ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಅರುಣ್ ಸಿಂಗ್ ನೇಮಕಗೊಂಡ ಹಿನ್ನೆಲೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಮಿತಿಯನ್ನು ಪುನರ್ ರಚಿಸಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ. ಸಿಎಂ ಆಪ್ತರಾದ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಚಿವ ಸಿ.ಎಂ.ಉದಾಸಿ ಅವರಿಗೆ ಕೋಕ್ ನೀಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಡಿ.ವಿ.ಸದಾನಂದಗೌಡ, ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿ, ಸಚಿವರಾದ ಆರ್.ಅಶೋಕ್,ಬಿ. ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಕೋರ್ ಕಮಿಟಿ ಸದಸ್ಯರಾಗಿದ್ದಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಸಹ ಉಸ್ತುವಾರಿ ಡಿ.ಕೆ.ಅರುಣಾ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರನ್ನು ವಿಶೇಷ ಆಹ್ವಾನಿತರನ್ನಾಗಿ ನೇಮಕ ಮಾಡಲಾಗಿದೆ.
ಓದಿ:ಅನ್ನದಾತರಿಂದ ನಾಳೆ ಭಾರತ್ ಬಂದ್: ಏನಿರುತ್ತೆ, ಏನಿರಲ್ಲ? ನೀವು ಗಮನಿಸಬೇಕಾದ ಸಂಗತಿ
ಸಿಎಂ ಆಪ್ತರಿಬ್ಬರಿಗೆ ಕೊಕ್:
ಸಿಎಂ ಯಡಿಯೂರಪ್ಪ ಆಪ್ತರಾದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಹಾಗೂ ಬಿಜೆಪಿ ಹಿರಿಯ ನಾಯಕ ಮಾಜಿ ಸಚಿವ ಸಿ.ಎಂ.ಉದಾಸಿ ಅವರನ್ನು ಕೋರ್ ಕಮಿಟಿಯಿಂದ ಕೈಬಿಟ್ಟು, ಲಕ್ಷ್ಮಣ ಸವದಿ, ಅಶ್ವತ್ಥ ನಾರಾಯಣ ಅವರಿಗೆ ಅವಕಾಶ ಕಲ್ಪಿಸಲಾಗಿದೆ.