ಬೆಂಗಳೂರು: ಲೋಕಸಭಾ ಚುನಾವಣಾ ಮುಕ್ತಾಯವಾದ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳ ಚುನಾವಣಾ ಸಮಿತಿ ಸಭೆಯನ್ನು ನಡೆಸಲಾಗುತ್ತಿದೆ.
ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಜಿಲ್ಲಾ ಸಮಿತಿಗಳ ಜೊತೆ ಚರ್ಚೆ ನಡೆಸಲಾಗುತ್ತಿದೆ. ಮೊದಲು ಬೆಂಗಳೂರಿಗೆ ಸಂಬಂಧಪಟ್ಟಂತೆ ಸಭೆ ನಡೆಯಲಿದ್ದು, ನಂತರ ಇತರ ಜಿಲ್ಲೆಗಳ ಜಿಲ್ಲಾ ಸಮಿತಿಗಳ ಸಭೆ ನಡೆಸಲಾಗುತ್ತದೆ. ಲೋಕಸಭಾ ಚುನಾವಣೆಗಾಗಿ ರಚಿಸಲಾಗಿದ್ದ ಜಿಲ್ಲಾ ಚುನಾವಣಾ ಸಮಿತಿಗಳನ್ನು ವಿಸರ್ಜನೆ ಮಾಡುವ ಮುನ್ನ ಸಭೆ ನಡೆಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ.