ಬೆಂಗಳೂರು : ರಾಜ್ಯದಲ್ಲಿನ ಬರ ಪರಿಸ್ಥಿತಿಯ ಮಾಹಿತಿ ನಿಮಗಿದೆ ಎಂದು ತೋರಿಸಲು ಪ್ರಯತ್ನಿಸುತ್ತಿದ್ದೀರೋ, ಅಥವಾ ನಿಮ್ಮದೇ ಪಕ್ಷ ಇದನ್ನು ನಿಭಾಯಿಸುವಲ್ಲಿ ಹೇಗೆ ಸೋತಿದೆ ಎಂದು ಪರೋಕ್ಷವಾಗಿ ತಿಳಿಸುತ್ತಿದ್ದೀರೋ? ಎಂದು ಬೆಳೆಹಾನಿ ಮರು ಸಮೀಕ್ಷೆಗೆ ಸಂಪುಟ ಉಪ ಸಮಿತಿ ರಚಿಸಿದ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.
-
ಮಾನ್ಯ @PriyankKharge ಅವರೇ,
— BJP Karnataka (@BJP4Karnataka) September 5, 2023 " class="align-text-top noRightClick twitterSection" data="
ಬರ ಪರಿಸ್ಥಿತಿಯ ಮಾಹಿತಿ ನಿಮಗಿದೆ ಎಂದು ತೋರಿಸಲು ಪ್ರಯತ್ನಿಸುತ್ತಿದ್ದೀರೋ ಅಥವಾ ನಿಮ್ಮದೇ ಪಕ್ಷ ಇದನ್ನು ನಿಭಾಯಿಸುವಲ್ಲಿ ಹೇಗೆ ಸೋತಿದೆ ಎಂದು ಪರೋಕ್ಷವಾಗಿ ತಿಳಿಸುತ್ತಿದ್ದೀರೋ?
ಕುಡಿಯುವ ನೀರಿನ ಸಮಸ್ಯೆ 37 ತಾಲೂಕುಗಳಲ್ಲಿ ಮಾತ್ರ ಎದುರಾಗಿದೆ ಎಂಬ ಮೂಲಕ ನಿಮ್ಮ ನಿರೀಕ್ಷೆ ಇನ್ನಷ್ಟು ಜಾಸ್ತಿಯಿತ್ತು… https://t.co/hPMwkcj7cA
">ಮಾನ್ಯ @PriyankKharge ಅವರೇ,
— BJP Karnataka (@BJP4Karnataka) September 5, 2023
ಬರ ಪರಿಸ್ಥಿತಿಯ ಮಾಹಿತಿ ನಿಮಗಿದೆ ಎಂದು ತೋರಿಸಲು ಪ್ರಯತ್ನಿಸುತ್ತಿದ್ದೀರೋ ಅಥವಾ ನಿಮ್ಮದೇ ಪಕ್ಷ ಇದನ್ನು ನಿಭಾಯಿಸುವಲ್ಲಿ ಹೇಗೆ ಸೋತಿದೆ ಎಂದು ಪರೋಕ್ಷವಾಗಿ ತಿಳಿಸುತ್ತಿದ್ದೀರೋ?
ಕುಡಿಯುವ ನೀರಿನ ಸಮಸ್ಯೆ 37 ತಾಲೂಕುಗಳಲ್ಲಿ ಮಾತ್ರ ಎದುರಾಗಿದೆ ಎಂಬ ಮೂಲಕ ನಿಮ್ಮ ನಿರೀಕ್ಷೆ ಇನ್ನಷ್ಟು ಜಾಸ್ತಿಯಿತ್ತು… https://t.co/hPMwkcj7cAಮಾನ್ಯ @PriyankKharge ಅವರೇ,
— BJP Karnataka (@BJP4Karnataka) September 5, 2023
ಬರ ಪರಿಸ್ಥಿತಿಯ ಮಾಹಿತಿ ನಿಮಗಿದೆ ಎಂದು ತೋರಿಸಲು ಪ್ರಯತ್ನಿಸುತ್ತಿದ್ದೀರೋ ಅಥವಾ ನಿಮ್ಮದೇ ಪಕ್ಷ ಇದನ್ನು ನಿಭಾಯಿಸುವಲ್ಲಿ ಹೇಗೆ ಸೋತಿದೆ ಎಂದು ಪರೋಕ್ಷವಾಗಿ ತಿಳಿಸುತ್ತಿದ್ದೀರೋ?
ಕುಡಿಯುವ ನೀರಿನ ಸಮಸ್ಯೆ 37 ತಾಲೂಕುಗಳಲ್ಲಿ ಮಾತ್ರ ಎದುರಾಗಿದೆ ಎಂಬ ಮೂಲಕ ನಿಮ್ಮ ನಿರೀಕ್ಷೆ ಇನ್ನಷ್ಟು ಜಾಸ್ತಿಯಿತ್ತು… https://t.co/hPMwkcj7cA
ಕುಡಿಯುವ ನೀರಿನ ಸಮಸ್ಯೆ 37 ತಾಲೂಕುಗಳಲ್ಲಿ ಮಾತ್ರ ಎದುರಾಗಿದೆ ಎಂಬ ಮೂಲಕ ನಿಮ್ಮ ನಿರೀಕ್ಷೆ ಇನ್ನಷ್ಟು ಜಾಸ್ತಿಯಿತ್ತು ಎಂಬುದನ್ನೂ ತಾವು ತೋರಿಸಿಕೊಟ್ಟಿದ್ದೀರಿ. ಈಗಾಗಲೇ ಕಲುಷಿತ ನೀರಿಗೆ ಸಾಕಷ್ಟು ಜೀವಗಳು ಬಲಿಯಾಗಿವೆ. ಹೀಗಿರುವಾಗಲೂ ಎಲ್ಲ ಇಲಾಖೆಯ ಒಳಗೂ ಮೂಗು ತೂರಿಸುವ ನೀವು ಜಿಲ್ಲಾ ಸಿಇಒಗಳಿಗೆ ಸೂಚನೆ ನೀಡಿ ಕೈ ತೊಳೆದುಕೊಂಡರೆ ಸಾಕೇ? ಎಂದು ಸಾಮಾಜಿಕ ಜಾಲತಾಣದ ಮೂಲಕ ಬಿಜೆಪಿ ಪ್ರಶ್ನಿಸಿದೆ.
ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ಎಲ್ಲ ಸಚಿವಾಲಯಗಳ ಜವಾಬ್ದಾರಿಯನ್ನೂ ಪ್ರಿಯಾಂಕ್ ಖರ್ಗೆ ಅವರಿಗೆ ಗುತ್ತಿಗೆ ನೀಡಿದ್ದಾರೆ. ತಮ್ಮ ಇಲಾಖೆಗಿಂತ ಬೇರೆ ಇಲಾಖೆಯ ಕಿಟಕಿಯಲ್ಲಿ ನೋಡುವುದೇ ಅವರಿಗೆ ಹೆಚ್ಚು ಆಪ್ಯಾಯಮಾನವಾದ ಕೆಲಸ ಎಂಬುದನ್ನು ರಾಜ್ಯದ ಜನ ಈ ಹಿಂದೆಯೂ ಕಂಡಿದ್ದಾರೆ. ನಿರಂತರ ನಿರ್ಲಕ್ಷ್ಯಕ್ಕೆ ಒಳಗಾದ ಸಚಿವ ಡಾ. ಪರಮೇಶ್ವರ್ ಅವರನ್ನೂ ಈ ಸರ್ಕಾರದಲ್ಲಿಯೂ ಸುಮ್ಮನೇ ಕೂರಿಸಿ ಆ ಜವಾಬ್ದಾರಿಗಳನ್ನೂ ಪ್ರಿಯಾಂಕ್ ಖರ್ಗೆಯವರಿಗೆ ನೀಡಲಾಗಿದ್ದು ಗೊತ್ತೇ ಇದೆ. ಈಗ ಕಂದಾಯ ಇಲಾಖೆಯ ಜವಾಬ್ದಾರಿಯನ್ನೂ ಖರ್ಗೆಯವರು ಸಂಪೂರ್ಣವಾಗಿ ವಹಿಸಿಕೊಂಡಿದ್ದಾರೆ. ಅಂಕಿ-ಅಂಶ ನೀಡಿದ ಮಾತ್ರಕ್ಕೆ ಸಮಸ್ಯೆಗಳು ಪರಿಹಾರವಾಗುವುದಿಲ್ಲ. ಅದನ್ನು ಪರಿಹರಿಸುವ ಜವಾಬ್ದಾರಿಯೇ ಇಲ್ಲದವರು ಮಾತನಾಡಿಯೂ ಪ್ರಯೋಜನವಿಲ್ಲ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಒಂದೆಡೆ ತಾವೇ ಘೋಷಿಸಿದ ಗ್ಯಾರಂಟಿ ಯೋಜನೆಗಳನ್ನೇ ಸರಿಯಾಗಿ ಅನುಷ್ಠಾನ ಮಾಡಲು ಹೆಣಗುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಯಾವುದನ್ನೂ ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಹದಗೆಟ್ಟ ಕಾನೂನು ಸುವ್ಯವಸ್ಥೆ, ನಿರಂತರ ನಡೆಯುತ್ತಿರುವ ರೈತರ ಆತ್ಮಹತ್ಯೆಯ ವಿಚಾರಗಳಿಗೆ ಪರಿಹಾರ ಮಾರ್ಗಗಳೇ ಕಾಣದಷ್ಟು ಕಾಂಗ್ರೆಸ್ ಆಡಳಿತ ಕುರುಡಾಗಿದೆ. ಪ್ರಿಯಾಂಕ್ ಖರ್ಗೆ ಸಾಹೇಬರು ತಮ್ಮ ಗಮನವನ್ನು ರಾಜ್ಯಾದ್ಯಾಂತ ಹರಿಸುವ ಮೊದಲು ಅವರದೇ ತವರು ಜಿಲ್ಲೆಯ ಸಮಸ್ಯೆಗಳ ಕಡೆಗೆ ಮೊದಲು ಗಮನ ಹರಿಸಬೇಕು ಎಂದು ಬಿಜೆಪಿ ಸಲಹೆ ನೀಡಿದೆ.
ಕಲಬುರ್ಗಿ ಮರಳು ಮಾಫಿಯಾ, ಪೊಲೀಸರ ಹತ್ಯೆ, ಪುಡಿ ರೌಡಿಗಳ ಗೂಂಡಾಗಿರಿ, ನಿಮ್ಮ ಬೆಂಬಲಿಗರಿಂದ ನಡೆಯುತ್ತಿರುವ ಅಧಿಕಾರಿಗಳ ಮೇಲಿನ ಹಲ್ಲೆ ಪ್ರಕರಣಗಳ ಬಗ್ಗೆ ಒಂದಷ್ಟು ಅಂಕಿ-ಅಂಶಗಳನ್ನಾದರೂ ತರಿಸಿ ನೋಡುವುದು ಒಳಿತು. ನಿಮ್ಮ ಇಲಾಖೆ ಮತ್ತು ಕ್ಷೇತ್ರದ ಜನತೆ ನೀಡಿದ ಜವಾಬ್ದಾರಿಯನ್ನಾದರೂ ಸರಿಯಾಗಿ ನಿರ್ವಹಿಸಿ ಅದಕ್ಕೆ ನ್ಯಾಯ ಒದಗಿಸಿ ಎಂದು ಬಿಜೆಪಿ ಆಗ್ರಹಿಸಿದೆ.
ಇದನ್ನೂ ಓದಿ : ಪಿಡಿಒ ಅಧಿಕಾರಿಗಳ ಜೇಷ್ಠತಾ ಪಟ್ಟಿ ಪರಿಶೀಲಿಸಿ ಅಂತಿಮಪಟ್ಟಿ ಪ್ರಕಟಿಸಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ