ಪೊಲೀಸ್ ದಾಳಿ ನಡೆದಿದೆ. ಅವರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಹೇಳಿದ್ದಾರೆ.

ಬಿಜೆಪಿ ರಾಜ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್

author img

By

Published : Nov 4, 2020, 10:35 PM IST

ಬೆಂಗಳೂರು: ಮುಂಬೈ ಪೊಲೀಸರು ರಿಪಬ್ಲಿಕ್ ಟಿ.ವಿ. ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಮೇಲೆ ಹಲ್ಲೆ ಮಾಡಿ ಬಂಧಿಸಿರುವುದು ಖಂಡನೀಯ. ಇದು ವೈಯಕ್ತಿಕ ಸ್ವಾತಂತ್ರ್ಯ ಮತ್ತು ಮಾಧ್ಯಮ ಸ್ವಾತಂತ್ರ್ಯದ ಮೇಲೆ ನಡೆದ ಪ್ರಹಾರ ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಹೇಳಿದ್ದಾರೆ.

ಈ ಹಿಂದೆ ನಟಿ ಕಂಗನಾ ರನೌತ್ ಅವರ ಮನೆ ಮೇಲೆ ನಡೆದ ಪೊಲೀಸ್ ದಾಳಿಯ ವಿರುದ್ಧ ರಿಪಬ್ಲಿಕ್ ಟಿವಿ ನಡೆಸಿದ ಚರ್ಚೆ, ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದ ಹಿಂದಿನ ಸತ್ಯದ ಅನಾವರಣ, ಹವಾಲಾ ಜಾಲದಲ್ಲಿ ಅರ್ನಾಬ್ ಇರುವರೆಂಬ ಮುಂಬೈ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರ ಹೇಳಿಕೆ ಸಂಬಂಧ ನೇರ ಸಂವಾದಕ್ಕೆ ಆಹ್ವಾನಿಸಿದ ಅರ್ನಾಬ್ ಅವರನ್ನು 2018ರ ಆತ್ಯಹತ್ಯಾ ಪ್ರಕರಣವನ್ನು ಉಲ್ಲೇಖಿಸಿ ಬಂಧಿಸಲಾಗಿದೆ. ಇದು ಪೊಲೀಸ್ ಕಾನೂನಿನ ದುರುಪಯೋಗವಾಗಿದ್ದು, ಅವರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ಖಂಡನೀಯ ಎಂದಿದ್ದಾರೆ.

ಸಮಕಾಲೀನ ಸಮಸ್ಯೆಗಳನ್ನು ಅತ್ಯಂತ ಸಮರ್ಥವಾಗಿ ಪ್ರಸಾರ ಮಾಡುತ್ತಿದ್ದ ರಿಪಬ್ಲಿಕ್ ಟಿ.ವಿ. ಮುಖ್ಯಸ್ಥರ ಮೇಲೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಸೂಚನೆ ಮೇರೆಗೆ‌ ಪೊಲೀಸ್ ದಾಳಿ ನಡೆದಿದೆ. ಶಿವಸೇನಾ ಮುಖ್ಯಸ್ಥರಾಗಿದ್ದ ಬಾಳ್ ಠಾಕ್ರೆ ಅವರು ಮೂಲತಃ ಪತ್ರಕರ್ತರಾಗಿದ್ದು, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪತ್ರಿಕಾ ಸ್ವಾತಂತ್ರ್ಯಹರಣದ ವಿರುದ್ಧ ಪ್ರತಿಭಟನೆ ಮಾಡಿದ್ದರು. ಅವರ ಮಗನಾದ ಉದ್ಧವ್ ಠಾಕ್ರೆ ಅವರು ಅರ್ನಾಬ್ ಅವರನ್ನು ಬಂಧಿಸಲು ಸೂಚಿಸಿ ತಂದೆಗೇ ಅವಮಾನ ಮಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಪಕ್ಷವು ತನ್ನ ಪ್ರಭಾವ ಬಳಸಿ ಉದ್ಧವ್ ಅವರ ಮೂಲಕ ತುರ್ತು ಪರಿಸ್ಥಿತಿಯ ಅವಧಿಯ ಪತ್ರಿಕಾ ಸ್ವಾತಂತ್ರ್ಯಕ್ಕೆ ಕೊಡಲಿಯೇಟು ನೀಡುವ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದೆ. ಅಧಿಕಾರಕ್ಕಾಗಿ ಕಾಂಗ್ರೆಸ್ ಜೊತೆ ಸೇರುವವರಿಗೆ ಇದೊಂದು ಪಾಠ ಎಂದು ಅವರು ಟೀಕಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರವು ಈ ವಿಚಾರದಲ್ಲಿ ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಂಡಿದೆ. ಮಾಧ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಆಧಾರಸ್ತಂಭ ಎಂಬುದನ್ನು ಅಲ್ಲಿನ ಸರ್ಕಾರ ಮರೆತಂತಿದೆ. ಅರ್ನಾಬ್ ಗೋಸ್ವಾಮಿ ಅವರ ಬಂಧನವು ದೇಶದ 1975ರ ತುರ್ತು ಪರಿಸ್ಥಿತಿಯನ್ನು ನೆನಪಿಸುವಂತಿದೆ. ತುರ್ತು ಪರಿಸ್ಥಿತಿಯಲ್ಲೂ ಇದೇ ಮಾದರಿಯಲ್ಲಿ ಪತ್ರಕರ್ತರ ಬಂಧನ ಮಾಡಲಾಗಿತ್ತು. ಅಲ್ಲದೆ ಪತ್ರಿಕೆಗಳ ಮೇಲೆ ನಿರ್ಬಂಧ ವಿಧಿಸಲಾಗಿತ್ತು. ಮಹಾರಾಷ್ಟ್ರ ಸರ್ಕಾರದ ಇದೇ ಮಾದರಿಯ ಇಂದಿನ ಕ್ರಮ ಖಂಡನಾರ್ಹ ಎಂದು ಅವರು ಪ್ರತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರವು ತಕ್ಷಣವೇ ತನ್ನ ನಿರ್ಧಾರವನ್ನು ಮರು ವಿಮರ್ಶಿಸಿ ಅರ್ನಬ್ ಗೋಸ್ವಾಮಿ ಅವರನ್ನು ಬಿಡುಗಡೆ ಮಾಡಬೇಕು ಎಂದು ಕಾರ್ಣಿಕ್ ಒತ್ತಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.