ETV Bharat / state

ಲಿಂಗಾಯತ ಮತಬ್ಯಾಂಕ್ ಮೇಲೆ ಕಣ್ಣು: ಕೈ, ಕಮಲ ಹೈಕಮಾಂಡ್​ನಿಂದ ಮಠಗಳ ಓಲೈಕೆ ರಾಜಕಾರಣ - Veerashaiva Lingayat community

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ನಂತರ ಅಸಮಾಧಾನಗೊಂಡಿರುವ ಲಿಂಗಾಯತ ಸಮುದಾಯದ ಬೆಂಬಲವನ್ನು ಪಡೆಯಲು ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿನ ಸುತ್ತೂರು, ಸಿದ್ಧಗಂಗಾ, ಚಿತ್ರದುರ್ಗ, ಸಿರಿಗೆರೆ, ರಂಭಾಪುರಿ ಸೇರಿದಂತೆ ಇತರೆ ಪ್ರಮುಖ ವೀರಶೈವ  ಲಿಂಗಾಯತ ಮಠಗಳ ಪ್ರಮುಖ ಮಠಾಧೀಶರನ್ನ ಸಂಪರ್ಕಿಸಿ ಬೆಂಬಲ ನೀಡುವಂತೆ ಮನವಿ ಮಾಡುತ್ತಿದೆ ಎಂದು ವಿಶ್ವಾಸನೀಯ ಮೂಲಗಳಿಂದ ತಿಳಿದುಬಂದಿದೆ.

ಶ್ರೀ ಮುರುಘರಾಜೇಂದ್ರ ಸ್ವಾಮೀಜಿಗಳ ಆರ್ಶಿವಾದ ಪಡೆಯುತ್ತಿರುವುದು

author img

By

Published : Aug 3, 2022, 11:00 PM IST

ಬೆಂಗಳೂರು: ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಅತ್ಯಧಿಕ ಸಂಖ್ಯೆಯಲ್ಲಿರುವ ವೀರಶೈವ ಲಿಂಗಾಯತ ಸಮುದಾಯದ ಬೆಂಬಲ ಅತ್ಯಗತ್ಯ ಎನ್ನುವುದನ್ನು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಹೈಕಮಾಂಡ್ ಮನಗಂಡಿವೆ. ಈ ನಿಟ್ಟಿನಲ್ಲಿ ಈಗ ರಾಜ್ಯದ ಪ್ರಮುಖ ಲಿಂಗಾಯತ ಮಠಾಧೀಶರನ್ನ ನೇರವಾಗಿ ಭೇಟಿ ಮಾಡಿ ವಿಶ್ವಾಸಗಳಿಸುವ ಮತ್ತೊಂದು ಹೊಸದಾದ ಚುನಾವಣೆ ಕಸರತ್ತು ಆರಂಭಿಸಿವೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನ ಅಧಿಕಾರದಿಂದ ಕೆಳಗಿಳಿಸಿದ ನಂತರ ಅಸಮಾಧಾನಗೊಂಡಿರುವ ಲಿಂಗಾಯತ ಸಮುದಾಯದ ಬೆಂಬಲವನ್ನು ಪಡೆಯಲು ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿನ ಸುತ್ತೂರು, ಸಿದ್ಧಗಂಗಾ, ಚಿತ್ರದುರ್ಗ, ಸಿರಿಗೆರೆ, ರಂಭಾಪುರಿ ಸೇರಿದಂತೆ ಇತರೆ ಪ್ರಮುಖ ವೀರಶೈವ ಲಿಂಗಾಯತ ಮಠಗಳ ಪ್ರಮುಖ ಮಠಾಧೀಶರನ್ನ ಸಂಪರ್ಕಿಸಿ ಬೆಂಬಲ ನೀಡುವಂತೆ ಮನವಿ ಮಾಡುತ್ತಿದೆ ಎಂದು ವಿಶ್ವಾಸನೀಯ ಮೂಲಗಳಿಂದ ತಿಳಿದುಬಂದಿದೆ.

ಲಿಂಗಾಯತ ಸಮುದಾಯದ ನಾಯಕರೆಂದು ಪ್ರತಿಬಿಂಬಿತವಾಗಿರುವ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಹೊರತುಪಡಿಸಿ ನೇರವಾಗಿಯೇ ಲಿಂಗಾಯತ ಮಠಗಳ ಸ್ವಾಮೀಜಿಯವರನ್ನು ಸಂಪರ್ಕಿಸಿ, ಅವರ ಆಶೀರ್ವಾದ ಪಡೆಯಲು ಬಿಜೆಪಿ ಹೈಕಮಾಂಡ್ ಮತ್ತು ಸಂಘ ಪರಿವಾರ ತೆರೆ ಮರೆಯಲ್ಲಿ ತೀವ್ರ ಕಸರತ್ತು ನಡೆಸಿದೆ.

ರಾಜ್ಯಕ್ಕೆ ಪ್ರವಾಸದಲ್ಲಿದ್ದಾಗ ಪ್ರಮುಖ ಮಠಗಳಿಗೆ ಭೇಟಿ ನೀಡುವುದು, ಮಠಾಧೀಶರ ಸಭೆ ನಡೆಸುವುದು, ಮಠದ ಸಭೆ -ಸಮಾರಂಭಗಳಲ್ಲಿ ಭಾಗವಹಿಸಿ ಸ್ವಾಮೀಜಿಗಳ ಕೃಪೆಗೆ ಪಾತ್ರವಾಗುವುದು. ಆ ಮೂಲಕ ನಮಗೆ ಮಠದ ಸ್ವಾಮೀಜಿಗಳ ಬೆಂಬಲವಿದೆ ಎನ್ನುವ ಸಂದೇಶವನ್ನು ಲಿಂಗಾಯತ ಸಮುದಾಯದ ಮತದಾರರಿಗೆ ನೀಡುವುದು ಬಿಜೆಪಿ ಮತ್ತು ಕಾಂಗ್ರೆಸ್ ಹೈಕಮಾಂಡ್ ಗಳ ಉದ್ದೇಶವಾಗಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿಯ ಹೈಕಮಾಂಡ್ ಆದ ಪ್ರಧಾನಿ ನರೇಂದ್ರ ಮೋದಿ ಹಾಗು ಅಮಿತ್ ಷಾ ಅವರು ಸುತ್ತೂರು ಮತ್ತು ಸಿದ್ಧಗಂಗಾಮಠದ ಶ್ರೀಗಳ ಜತೆ ನೇರ ಸಂಪರ್ಕದಲ್ಲಿದ್ದಾರೆ. ಕಳೆದ ಜೂನ್ ತಿಂಗಳಲ್ಲಿ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುತ್ತೂರು ಮಠದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶ್ರೀಗಳ ಆಶೀರ್ವಾದ ಪಡೆದಿದ್ದರು. ಹಾಗೆಯೇ, ಕಳೆದ ಏಪ್ರಿಲ್ ತಿಂಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ. ಶಿವಕುಮಾರ ಶ್ರೀಗಳ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಿದ್ದಗಂಗಾ ಮಠಕ್ಕೆ ತಾವು ಬಹಳ ಹತ್ತಿರ ಎನ್ನುವ ಮೆಸೇಜನ್ನು ನೀಡಿದ್ದಾರೆ.

ಚಿತ್ರದುರ್ಗ ಬೃಹನ್ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರ್ಶಿವಾದ ಪಡೆದ ರಾಹುಲ್ ಗಾಂಧಿ
ಚಿತ್ರದುರ್ಗ ಬೃಹನ್ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ರಾಹುಲ್ ಗಾಂಧಿ

ಕಾಂಗ್ರೆಸ್ ಹೈಕಮಾಂಡ್​ನಿಂದಲೂ ಭೇಟಿ: ಮಾಜಿ ಸಿಎಂ ಯಡಿಯೂರಪ್ಪಅವರ ಪದಚ್ಯುತಿ ನಂತರ ಬಿಜೆಪಿ ನಡೆ ಬಗ್ಗೆ ಬೇಸರಗೊಂಡಿರುವ ಲಿಂಗಾಯತ ಸಮುದಾಯದ ಮತಗಳನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಪಕ್ಷ ಸಹ ಕಾರ್ಯತಂತ್ರ ರೂಪಿಸತೊಡಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಲಿಂಗಾಯತ ಸಮುದಾಯದ ಬೆಂಬಲವೇ ಪ್ರಮುಖ ಕಾರಣ ಎನ್ನುವ ಸತ್ಯವನ್ನು ಅರಿತಿರುವ ಕಾಂಗ್ರೆಸ್ ಹೈಕಮಾಂಡ್ ತನ್ನ ಪಕ್ಷದ ಕಡೆ ಲಿಂಗಾಯತ ಸಮುದಾಯದ ಮತಗಳನ್ನು ಆಕರ್ಷಿಸಲು ಈಗ ಮಠಾಧೀಶರ ಮೊರೆ ಹೋಗುತ್ತಿದೆ.

ರಾಜಕೀಯ ಲಾಭ ಪಡೆಯಲು ಪ್ರಯತ್ನ: ಮಾಜಿ ಸಿಎಂ ವೀರೇಂದ್ರ ಪಾಟೀಲ್ ಆಡಳಿತದ ನಂತರ ಲಿಂಗಾಯತರನ್ನು ನಿರ್ಲಕ್ಷ ಮಾಡುತ್ತ ಬಂದಿದ್ದ ಕಾಂಗ್ರೆಸ್ ಹೈಕಮಾಂಡ್ ಮತ್ತೆ ಲಿಂಗಾಯತ ಸಮುದಾಯದ ಒಲವು ಗಳಿಸಲು ಇನ್ನಿಲ್ಲದ ಯತ್ನ ನಡೆಸಿದೆ. ರಾಜ್ಯ ಕಾಂಗ್ರೆಸ್ ನಾಯಕರ ಮಾತಿಗೆ ಹೆಚ್ಚಿನ ಮನ್ನಣೆ ಸಿಗುವುದಿಲ್ಲವೆಂದು ಭಾವಿಸಿ ಕಾಂಗ್ರೆಸ್ ಹೈಕಮಾಂಡ್ ತಾನೇ ಪ್ರಮುಖ ಮಠಗಳ ಸ್ವಾಮೀಜಿಗಳೊಂದಿಗೆ ನೇರ ಸಂಪರ್ಕ ಇಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಪ್ರಯತ್ನ ನಡೆಸಿದೆ.

ಈಗ ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಹೈಕಮಾಂಡ್ ರಾಹುಲ್ ಗಾಂಧಿ ಬುಧವಾರ ಬೆಳಿಗ್ಗೆ ಪ್ರಮುಖ ಲಿಂಗಾಯತ ಮಠಗಳಲ್ಲಿ ಒಂದಾದ ಚಿತ್ರದುರ್ಗ ಬೃಹನ್ಮಠಕ್ಕೆ ಬೇಟಿ ನೀಡಿ ಅಲ್ಲಿ ಸ್ವಾಮೀಜಿಗಳ ಸಭೆ ನಡೆಸಿ ಆಶೀರ್ವಾದ ಪಡೆದಿದ್ದಾರೆ. ಕಳೆದ ಏಪ್ರಿಲ್ ನಲ್ಲಿ ರಾಹುಲ್ ಗಾಂಧಿ ತುಮಕೂರಿನ ಸಿದ್ದಗಂಗಾ ಮಠಕ್ಕೂ ಭೇಟಿ ನೀಡಿದ್ದರು. ಸುತ್ತೂರು ಶ್ರೀಗಳ ಜತೆಗೂ ಕಾಂಗ್ರೆಸ್ ಹೈಕಮಾಂಡ್ ಉತ್ತಮ ಬಾಂಧವ್ಯವನ್ನು ಹೊಂದಿದೆ.

ಮಠಗಳಿಗೆ ಭೇಟಿ ಏಕೆ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಕ್ಷೇತ್ರಗಳನ್ನು ಗೆದ್ದು ಅಧಿಕಾರಕ್ಕೆ ಬರಲು ಮಠಗಳ ಬೆಂಬಲ ಅತ್ಯಗತ್ಯವಾಗಿದೆ. ಅಪಾರ ಪ್ರಮಾಣದ ಭಕ್ತರನ್ನು ಹೊಂದಿರುವ ಲಿಂಗಾಯತ ಮಠದ ಶ್ರೀಗಳು ಸಂದೇಶ ನೀಡಿದರೆ ಪಕ್ಷದ ಅಭ್ಯರ್ಥಿಗಳ ಗೆಲವು ಸುಲಭವಾಗಲಿದೆ ಎನ್ನುವ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಹೈಕಮಾಂಡ್ ಈಗ ಮಠಗಳ ಓಲೈಕೆ ರಾಜಕಾರಣದಲ್ಲಿ ತೊಡಗಿವೆ.

ವೀರಶೈವ ಲಿಂಗಾಯತ ಸಮುದಾಯ ರಾಜ್ಯದ 224 ವಿಧಾನಸಭೆ ಕ್ಷೇತ್ರಗಳ ಪೈಕಿ ಅಂದಾಜು 150 ವಿಧಾನಸಭೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ. ಲಿಂಗಾಯತರ ಬೆಂಬಲ ದೊರೆತರೆ ಅಧಿಕಾರಕ್ಕೆ ಬರುವ ದಾರಿ ಸುಗಮವಾಗುತ್ತದೆ. ಲಿಂಗಾಯತ ಸಮುದಾಯದ ಜತೆಗೆ ಸ್ವಾಮೀಜಿಗಳು ಇತರೆ ಸಮುದಾಯದ ಭಕ್ತರನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಹೊಂದಿದ್ದರಿಂದ ಚುನಾವಣೆಯಲ್ಲಿ ಅನುಕೂಲವಾಗುತ್ತದೆ ಎನ್ನುವ ಲೆಕ್ಕಾಚಾರವನ್ನೂ ಕಾಂಗ್ರೆಸ್ ಮತ್ತು ಬಿಜೆಪಿ ಹೈಕಮಾಂಡ್ ಇಟ್ಟುಕೊಂಡಿವೆ.

ರಾಜ್ಯ ವಿಧಾನ ಸಭೆಯಲ್ಲಿ ಬಿಜೆಪಿ ಪಕ್ಷ 43, ಕಾಂಗ್ರೆಸ್ 14 ಹಾಗು ಜೆಡಿಎಸ್ 3 ವೀರಶೈವ ಲಿಂಗಾಯತ ಶಾಸಕರನ್ನು ಹೊಂದಿವೆ. ಲಿಂಗಾಯತ ಶಾಸಕರ ಗೆಲುವಿನ ಜೊತೆಗೆ ಉಳಿದ ಜನಾಂಗದ ಶಾಸಕರ ಗೆಲುವಿನಲ್ಲೂ ಲಿಂಗಾಯತ ಸಮುದಾಯದ ನಿರ್ಣಾಯಕ ಪಾತ್ರ ಇರುವುದರಿಂದ ಮಠಾಧೀಶರ ಕೃಪಾಕಟಾಕ್ಷಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಹೈಕಮಾಂಡ್ ಹಾತೊರೆಯುತ್ತಿವೆ.

ಓದಿ: ಸಚಿವ ಪ್ರಭು ಚೌವ್ಹಾಣ್ ಹೆಸರಿನಲ್ಲಿ ಸಹಿ ಮಾಡಿ ನಕಲಿ ನೇಮಕಾತಿ ಆದೇಶ ಹೊರಡಿಸಿದ ಕಿಡಿಗೇಡಿಗಳು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.