ಬೆಂಗಳೂರು:ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಟ ಪ್ರಕಾಶ್ ರೈ ವಿರುದ್ಧ ಬಿಜೆಪಿ ಕಾರ್ಯಕಾರಿ ಸದಸ್ಯ ಗಿರೀಶ್ ನಾಯ್ಡು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಪ್ರಕಾಶ್ ರೈ ತಮಿಳುನಾಡಲ್ಲಿ ಎರಡು, ತೆಲಂಗಾಣದಲ್ಲಿ ಒಂದು, ಬೆಂಗಳೂರಿನ ಶಾಂತಿನಗರ ಸೇರಿದಂತೆ ಮೂರು ರಾಜ್ಯಗಳಲ್ಲಿ ನಾಲ್ಕು ಮತದಾರ ಗುರುತಿನ ಚೀಟಿಗಳನ್ನು ಹೊಂದಿರುವುದಾಗಿ ಆರೋಪಿಸಿ ದೂರು ನೀಡಿದ್ದಾರೆ. ಅವರ ಉಮೇದುವಾರಿಕೆ ಕೂಡಲೇ ರದ್ದುಗೊಳಿಸಬೇಕು ಮತ್ತು ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಕಾರ್ಯಕಾರಿ ಸದಸ್ಯ ಅಯ್ಯಪ್ಪನಗರ ಗಿರೀಶ್ ನಾಯ್ಡು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾಗಿ ತಿಳಿಸಿದರು.