ಮತಾಂತರ ಒತ್ತಾಯಕ್ಕೆ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ: ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ ಹೈಕಮಾಂಡ್ - ತಮಿಳುನಾಡಿನ ತಂಜಾವೂರಿನಲ್ಲಿ ಮತಾಂತರ ಒತ್ತಾಯಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ
ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಅಪ್ರಾಪ್ತೆ ಆತ್ಮಹತ್ಯೆ ಪ್ರಕರಣ ಸಂಬಂಧ ವರದಿ ನೀಡುವಂತೆ ಬಿಜೆಪಿ ಹೈಕಮಾಂಡ್ ನಾಲ್ವರು ಸದಸ್ಯರ ಸಮಿತಿ ರಚಿಸಿದೆ.
![ಮತಾಂತರ ಒತ್ತಾಯಕ್ಕೆ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ: ಸತ್ಯಶೋಧನಾ ಸಮಿತಿ ರಚಿಸಿದ ಬಿಜೆಪಿ ಹೈಕಮಾಂಡ್ JP Nadda](https://etvbharatimages.akamaized.net/etvbharat/prod-images/768-512-14299971-thumbnail-3x2-sanju.jpg?imwidth=3840)
ಬೆಂಗಳೂರು: ತಮಿಳುನಾಡಿನ ತಂಜಾವೂರಿನಲ್ಲಿ ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಿದ್ದ ಹಾಸ್ಟೆಲ್ ವಾರ್ಡನ್ ಕಿರುಕುಳಕ್ಕೆ ಮನನೊಂದು ಅಪ್ರಾಪ್ತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ನಡೆದಿತ್ತು. ಈ ಘಟನೆ ಕುರಿತು ಸತ್ಯಾಂಶ ಪರಿಶೀಲಿಸಿ ವರದಿ ನೀಡಲು ಬಿಜೆಪಿ ಹೈಕಮಾಂಡ್ ನಾಲ್ವರು ಸದಸ್ಯರ ಸಮಿತಿ ರಚಿಸಿದೆ. ಅದರಲ್ಲಿ ಕರ್ನಾಟಕದಿಂದಲೂ ಒಬ್ಬರಿಗೆ ಅವಕಾಶ ನೀಡಲಾಗಿದೆ.
![bjp-high-command-set-up-committee-for-fact-finding](https://etvbharatimages.akamaized.net/etvbharat/prod-images/kn-bng-08-bjp-committee-farm-for-tamilnadu-student-suicide-case-script-7208080_27012022201720_2701f_1643294840_951.jpg)
ಮತಾಂತರಕ್ಕೆ ಒತ್ತಾಯಿಸುತ್ತಿದ್ದ ಘಟನೆಯಿಂದ ವಿಚಲಿತಳಾದ ವಿದ್ಯಾರ್ಥಿನಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಜನವರಿ 9ರಂದು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಜನವರಿ 19ರಂದು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ವರದಿ ನೀಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ನಾಲ್ವರು ಸದಸ್ಯರ ಸಮಿತಿ ರಚಿಸಿದ್ದಾರೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಮಧ್ಯಪ್ರದೇಶ ಸಂಸದೆ ಸಂಧ್ಯಾ ರಾಯ್, ತೆಲಂಗಾಣ ಬಿಜೆಪಿ ನಾಯಕಿ ವಿಜಯಶಾಂತಿ, ಮಹಾರಾಷ್ಟ್ರ ಬಿಜೆಪಿ ಮುಖಂಡೆ ಚಿತ್ರಾ ಹಾಗೂ ಕರ್ನಾಟಕ ಬಿಜೆಪಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ಅವರು ಸಮಿತಿ ಸದಸ್ಯರಾಗಿದ್ದು, ಆದಷ್ಟು ಬೇಗ ವರದಿ ನೀಡುವಂತೆ ಜೆ.ಪಿ. ನಡ್ಡಾ ಸೂಚನೆ ನೀಡಿದ್ದಾರೆ.
ಓದಿ: ನಾಳೆ ಸಿಎಂ ಬೊಮ್ಮಾಯಿಗೆ ಹುಟ್ಟುಹಬ್ಬದ ಸಂಭ್ರಮ: ಬರ್ತಡೇ ಸೆಲೆಬ್ರೇಷನ್ ಮಾಡಿಕೊಳ್ಳಲ್ಲ ಅಂದ್ರು ಸಿಂಪಲ್ ಸಿಎಂ