ETV Bharat / state

ವಿಧಾನ ಪರಿಷತ್ ಚುನಾವಣೆಗೆ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ - Vidhan Parishad elections

ಬಿಜೆಪಿ 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಉಸ್ತುವಾರಿಗಳನ್ನು ನೇಮಕ ಮಾಡಿದೆ.

bjp-has-appointed-in-charges-for-vidhan-parishad-elections
ವಿಧಾನ ಪರಿಷತ್ ಚುನಾವಣೆಗೆ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ
author img

By ETV Bharat Karnataka Team

Published : Aug 26, 2023, 6:22 PM IST

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ನಡೆಯುವ ವಿಧಾನ ಪರಿಷತ್​ನ 7 ಸ್ಥಾನಗಳ ಚುನಾವಣೆಗೆ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿ ಬಿಜೆಪಿ ಚುನಾವಣಾ ಸಿದ್ಧತಾ ಕಾರ್ಯವನ್ನು ಆರಂಭಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಸೋತವರಿಗೂ ಜವಾಬ್ದಾರಿ ನೀಡಲಾಗಿದ್ದು, ಸಂಘಟನೆಗೆ ಬಳಸಿಕೊಳ್ಳಲು ಪಕ್ಷ ಮುಂದಾಗಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿ, 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ ಪ್ರಮುಖರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಮಾಜಿ ಸಚಿವ ಬಿ ಶ್ರೀರಾಮುಲು, ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸಿ ಟಿ ರವಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಆರ್ ಅಶೋಕ್, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಮಾಜಿ ಸಿಎಂ ಡಿ ವಿ ಸದಾನಂದಗೌಡ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಿ ಟಿ ರವಿ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಮಾಜಿ ಡಿಸಿಎಂ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಬಿ ಶ್ರೀರಾಮುಲು, ಸಿ ಟಿ ರವಿಗೆ ಅವಕಾಶ ನೀಡುವ ಜೊತೆಗೆ ಚುನಾವಣೆಗೆ ನಿಲ್ಲದೆ ಪಕ್ಷ ಸೂಚಿಸಿದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬಂದಿರುವ ಈಶ್ವರಪ್ಪ ಅವರಿಗೆ ಮತ್ತೊಮ್ಮೆ ಹೆಚ್ಚಿನ ಜವಾಬ್ದಾರಿ ನೀಡಿ ಆಯನೂರು ಮಂಜುನಾಥ್ ರಾಜೀನಾಮೆಯಿಂದ ತೆರವಾದ ಕ್ಷೇತ್ರವನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಹೊಣೆ ನೀಡಲಾಗಿದೆ.

ಇದನ್ನೂ ಓದಿ: ಬಿಜೆಪಿ ಸೆಂಟ್ರಲ್ ಲೀಡರ್ ಶಿಪ್ ರಾಜ್ಯ ನಾಯಕರನ್ನು ಕ್ಯಾರೇ ಮಾಡುತ್ತಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.