ETV Bharat / state

ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ: ಶಮನವಾಗುತ್ತಾ ‘ಸಿಡಿ’ದ ಶಾಸಕರ ಸಿಟ್ಟು? - ಯಡಿಯೂರಪ್ಪ

ಸಂಪುಟ ವಿಸ್ತರಣೆ ನಂತರ ತಲೆದೋರಿರುವ ಅಸಮಾಧಾನದ ಕುರಿತು ಮಹತ್ವದ ಚರ್ಚೆ ನಡೆಸಲಾಗುತ್ತದೆ. ವಿಶೇಷವಾಗಿ ಸಿಡಿ ವಿಷಯದ ವಿವಾದಕ್ಕೆ ಬ್ರೇಕ್ ಹಾಕುವುದು, ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ಶಮನಗೊಳಿಸಿ ಪರಿಸ್ಥಿತಿಯನ್ನು ತಿಳಿಗೊಳಿಸುವ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

bjp-core-committee-meeting-tomorrow
ಅಮಿತ್ ಶಾ ನೇತೃತ್ವದಲ್ಲಿ ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ
author img

By

Published : Jan 15, 2021, 8:38 PM IST

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಾಳೆ ರಾಜ್ಯ ಬಿಜೆಪಿ ಕೋರ್ ಕಮಿಟಿ‌ ಸಭೆ ನಡೆಯಲಿದ್ದು, ಸರ್ಕಾರ ಹಾಗೂ ಪಕ್ಷದಲ್ಲಿನ ಎಲ್ಲಾ ಅಸಮಾಧಾನಕ್ಕೆ ಪರಿಹಾರ ನೀಡಲಿದ್ದಾರೆ ಎನ್ನಲಾಗಿದೆ.

ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಅಮಿತ್ ಶಾ ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮತ್ತು ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜನೆಗೊಂಡಿರುವ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ನಂತರ ಪಕ್ಷದ ಚಟುವಟಿಕೆ ಸಮಯ ಮೀಸಲಿರಿಸಿದ್ದಾರೆ.

ನಾಳೆ ಸಂಜೆ 7.30ಕ್ಕೆ ನಗರದ ಖಾಸಗಿ ತಾರಾ ಹೋಟೆಲ್​​​​ನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಡಿ.ವಿ ಸದಾನಂದಗೌಡ, ಪ್ರಹ್ಲಾದ್ ಜೋಶಿ, ಡಿಸಿಎಂ ಗೋವಿಂದ ಕಾರಜೋಳ, ಸಚಿವ ಆರ್. ಅಶೋಕ್, ಜಗದೀಶ್ ಶೆಟ್ಟರ್,‌ ಕೆ.ಎಸ್.ಈಶ್ವರಪ್ಪ, ಅರವಿಂದ ಲಿಂಬಾವಳಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಸಂಪುಟ ವಿಸ್ತರಣೆ ನಂತರ ತಲೆದೂರಿರುವ ಅಸಮಾಧಾನದ ಕುರಿತು ಮಹತ್ವದ ಚರ್ಚೆ ನಡೆಸಲಾಗುತ್ತದೆ. ವಿಶೇಷವಾಗಿ ಸಿಡಿ ವಿಷಯದ ವಿವಾದಕ್ಕೆ ಬ್ರೇಕ್ ಹಾಕುವುದು, ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ಶಮನಗೊಳಿಸಿ ಪರಿಸ್ಥಿತಿಯನ್ನು ತಿಳಿಗೊಳಿಸುವ ಕುರಿತು ಚರ್ಚೆ ನಡೆಸಲಾಗುತ್ತದೆ.

ನಂತರ ಬೆಳಗಾವಿ ಲೋಕಸಭೆ, ಬಸವಕಲ್ಯಾಣ, ಮಸ್ಕಿ ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ಸಿದ್ಧತೆ ಕುರಿತು ಮಹತ್ವದ ಸಮಾಲೋಚನೆ ನಡೆಯಲಿದೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ.

ನಾಯಕತ್ವ ಬದಲಾವಣೆ ವಿಷಯಕ್ಕೆ ತಾತ್ಕಾಲಿಕ ತೆರೆ ಎಳೆಯಲಾಗಿದೆ. ಆದರೂ ಈ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಸಿ.ಪಿ.ಯೋಗೇಶ್ವರ್​​ 'ಆಪರೇಷನ್​ ಕಮಲ' ಮಾಡಲು ಶ್ರಮ ವಹಿಸಿದ್ದಾರೆ: ಎಂಟಿಬಿ ನಾಗರಾಜ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.