ETV Bharat / state

ಬಿಎಸ್​ವೈ ಮನೆ ಮೇಲೆ ದಾಳಿ ಹಿಂದೆ ಬಿಜೆಪಿ ಕುತಂತ್ರ: ಡಿ.ಕೆ. ಶಿವಕುಮಾರ್

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ ನಡೆಸಿರುವ ಹಿಂದೆ ಬಿಜೆಪಿಯ ಆಂತರಿಕ ಕುತಂತ್ರ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಹೇಳಿದ್ದಾರೆ.

Etv Bharat
ಬಿಎಸ್​ವೈ ಮನೆ ಮೇಲೆ ದಾಳಿ ಹಿಂದೆ ಬಿಜೆಪಿ ಕುತಂತ್ರ: ಡಿ.ಕೆ. ಶಿವಕುಮಾರ್
author img

By

Published : Mar 28, 2023, 1:31 PM IST

ಬಿಎಸ್​ವೈ ಮನೆ ಮೇಲೆ ದಾಳಿ ಹಿಂದೆ ಬಿಜೆಪಿ ಕುತಂತ್ರ: ಡಿ.ಕೆ. ಶಿವಕುಮಾರ್

ಬೆಂಗಳೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಆಂತರಿಕ ಕುತಂತ್ರದ ಭಾಗವಾಗಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಮೀಸಲಾತಿ ವಿಚಾರದಲ್ಲಿ ಗೊಂದಲ ಮೂಡಿಸಿರುವವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಜನ ತಮಗೆ ಅನ್ಯಾಯ ಆದಾಗ ಅಧಿಕಾರದಲ್ಲಿರುವವರ ಮೇಲೆ ಆಕ್ರೋಶ ವ್ಯಕ್ತಪಡಿಸುವುದು ಸಹಜ. ಆದರೆ, ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳು, ಸಚಿವರ ಮನೆ ಮೇಲೆ ದಾಳಿ ಆಗದೆ ಯಾವುದೇ ಅಧಿಕಾರ ಇಲ್ಲದ ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ ಆಗಿದೆ ಎಂದರೆ ಇದು ಬಿಜೆಪಿಯ ಕುತಂತ್ರಕ್ಕೆ ಸಾಕ್ಷಿಯಲ್ಲದೆ ಮತ್ತೇನು ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ದಾಳಿ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿತ್ತು. ಈಗ ಗೃಹ ಸಚಿವ ಅಮಿತ್ ಶಾ ಅವರು ಯಡಿಯೂರಪ್ಪ ಅವರ ಮನೆಗೆ ಹೋಗಿ ಅವರ ಜತೆ ಉತ್ತಮ ಸಂಬಂಧ ಹೊಂದಿರುವಂತೆ ತೋರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿದೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಆಂತರಿಕವಾಗಿ ಯಡಿಯೂರಪ್ಪ ಅವರನ್ನು ನಿಯಂತ್ರಿಸಲು ಸಾಕಷ್ಟು ಒತ್ತಡ ಹೇರಲಾಗುತ್ತಿದೆ. ನಾನು ಈಗ ಆ ವಿಚಾರದ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದರು.

ಮೀಸಲಾತಿ ವಿಚಾರದಲ್ಲಿ ದೇಶದಲ್ಲೇ ಗೊಂದಲ : ಈ ಮೀಸಲಾತಿ ವಿಚಾರ ಕೇವಲ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ಗೊಂದಲ ಮೂಡಿಸಿದೆ. ಬೇರೆ ರಾಜ್ಯಗಳಲ್ಲಿ ಈಗಾಗಲೇ ಇಂತಹ ಗೊಂದಲದ ಮೀಸಲಾತಿ ತಂದಾಗ ಅದರ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟಿದೆ. ಆದರೂ ಈ ಸರ್ಕಾರ ಜನರಿಗೆ ವಂಚಿಸಲು ಇಬ್ಬರು ಸಚಿವರು ಕುಳಿತು ಈ ಸುಳ್ಳು ಮೀಸಲಾತಿಗೆ ಹೆಚ್ಚಳಕ್ಕೆ ಮುಂದಾಗಿದ್ದಾರೆ. ಯಾವ ವರದಿ ಆಧಾರದ ಮೇಲೆ ಸರ್ಕಾರ ಈ ತೀರ್ಮಾನ ಮಾಡಿದೆ?, ಹಿಂದುಳಿದ ವರ್ಗಗಳ ಆಯೋಗ ಕಳೆದ ಡಿಸೆಂಬರ್ ನಲ್ಲಿ ನೀಡಿದ ಮಧ್ಯಂತರ ವರದಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿ ಎಂದು ತಿಳಿಸಿದೆಯೇ? ಮಧ್ಯಂತರ ವರದಿ ಮೇಲೆ ಮೀಸಲಾತಿ ಹೆಚ್ಚಳ ಮಾಡಲು ಸಾಧ್ಯವೇ? ಮೀಸಲಾತಿ ಹೆಚ್ಚಳವಾಗಲಿ ಅಥವಾ ಒಳ ಮೀಸಲಾತಿ ಆಗಲಿ, ಸರಿಯಾದ ಅಧ್ಯಯನ ವರದಿ ಆಧರಿಸಿ, ಸಂವಿಧಾನದಲ್ಲಿ ತಿದ್ದುಪಡಿ ತಂದು ಜಾರಿಗೆ ತರಬೇಕೆ ಹೊರತು ಕೇವಲ ಚುನಾವಣೆ ಗಿಮಿಕ್ ಮಾಡಲು ಏಕಾಏಕಿ ಆದೇಶ ನೀಡಿದರೆ ಜಾರಿಗೆ ಬರುವುದಿಲ್ಲ ಎಂದು ಹೇಳಿದರು.

ಅಲ್ಪಸಂಖ್ಯಾತರ ಮೀಸಲಾತಿ ಕಸಿದು ನಮಗೆ ನೀಡಿ ಎಂದು ಒಕ್ಕಲಿಗ ಹಾಗೂ ಲಿಂಗಾಯತ ಸ್ವಾಮೀಜಿಗಳು ಕೇಳಿದ್ದರೇ? ಒಕ್ಕಲಿಗರು ಹಾಗೂ ಲಿಂಗಾಯತರು ತಮ್ಮ ಜನಸಂಖ್ಯೆ ಆಧಾರದ ಮೇಲೆ ಕ್ರಮವಾಗಿ 12% ಹಾಗೂ 15% ಹೆಚ್ಚಳಕ್ಕೆ ಬೇಡಿಕೆ ಇಡಲಾಗಿತ್ತು. ಮುಸಲ್ಮಾನರಿಂದ ಕಸಿದು 2% ಮೀಸಲಾತಿಗೆ ಬೇಡಿಕೆ ಇಟ್ಟಿರಲಿಲ್ಲ. ಈಗಾಗಲೇ ಮೀಸಲಾತಿ 56% ಆಗಿದ್ದು, ಒಕ್ಕಲಿಗರು ಲಿಂಗಾಯತರು ಮೀಸಲಾತಿ ಸೇರಿಸಿ ವಿಸ್ತರಣೆ ಮಾಡಲಿ ಎಂದು ಹೇಳಿದರು.

ಮಾಡಾಳ ವಿರೂಪಾಕ್ಷಪ್ಪ ಅವರ ಬಂಧನದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಲೋಕಾಯುಕ್ತ ಪೊಲೀಸರು ಕಾನೂನಿನ ಪ್ರಕಾರ ಕರ್ತವ್ಯ ಮಾಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಕೆಲಸ ಅವರು ಮಾಡಲಿ. ಇಷ್ಟು ದಿನ ಬಿಜೆಪಿ ಸರ್ಕಾರ ಅವರನ್ನು ರಕ್ಷಣೆ ಮಾಡಿತ್ತು. ಅವರಿಗೆ ನಿರೀಕ್ಷಣಾ ಜಾಮೀನು ಸಿಗುವವರೆಗೂ ಬಂಧಿಸಿರಲಿಲ್ಲ.' ಎಂದು ಟೀಕಿಸಿದರು.

ಮಾ 30ಕ್ಕೆ ಎರಡನೇ ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಎರಡನೇ ಕಾಂಗ್ರೆಸ್​ ಅಭ್ಯರ್ಥಿ ಪಟ್ಟಿ ಬಿಡುಗಡೆ ವಿಚಾರವಾಗಿ ಮಾತನಾಡಿ, ಮಾರ್ಚ್ 30ರ ನಂತರ ಪಟ್ಟಿ ಬಿಡುಗಡೆ ಮಾಡಲಾಗುವುದು. ಮೊದಲ ಪಟ್ಟಿಯಲ್ಲಿ ಯಾವುದಾದರೂ ಗೊಂದಲ ಕಾಣುತ್ತಿದೆಯೆ? ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ' ಎಂದು ತಿಳಿಸಿದರು.

ಎರಡೂ ರಾಷ್ಟ್ರೀಯ ಪಕ್ಷಗಳು ತಮ್ಮನ್ನು ಸಂಪರ್ಕಿಸಿವೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, 'ಇದು ಸುಳ್ಳು. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ. ಯಾರ ಬೆಂಬಲವನ್ನು ಪಡೆಯುವ ಅಗತ್ಯವಿಲ್ಲ. ಕಾಂಗ್ರೆಸ್ ಪಕ್ಷ ಯಾರನ್ನು ಸಂಪರ್ಕ ಮಾಡಿಲ್ಲ. ಅವರನ್ನು ಯಾರೂ ಸಂಪರ್ಕಿಸಿದ್ದಾರೆ ಎಂದು ಹೆಸರು ಬಹಿರಂಗಪಡಿಸಲಿ' ಎಂದು ತಿಳಿಸಿದರು.

ಇದನ್ನೂ ಓದಿ : ಬಿ.ಎಸ್.ಯಡಿಯೂರಪ್ಪ ಮನೆ ಮೇಲೆ ಉದ್ದೇಶಪೂರ್ವಕ ದಾಳಿ: ಸಚಿವ ಆರಗ ಜ್ಞಾನೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.