ETV Bharat / state

ಆಕಾಂಕ್ಷಿಗಳ ಬೆಂಬಲಿಗರಿಂದ ಪ್ರತಿಭಟನೆ ಆತಂಕ: ಪಕ್ಷದ ಕಚೇರಿಯಿಂದ ಖಾಸಗಿ ರೆಸಾರ್ಟ್​ಗೆ ಸಭೆ ಶಿಫ್ಟ್! - ಈಟಿವಿ ಭಾರತ ಕನ್ನಡ

ಇಂದು ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆಯಬೇಕಿದ್ದ ಬಿಜೆಪಿ ಚುನಾವಣಾ ಸಮಿತಿ ಸಭೆಯನ್ನು ಖಾಸಗಿ ರೆಸಾರ್ಟ್​ಗೆ ಸ್ಥಳಾಂತರಿಸಲಾಗಿದೆ.

ಬಿಜೆಪಿ ಚುನಾವಣಾ ಸಮಿತಿ ಸಭೆ
ಬಿಜೆಪಿ ಚುನಾವಣಾ ಸಮಿತಿ ಸಭೆ
author img

By

Published : Apr 4, 2023, 11:25 AM IST

ಬೆಂಗಳೂರು: ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆಯಬೇಕಿದ್ದ ರಾಜ್ಯ ಚುನಾವಣಾ ಸಮಿತಿ ಸಭೆಯನ್ನು ಖಾಸಗಿ ರೆಸಾರ್ಟ್​ಗೆ ಸ್ಥಳಾಂತರ ಮಾಡಲಾಗಿದೆ. ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರ ಪ್ರತಿಭಟನೆ ಆತಂಕದಿಂದಾಗಿ ಪಕ್ಷದ ಕಚೇರಿಯಿಂದ ರೆಸಾರ್ಟ್​​​ಗೆ ಸಭೆಯನ್ನು ಶಿಫ್ಟ್ ಮಾಡಲಾಗಿದೆ ಎನ್ನಲಾಗಿದೆ. ಇಂದು ಬೆಳಗ್ಗೆ 10 ಗಂಟೆಯಿಂದ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆಯಬೇಕಿದ್ದ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆಯನ್ನು ನೆಲಮಂಗಲದ ಮಾದನಾಯಕನಹಳ್ಳಿಯಲ್ಲಿರುವ ಗೋಲ್ಡನ್ ಪಾಮ್ಸ್ ರೆಸಾರ್ಟ್​​ಗೆ ಸ್ಥಳಾಂತರ ಮಾಡಲಾಗಿದೆ.

ಬೆಳಗ್ಗೆ 10 ರಿಂದ ಸಂಜೆ 7ಗಂಟೆವರೆಗೂ ಸಭೆಗೆ ಸಮಯ ನಿಗದಿಪಡಿಸಿದ್ದು, ಅದೇ ಸಮಯದಲ್ಲಿ ಪಕ್ಷದ ಕಚೇರಿ ಬದಲು ರೆಸಾರ್ಟ್ ನಲ್ಲಿ ಸಭೆ ನಡೆಯಲಿದೆ. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಸಭೆ ನಡೆಯಲಿದೆ. ಪಕ್ಷದ ರಾಜ್ಯ ಕೋರ್ ಕಮಿಟಿ ಸದಸ್ಯರು ಮತ್ತು ಚುನಾವಣಾ ಸಮಿತಿ ಸದಸ್ಯರು ಈ ಸಭೆಯಲ್ಲಿ ಭಾಗವಹಿಸುತ್ತಿದ್ದು, ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಸೇರಿದಂತೆ ಆಹ್ವಾನಿತರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈಗಾಗಲೇ ಎರಡು ದಿನಗಳ ಕಾಲ ಜಿಲ್ಲಾ ಕೋರ್ ಕಮಿಟಿಗಳಿಂದ ಅಭ್ಯರ್ಥಿಗಳ ಕುರಿತು ಕ್ಷೇತ್ರವಾರು ಅಭಿಪ್ರಾಯ ಸಂಗ್ರಹ ಮಾಡಲಾಗಿದ್ದು, ಜಿಲ್ಲಾ ಸಮಿತಿಗಳ ಶಿಫಾರಸು, ಪಕ್ಷದ ಆಂತರಿಕ ಸಮೀಕ್ಷಾ ವರದಿ, ವರ್ಚಸ್ಸು ಇತ್ಯಾದಿಗಳ ಆಧಾರದಲ್ಲಿ ಇದೀಗ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸುವ ಕೆಲಸ ಆರಂಭವಾಗಲಿದೆ. ಈಗಾಗಲೇ ಬಂದಿರುವ ಪಟ್ಟಿಯನ್ನು ಶಾರ್ಟ್ ಲಿಸ್ಟ್ ಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಲಾಗುತ್ತದೆ. ಏ.8 ರಂದು ದೆಹಲಿಯಲ್ಲಿ ಪಕ್ಷದ ಸಂಸದೀಯ ಮಂಡಳಿ ಸಭೆ ನಿಗದಿಯಾಗಿದ್ದು, ಆ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ ಹಾಗಾಗಿ ರಾಜ್ಯ ಸಮಿತಿ ತನ್ನ ಪಟ್ಟಿಯನ್ನು ಅಂತಿಮಗೊಳಿಸಿ ನಾಳೆ ರಾತ್ರಿಯೇ ದೆಹಲಿಗೆ ಕಳುಹಿಸಿಕೊಡಲಿದೆ.

ಇದನ್ನೂ ಓದಿ: ವಿಜಯೇಂದ್ರ ವರುಣಾದಿಂದ ಸ್ಪರ್ಧಿಸುವುದಿಲ್ಲ, ಶಿಕಾರಿಪುರ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಾರೆ: ಮತ್ತೊಮ್ಮೆ ಬಿಎಸ್​ವೈ ಸ್ಪಷ್ಟನೆ

ಪ್ರತಿಭಟನೆ ಬಿಸಿಗೆ ಸಭೆ ಶಿಫ್ಟ್: ಕೆಲ ಕ್ಷೇತ್ರಗಳಲ್ಲಿ ಎರಡು ಬಣಗಳು ಸೃಷ್ಟಿಯಾಗಿದ್ದು, ತಮ್ಮ ತಮ್ಮ ನಾಯಕನ ಪರ ಟಿಕೆಟ್ ಲಾಭಿ ನಡೆಸಲು ಶುರು ಮಾಡಿದ್ದಾರೆ. ಪಕ್ಷದ ಕಚೇರಿ ಮಂದೆ ಬಂದು ಪ್ರತಿಭಟನೆ ನಡೆಸಿ ಟಿಕೆಟ್ ಬೇಡಿಕೆ ಇಡಲಿದ್ದಾರೆ ಸಭೆ ನಡೆಯುವಾಗ ಈ ರೀತಿ ಪ್ರತಿಭಟನೆ ಎದುರಾದಲ್ಲಿ ಸಭೆಗೆ ಅಡ್ಡಿಯಾಗಲಿದೆ ಎನ್ನುವ ಕಾರಣಕ್ಕೆ ನಗರದ ಹೊರವಲಯದ ಖಾಸಗಿ ರೆಸಾರ್ಟ್ ಗೆ ಚುನಾವಣಾ ಸಮಿತಿ ಸಭೆಯನ್ನು ಸ್ಥಳಾಂತರ ಮಾಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಗುರುವಾರ ಇಲ್ಲವೇ ಶುಕ್ರವಾರ ಹಾಸನದ ಟಿಕೆಟ್ ಫೈನಲ್‌ : ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ

ಇದನ್ನೂ ಓದಿ: ಜೆಡಿಎಸ್ ತೊರೆದು ಮಾತೃಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಮೊಮ್ಮಗ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.