ಬೆಂಗಳೂರು: ಆಯುಧ ಪೂಜೆಯ ಸಡಗರ, ಸಂಭ್ರಮದ ನಡುವೆಯೂ ಆರ್ಎಸ್ಎಸ್ ಕಚೇರಿ ಕೇಶವ ಕೃಪಾದಲ್ಲಿ ಇಂದು ಬೆಳಗ್ಗೆ ಬೆಂಗಳೂರಿನ ಸಚಿವರು ಮತ್ತು ಬಿಜೆಪಿ ಶಾಸಕರ ಆಂತರಿಕ ಸಭೆ ನಡೆಯಿತು.
ಚಾಮರಾಜಪೇಟೆಯಲ್ಲಿರುವ ಆರ್ಎಸ್ಎಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಾ.ಅಶ್ವಥ ನಾರಾಯಣ, ಸಚಿವರಾದ ಆರ್.ಅಶೋಕ, ಸುರೇಶ್ ಕುಮಾರ್, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಸೇರಿದಂತೆ ಬೆಂಗಳೂರಿನ ಬಿಜೆಪಿ ಶಾಸಕರು ಭಾಗಿಯಾಗಿದ್ದರು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಆರ್ಎಸ್ಎಸ್ ಮುಖಂಡರಾದ ದತ್ತಾತ್ರೇಯ ಹೊಸಬಾಳೆ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಬೆಂಗಳೂರಿನ ಚೆನ್ನೇನಹಳ್ಳಿಯಲ್ಲಿ ಸೆಂಟರ್ ಫಾರ್ ಎಜ್ಯುಕೇಷನ್ ಎಕ್ಸ್ಲೆನ್ಸ್ ಸ್ಥಾಪನೆ ಸಂಬಂಧವಾಗಿ ಆಂತರಿಕ ಸಭೆ ನಡೆಸಲಾಯಿತು ಎಂದು ತಿಳಿದುಬಂದಿದೆ.