ಬೆಂಗಳೂರು : ಸಚಿವ ಉಮೇಶ್ ಕತ್ತಿ ನಿಧನಕ್ಕೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ಮತ್ತು ಬಿ.ಎಸ್. ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
-
ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ.
— Siddaramaiah (@siddaramaiah) September 6, 2022 " class="align-text-top noRightClick twitterSection" data="
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/BcluGlfsp9
">ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ.
— Siddaramaiah (@siddaramaiah) September 6, 2022
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/BcluGlfsp9ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ.
— Siddaramaiah (@siddaramaiah) September 6, 2022
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/BcluGlfsp9
ಕನ್ಯಾಕುಮಾರಿ ಪ್ರವಾಸ ರದ್ದು: ಎಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ತೆರಳಿ ಸಚಿವ ಉಮೇಶ್ ಕತ್ತಿಯವರಿಗೆ ಅಂತಿಮ ನಮನ ಸಲ್ಲಿಸಿದರು. ತಮ್ಮ ಕನ್ಯಾಕುಮಾರಿ ಪ್ರವಾಸ ರದ್ದುಪಡಿಸಿರುವ ಸಿದ್ದರಾಮಯ್ಯ ಸಚಿವ ಉಮೇಶ್ ಕತ್ತಿಯವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಮಧ್ಯಾಹ್ನ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ.
ಇದ್ದುದನ್ನು ಇದ್ದಂತೆ ಹೇಳುವ ನೇರ ನಡೆ-ನುಡಿಯ ವ್ಯಕ್ತಿತ್ವ : 25ನೇ ವಯಸ್ಸಿಗೆ ವಿಧಾನಸಭೆ ಪ್ರವೇಶಿಸಿದ್ದ ಅವರು ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದರು. ಇದ್ದುದನ್ನು ಇದ್ದಂಗೆ ಹೇಳುವ ನೇರ ನಡೆ-ನುಡಿಯ ವ್ಯಕ್ತಿತ್ವ ಹೊಂದಿದ್ದ ಉಮೇಶ್ ಕತ್ತಿ ಅವರು ಜನರ ಸಮಸ್ಯೆ, ಭಾವನೆಗಳಿಗೆ ಧ್ವನಿ ಆಗುವಾಗ ಆಡಳಿತ ಪಕ್ಷ, ಪ್ರತಿ ಪಕ್ಷ ಎಂದು ಭೇದ ಮಾಡುತ್ತಿರಲಿಲ್ಲ. ಸಕ್ಕರೆ ಉದ್ಯಮಕ್ಕೆ ಅವರ ಕೊಡುಗೆ ಮರೆಯುವಂತಿಲ್ಲ. ಕತ್ತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಡಿ ಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಹೆಚ್.ಡಿ. ದೇವೇಗೌಡ ಮತ್ತು ಕುಮಾರಸ್ವಾಮಿ ಅವರಿಂದ ಸಂತಾಪದ ಟ್ವೀಟ್ : ಸಚಿವರಾಗಿದ್ದ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ಮನಸ್ಸಿಗೆ ಅತೀವ ದುಃಖವುಂಟಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಹೆಚ್.ಡಿ. ದೇವೇಗೌಡ ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.
-
ಶ್ರೀ ಉಮೇಶ್ ಕತ್ತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.2/2
— H D Kumaraswamy (@hd_kumaraswamy) September 7, 2022 " class="align-text-top noRightClick twitterSection" data="
">ಶ್ರೀ ಉಮೇಶ್ ಕತ್ತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.2/2
— H D Kumaraswamy (@hd_kumaraswamy) September 7, 2022ಶ್ರೀ ಉಮೇಶ್ ಕತ್ತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.2/2
— H D Kumaraswamy (@hd_kumaraswamy) September 7, 2022
ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ನನಗೆ ತೀವ್ರ ಆಘಾತವಾಗಿದೆ. ಜನತಾ ಪರಿವಾರದ ಹಿರಿಯರಾಗಿದ್ದ ಕತ್ತಿ ಅವರು ಸ್ನೇಹಜೀವಿ ಆಗಿದ್ದರಲ್ಲದೆ, ತಮ್ಮ ನೇರ ನಡೆ ನುಡಿಯಿಂದ ನಮ್ಮೆಲ್ಲರ ಪ್ರೀತಿ ಗೌರವಕ್ಕೆ ಪಾತ್ರರಾಗಿದ್ದರು ಎಂದಿದ್ದಾರೆ.
-
ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವರಾಗಿದ್ದ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ಮನಸ್ಸಿಗೆ ಅತೀವ ದುಃಖವುಂಟಾಗಿದೆ.
— H D Devegowda (@H_D_Devegowda) September 7, 2022 " class="align-text-top noRightClick twitterSection" data="
ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓ ಶಾಂತಿ. pic.twitter.com/gJiOcwEiJs
">ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವರಾಗಿದ್ದ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ಮನಸ್ಸಿಗೆ ಅತೀವ ದುಃಖವುಂಟಾಗಿದೆ.
— H D Devegowda (@H_D_Devegowda) September 7, 2022
ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓ ಶಾಂತಿ. pic.twitter.com/gJiOcwEiJsಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವರಾಗಿದ್ದ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ಮನಸ್ಸಿಗೆ ಅತೀವ ದುಃಖವುಂಟಾಗಿದೆ.
— H D Devegowda (@H_D_Devegowda) September 7, 2022
ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓ ಶಾಂತಿ. pic.twitter.com/gJiOcwEiJs
ಉಮೇಶ್ ಕತ್ತಿ ಅಗಲಿಕೆ ಪಕ್ಷಕ್ಕೆ ಹಾಗೂ ಸಂಘಟನೆಗೆ ತುಂಬಲಾರದ ನಷ್ಟ: ಸಚಿವರಾಗಿದ್ದ ಉಮೇಶ್ ಕತ್ತಿ ಅವರ ಅಗಲಿಕೆ ಪಕ್ಷ ಹಾಗೂ ಸಂಘಟನೆಗೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಉಮೇಶ್ ಕತ್ತಿರವರು ಉತ್ತರ ಕರ್ನಾಟಕದ ಅಭಿವೃದ್ದಿಗೆ ಸಾಕಷ್ಟು ಶ್ರಮಿಸಿದ್ದರು. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗದಲ್ಲಿ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ : ಕರ್ನಾಟಕದ ಅಭಿವೃದ್ಧಿಗೆ ಕತ್ತಿ ಅವರಿಂದ ಉತ್ಕೃಷ್ಟ ಕೊಡುಗೆ: ಪ್ರಧಾನಿ ಮೋದಿ ಸಂತಾಪ