ETV Bharat / state

ಉಪಚುನಾವಣೆ, ಬಿಹಾರ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ: ಕ್ಯಾಪ್ಟನ್ ಕಾರ್ಣಿಕ್

author img

By

Published : Nov 10, 2020, 11:19 PM IST

ಉಪಚುನಾವಣೆಯಲ್ಲಿ ಗೆಲುವು ಮತ್ತು ಬಿಹಾರದಲ್ಲೂ ಗರಿಷ್ಠ ಸ್ಥಾನಗಳನ್ನು ಪಡೆಯುವ ಮೂಲಕ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ. ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರಗಳ ಗೆಲುವಿಗೆ ಕ್ಯಾ.ಗಣೇಶ್ ಕಾರ್ಣಿಕ್ ಸಂತಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್
ಬಿಜೆಪಿ ರಾಜ್ಯ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್

ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಗೆಲುವು ಮತ್ತು ಬಿಹಾರದಲ್ಲೂ ಗರಿಷ್ಠ ಸ್ಥಾನಗಳನ್ನು ಪಡೆಯುವ ಮೂಲಕ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್ ಅಭಿಪ್ರಾಯಪಟ್ಟಿದ್ದಾರೆ.

ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರಗಳ ಗೆಲುವಿಗೆ ಕಾರ್ಣಿಕ್ ಸಂತಸ ವ್ಯಕ್ತಪಡಿಸಿದ್ದಾರೆ. ಶಿರಾದಲ್ಲಿ ನಡೆದ ಹಿಂದಿನ ಚುನಾವಣೆಯಲ್ಲಿ ಬಿಜೆಪಿ ಕೇವಲ ಸುಮಾರು 10 ಸಾವಿರ ಮತಗಳನ್ನಷ್ಟೇ ಪಡೆಯಲು ಸಾಧ್ಯವಾಗಿತ್ತು. ಆದರೆ ಇಂದು ಗೆದ್ದಿದ್ದೇವೆ ಎಂದರು.

ಬಿಹಾರದಲ್ಲಿ 2015ರಲ್ಲಿ ಬಿಜೆಪಿ 157 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 53 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಅದು 110 ಕ್ಷೇತ್ರಗಳಲ್ಲಿ ಸ್ಪರ್ಧೆಗಿಳಿದು ಉತ್ತಮ ಸಾಧನೆ ಮಾಡಿದೆ. ಕೇಂದ್ರದ ನರೇಂದ್ರ ಮೋದಿ ಅಭಿವೃದ್ಧಿ ಪರ ಚಿಂತನೆ ಮತ್ತು ಚಟುವಟಿಕೆ ಹಾಗೂ ಬಿಹಾರದ ಸಮ್ಮಿಶ್ರ ರಾಜ್ಯ ಸರ್ಕಾರದ ಅಭಿವೃದ್ಧಿಯನ್ನು ಮತದಾರರು ಗುರುತಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿಹಾರದಲ್ಲಿ ಮಹ ಘಟಬಂಧನ್ ಅಧಿಕಾರಕ್ಕೆ ಬರಲಿದೆ ಎನ್ನುವ ಚುನಾವಣೋತ್ತರ ಸಮೀಕ್ಷೆಯನ್ನು ಬಿಹಾರದ ಮಹಾಜನತೆ ಅದರಲ್ಲೂ ವಿಶೇಷವಾಗಿ ಸಮೀಕ್ಷೆಯನ್ನು ಸುಳ್ಳು ಮಾಡಿದ್ದಾರೆ. ಮಧ್ಯಪ್ರದೇಶದಲ್ಲಿ ಉಪಚುನಾವಣೆ ನಡೆದ 28 ಸ್ಥಾನಗಳಲ್ಲಿ ಕೇವಲ ಎರಡು ಸ್ಥಾನಗಳು ಬಿಜೆಪಿ ಶಾಸಕರಿದ್ದರು. ಅಲ್ಲಿಯೂ ಪಕ್ಷವು ಉತ್ತಮ ಸಾಧನೆ ತೋರಿದೆ ಎಂದಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆ ಮತ್ತು ವಿವಿಧ ರಾಜ್ಯಗಳ 59 ವಿಧಾನಸಭಾ ಸ್ಥಾನಗಳ ಉಪಚುನಾವಣೆಗಳಲ್ಲೂ ಬಿಜೆಪಿ ಹಿನ್ನೆಡೆ ಅನುಭವಿಸಲಿದೆ ಎಂದು ಚುನಾವಣೋತ್ತರ ಸಮೀಕ್ಷೆಯಲ್ಲಿ ವಿಶ್ಲೇಷಿಸಲಾಗಿತ್ತು. ಆದರೆ ಪ್ರಧಾನಿ ಮೋದಿ ಅಭಿವೃದ್ಧಿ ಪರ ಚಿಂತನೆಗಳನ್ನು ಜನರು ಬೆಂಬಲಿಸಿರುವುದು ಇದೀಗ ಸ್ಪಷ್ಟಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ಈ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಗೆ ಆಶೀರ್ವಾದ ಮಾಡಿದ ಎಲ್ಲ ಮತದಾರ ಬಂಧುಗಳಿಗೆ ಪಕ್ಷ ಆತ್ಮೀಯವಾದ ಧನ್ಯವಾದಗಳನ್ನು ಸಮರ್ಪಿಸುತ್ತದೆ. ಚುನಾವಣೆಯ ಯಶಸ್ಸಿಗಾಗಿ ಅಹರ್ನಿಶಿ ದುಡಿದ ಪಕ್ಷದ ಎಲ್ಲ ಕಾರ್ಯಕರ್ತರಿಗೆ, ಪದಾಧಿಕಾರಿಗಳಿಗೆ ಮತ್ತು ಪ್ರಮುಖರಿಗೆ ಪಕ್ಷ ಆಭಾರವನ್ನು ವ್ಯಕ್ತಪಡಿಸುತ್ತದೆ ಎಂದು ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.