ETV Bharat / state

ಬರೀ ಬೂಟಾಟಿಕೆ ಪಾರ್ಟಿ ಬಿಜೆಪಿ: ಸುಳ್ಳುಹೇಳಿ ಪ್ರಚಾರ ಗಿಟ್ಟಿಸಿಕೊಳ್ಳುವ ಕರ್ಮ ನಿಮಗೇಕೆ ಬಂತು ಶಾ ಜೀ.. ಹೆಚ್​ಡಿಕೆ - ಸ್ಥಳಕ್ಕೊಂದು ವೇಷ ಕ್ಷಣಕ್ಕೊಂದು ಸುಳ್ಳು

ಬರೀ ಬೂಟಾಟಿಕೆ ಪಾರ್ಟಿ ಬಿಜೆಪಿ, ಸುಳ್ಳುಕೋರರ ಸಂತೆ- ಶೇ 40ರ ಕಮೀಷನ್ ಸರ್ಕಾರ- ಬಿಸಿಸಿಐ ಯಾರ ಪಾಲಿನ ಎಟಿಎಂ- ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

Former Chief Minister HD Kumaraswamy
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ
author img

By

Published : Dec 31, 2022, 4:58 PM IST

ಬೆಂಗಳೂರು: ಬರೀ ಬೂಟಾಟಿಕೆ ಪಾರ್ಟಿ (ಬಿಜೆಪಿ) ಸುಳ್ಳುಕೋರರ ಸಂತೆ ಎನ್ನುವುದಕ್ಕೆ ಮಂಡ್ಯದಲ್ಲಿ ಸುಖಾಸುಮ್ಮನೆ ಅಲವತ್ತುಕೊಂಡ ನಿಮ್ಮ ಅಸತ್ಯದ ಹಾಹಾಕಾರದ ವರಸೆಯೇ ಸಾಕ್ಷಿ. ಸ್ಥಳಕ್ಕೊಂದು ವೇಷ ಕ್ಷಣಕ್ಕೊಂದು ಸುಳ್ಳು ಇದು ನಿಮ್ಮ ಬಿಜೆಪಿ ಪಕ್ಷದ ನಿಜ ಸ್ವರೂಪ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟೀಕಾ ಪ್ರಹಾರ ನಡೆಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ನೀವು ಸರ್ವಾಧಿಕಾರಿ ಹಿಟ್ಲರ್​​ನ ಸಂಪುಟದ ಗೊಬೆಲ್ಲನ ಹೊಸ ಅವತಾರ. ಸುಳ್ಳು ಹೇಳಿ ಪ್ರಚಾರ ಗಿಟ್ಟಿಸಿಕೊಳ್ಳಬೇಕಾದ ಕರ್ಮ ನಿಮಗೇಕೆ ಬಂತು ಅಮಿತ್ ಶಾ ಅವರೇ? ಎಂದು ಪ್ರಶ್ನೆ ಮಾಡಿದ್ದಾರೆ.

  • ಬರೀ ಬೂಟಾಟಿಕೆ ಪಾರ್ಟಿ (ಬಿಜೆಪಿ) ಸುಳ್ಳುಕೋರರ ಸಂತೆ ಎನ್ನುವುದಕ್ಕೆ ಮಂಡ್ಯದಲ್ಲಿ ಸುಖಾಸುಮ್ಮನೆ ಅಲವತ್ತುಕೊಂಡ ನಿಮ್ಮ ಅಸತ್ಯದ ಹಾಹಾಕಾರದ ವರಸೆಯೇ ಸಾಕ್ಷಿ. ಸ್ಥಳಕ್ಕೊಂದು ವೇಷ, ಕ್ಷಣಕ್ಕೊಂದು ಸುಳ್ಳು; ಇದು ನಿಮ್ಮ ಪಕ್ಷದ ನಿಜ ಸ್ವರೂಪ.1/11#BJP_ಬರೀ_ಬೂಟಾಟಿಕೆ_ಪಾರ್ಟಿ

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 31, 2022 " class="align-text-top noRightClick twitterSection" data=" ">

ಜೆಡಿಎಸ್ ಗೆದ್ದರೆ ಕರ್ನಾಟಕ ಒಂದು ಕುಟುಂಬದ ಎಟಿಎಂ ಆಗುತ್ತದೆಂದು ಜಾಗಟೆ ಹೊಡೆದಿದ್ದೀರಿ. ಜೆಡಿಎಸ್ ಸರ್ಕಾರ ಬಂದರೆ, ಅದು ಆರೂವರೆ ಕೋಟಿ ಕನ್ನಡಿಗರ ಎಟಿಎಂ ಆಗುತ್ತದೆ. ರೈತರ, ಕಾರ್ಮಿಕರ, ದೀನ ದಲಿತರ, ಅಶಕ್ತರ, ವಿಕಲಚೇತನರ ಎಟಿಎಂ ಆಗುತ್ತದೆ. ಜೆಡಿಎಸ್ ಜನರ ಎಟಿಎಂ. ನಮ್ಮ ಪಾಲಿಗೆ ಎಟಿಎಂ ಎಂದರೆ ಎನಿ ಟೈಮ್ ಮನುಷ್ಯತ್ವ ಎಂದು. ನಿಮ್ಮ ಪಾಲಿಗೆ ಅದು ಎನಿ ಟೈಮ್ ಮೋಸ. ಸುಳ್ಳಿನ ಜಾಗಟೆ ಹೊಡೆದೇ ದೇಶವನ್ನು ಅಧೋಗತಿಗೆ ತಳ್ಳಿದ್ದೀರಿ. ಶಾ ಅವರೇ, ದೇಶದ ಮಾತು ಹಾಗಿರಲಿ, ಕರ್ನಾಟದಲ್ಲಿ ನಿಮ್ಮ ಪಕ್ಷದ ಎಟಿಎಂಗಳ ಪಟ್ಟಿ ಮೂಡಿದೆ ನೋಡಿ ಎಂದು ತಿರುಗೇಟು ನೀಡಿದ್ದಾರೆ.

  • ಇವತ್ತು ಬೆಂಗಳೂರಿನಿಂದ ಹೊರಡುವ ಮುನ್ನ ಇದಕ್ಕೆಲ್ಲಾ ಉತ್ತರ ಕೊಡಿ ಅಮಿತ್ ಶಾ ಅವರೇ. ಎಷ್ಟಾದರೂ ನೀವು ಸ್ವಯಂ ಘೋಷಿತ ಸಾಚಾ ಅಲ್ಲವೇ? ಉತ್ತರ ಹೇಳಿ ಹೋದರೆ ನಾವೂ ಧನ್ಯರಾಗುತ್ತೇವೆ.
    ಸತ್ಯ ಅಜರಾಮರ, ಅಸತ್ಯ ನಿಮ್ಮ ಹಣೆಬರ. ಸತ್ಯದ ಮುಂದೆ ದಮ್ಮು ತಾಕತ್ತು ದುರ್ಬಲ. 10/11

ಕರ್ನಾಟಕದ ಬಿಜೆಪಿ ಎಟಿಎಂಗಳು1.40% ಕಮೀಷನ್2.ಪಿಎಸ್ ಐ ಹಗರಣ3.ಪ್ರಶ್ನೆಪತ್ರಿಕೆ ಸೋರಿಕೆ3.ಸಹ ಪ್ರಾಧ್ಯಾಪಕರ ನೇಮಕ ಹಗರಣ4.ವೈದ್ಯ ಪ್ರಾಧ್ಯಾಪಕರ ನೇಮಕ ಹಗರಣ5.ಕೋವಿಡ್ ದಲ್ಲಿ ಕೊಳ್ಳೆ6.ಕಾಸಿಗಾಗಿ ಪೋಸ್ಟಿಂಗ್7.ಗಂಗಾಕಲ್ಯಾಣ ಕರ್ಮಕಾಂಡ 8.ಚಿಲುಮೆ ಹಗರಣಇದು ಅಪೂರ್ಣ ಪಟ್ಟಿ, ಅದು ಕೂಡ ದೊಡ್ಡದಿದೆ ಬೇಕಾ ಅಮಿತ್ ಶಾ ಅವರೇ ಎಂದು ಹೆಚ್ ಡಿಕೆ ಟಾಂಗ್ ನೀಡಿದ್ದಾರೆ.

55 60%ರ ಬಿಜೆಪಿ ಸರಕಾರ: ಕರ್ನಾಟಕದ ನಿಮ್ಮ ಬಿಜೆಪಿ ಸರಕಾರ ಕೇವಲ 40% ಸರಕಾರ ಅಲ್ಲವೇ ಅಲ್ಲ. ಅದು 55-60% ಸರಕಾರ. ನಿಮಗೂ ಮಾಹಿತಿ ಇರುತ್ತದೆ. ಕರ್ನಾಟಕ ನಿಮ್ಮ ಪಕ್ಷಕ್ಕೂ ಎಟಿಎಂ ಹೌದಲ್ಲವೇ? ಈ ಸತ್ಯ ಯಾಕೆ ಮರೆಮಾಚಿದಿರಿ? ಮಂಡ್ಯ ಜನರ ಮುಂದೆ ನಿಮ್ಮ ದಮ್ಮು ತಾಕತ್ತು ನಡೆಯಲ್ಲ. ಅರಿತುಕೊಳ್ಳಿ. ಇನ್ನು ಕುಟುಂಬದ ವಿಷಯ, ನಿಮ್ಮ ಪಕ್ಷದ ಕುಟುಂಬ ರಾಜಕಾರಣದ ಲೆಕ್ಕ ಗೊತ್ತಿಲ್ಲವೇ. ನಿಮ್ಮ ಸುಪುತ್ರ ಜಯ್​ ಶಾ ಯಾವ ಸೀಮೆ ಕ್ರಿಕೆಟ್ ಪಂಡಿತರು ಎಂದು ಬಿಸಿಸಿಐನಲ್ಲಿ ಕೂತಿದ್ದಾರೆ? ಬಿಸಿಸಿಐನಲ್ಲಿ ಯಾರು ಇರಬೇಕು, ಇರಬಾರದೆಂದು ಸುಪ್ರೀಂ ಕೋರ್ಟಿನ ಸ್ಪಷ್ಟ ಆದೇಶವಿದೆ. ಆ ಆದೇಶಕ್ಕೆ ನಿಮ್ಮ ಮಗ ಅತೀತರೇ? ಈಗ ಹೇಳಿ, ಬಿಸಿಸಿಐ ಯಾರ ಪಾಲಿನ ಎಟಿಎಂ? ಎಂದು ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರಿಗೆ ಪ್ರಶ್ನಿಸಿದ್ದಾರೆ.

  • ಪಂಚರತ್ನ ರಥಯಾತ್ರೆ ನಿಮ್ಮ ಕಣ್ಣು ಕುಕ್ಕಿದೆ. ಸಾಲಮನ್ನಾ ನಿಮ್ಮ ನಿದ್ದೆಗೆಡಿಸಿದೆ. ಎಷ್ಟೇ ಆದರೂ ಕೇಂದ್ರದ ಸಹಕಾರ ಸಚಿವರಾದ ನಿಮಗೆ ಸಾಲಮನ್ನಾ ದುಃಸ್ವಪ್ನದಂತೆ ಕಾಡುತ್ತಿದೆ ಎನ್ನುವುದು ಗೊತ್ತು. ಶ್ರೀ ಹೆಚ್.ಡಿ.ದೇವೇಗೌಡರು ಮತ್ತು ನನ್ನ ಸಾಧನೆಗಳು ನಿಮ್ಮ ಚಿಂತೆ ಹೆಚ್ಚಿಸಿವೆ. ಇನ್ನಾದರೂ ಸುಳ್ಳಿನ ಜಾಗಟೆ ಬಾರಿಸುವುದು ನಿಲ್ಲಿಸಿ.11/11

ಕರ್ನಾಟಕ ಬಿಜೆಪಿ ಫ್ಯಾಮಿಲಿ ಪಾಲಿಟಿಕ್ಸ್
1. ಯಡಿಯೂರಪ್ಪ & ಸನ್ಸ್
2. ರವಿಸುಬ್ರಮಣ್ಯ - ತೇಜಸ್ವಿ ಸೂರ್ಯ
3. ಅಶೋಕ್ -ರವಿ
4. ವಿ.ಸೋಮಣ್ಣ & ಸನ್
5. ಅರವಿಂದ ಲಿಂಬಾವಳಿ -ರಘು
6. ಎಸ್.ಆರ್.ವಿಶ್ವನಾಥ್ - ವಾಣಿ ವಿಶ್ವನಾಥ್
7. ಜಗದೀಶ್ ಶೆಟ್ಟರ್ - ಪ್ರದೀಪ್ ಶೆಟ್ಟರ್
8. ಮುರುಗೇಶ್ ನಿರಾಣಿ - ಹನುಮಂತ ನಿರಾಣಿ
9. ಜಿ ಎಸ್ ಬಸವರಾಜು - ಜ್ಯೋತಿ ಗಣೇಶ್
10. ಜಾರಕಿಹೊಳಿ & ಬ್ರದರ್
11. ಜೊಲ್ಲೆ & ಜೊಲ್ಲೆ
12. ಅಂಗಡಿ ಕುಟುಂಬ
13. ಉದಾಸಿ ಕುಟುಂಬ
14. ಶ್ರೀರಾಮುಲು ಕುಟುಂಬ
15. ರೆಡ್ಡಿ & ರೆಡ್ಡಿ. ಇದು ಕೂಡ ಅಪೂರ್ಣ ಪಟ್ಟಿಯೇ. ರಾಷ್ಟ್ರೀಯ ಪಟ್ಟಿ ಬೇಕಿದ್ದರೆ ಹೇಳಿ, ಇದರ ಹತ್ತರಷ್ಟಿದೆ.

ಇವತ್ತು ಬೆಂಗಳೂರಿನಿಂದ ಹೊರಡುವ ಮುನ್ನ ಇದಕ್ಕೆಲ್ಲಾ ಉತ್ತರ ಕೊಡಿ ಅಮಿತ್ ಶಾ ಅವರೇ, ಎಷ್ಟಾದರೂ ನೀವು ಸ್ವಯಂ ಘೋಷಿತ ಸಾಚಾ ಅಲ್ಲವೇ? ಉತ್ತರ ಹೇಳಿ ಹೋದರೆ ನಾವೂ ಧನ್ಯರಾಗುತ್ತೇವೆ. ಸತ್ಯ ಅಜರಾಮರ, ಅಸತ್ಯ ನಿಮ್ಮ ಹಣೆಬರ. ಸತ್ಯದ ಮುಂದೆ ದಮ್ಮು ತಾಕತ್ತು ದುರ್ಬಲ ಎಂದು ಉದಾಹರಣೆ ಮೂಲಕ ತಿರುಗೇಟು ನೀಡಿದ್ದಾರೆ.

ಪಂಚರತ್ನ ರಥಯಾತ್ರೆ: ಜೆಡಿಎಸ್​ ಪಂಚರತ್ನ ರಥಯಾತ್ರೆ ನಿಮ್ಮ ಕಣ್ಣು ಕುಕ್ಕಿದೆ. ಸಾಲಮನ್ನಾ ನಿಮ್ಮ ನಿದ್ದೆಗೆಡಿಸಿದೆ. ಎಷ್ಟೇ ಆದರೂ ಕೇಂದ್ರದ ಸಹಕಾರ ಸಚಿವ ನಿಮಗೆ ಸಾಲಮನ್ನಾ ದುಃಸ್ವಪ್ನದಂತೆ ಕಾಡುತ್ತಿದೆ ಎನ್ನುವುದು ಗೊತ್ತು. ಹೆಚ್.ಡಿ.ದೇವೇಗೌಡರು ಮತ್ತು ನನ್ನ ಸಾಧನೆಗಳು ನಿಮ್ಮ ಚಿಂತೆ ಹೆಚ್ಚಿಸಿವೆ. ಇನ್ನಾದರೂ ಸುಳ್ಳಿನ ಜಾಗಟೆ ಬಾರಿಸುವುದು ನಿಲ್ಲಿಸಿ ಎಂದು ಕಿವಿಮಾತು ಹೇಳಿದ್ದಾರೆ.

ಇದನ್ನೂಓದಿ:ಮಹಾನಗರಗಳ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚಿಸಲು ಅಧ್ಯಯನ, ವಸತಿ ಸೌಕರ್ಯ ಅಭಿವೃದ್ಧಿ - ಅಮಿತ್ ಶಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.