ಬೆಂಗಳೂರು: ಮಹಾರಾಷ್ಟ್ರ ಹಾಗೂ ಹರಿಯಾಣ ಎರಡು ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಸರ್ಕಾರ ಆಡಳಿತ ನಡೆಸುತ್ತಿದೆ. ಈಗ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿದ್ದು, ಅಲ್ಲಿ ನಿಶ್ಚಿತವಾಗಿ ನಮ್ಮ ಸರ್ಕಾರ ಬರಲಿದೆ ಎಂದರು.
ಹರಿಯಾಣದಲ್ಲಿಯೂ ಬಿಜೆಪಿ ಸರ್ಕಾರ ರಚನೆಯಾಗಲಿದ್ದು, ಕಡಿಮೆ ಸ್ಥಾನ ಬಂದಿದ್ದರೂ ಪಕ್ಷೇತರರೊಂದಿಗೆ ಸೇರಿ ಸರ್ಕಾರ ರಚನೆ ಮಾಡಲಿದ್ದೇವೆ ಎಂದಿದ್ದಾರೆ.