ETV Bharat / state

ಬಿಜೆಪಿಯಿಂದ ಜಿಪಂ, ತಾಪಂ ಟಾರ್ಗೆಟ್.. ಜನಸೇವಕ ಸಮಾವೇಶ ಆಯೋಜಿಸಲು ನಿರ್ಧಾರ..

ಒಂದು ದೇಶ ಒಂದು ತೆರಿಗೆ, ಒಂದು ದೇಶ ಒಂದು ಪಡಿತರ ಚೀಟಿ ಅನುಷ್ಠಾನ. ಒಂದು ದೇಶ ಒಂದೇ ಚುನಾವಣೆ ಕುರಿತ ಚರ್ಚೆ ವ್ಯಾಪಕವಾಗಿ ಆಗಬೇಕು. ಇದರಿಂದ ಸಂಪನ್ಮೂಲದ ಸದ್ಬಳಕೆ ಮತ್ತು ಅಭಿವೃದ್ಧಿ ಕಾರ್ಯ ಇನ್ನಷ್ಟು ವೇಗದಿಂದ ನಡೆಯಲು ಸಾಧ್ಯವಿದೆ. ಇದರ ಸಾಧಕ ಬಾಧಕಗಳ ಕುರಿತು ಚರ್ಚೆ ಅಗತ್ಯವಿದೆ. ಇದನ್ನು ಜನಸೇವಕ ಸಮಾವೇಶದಲ್ಲಿ ಪ್ರಸ್ತಾಪ ಮಾಡಲಾಗುತ್ತದೆ..

bjp janasevaka Convention Organization news
ಜನಸೇವಕ ಸಮಾವೇಶ ಆಯೋಜನೆ
author img

By

Published : Jan 6, 2021, 5:46 PM IST

ಬೆಂಗಳೂರು : ಉಪ ಚುನಾವಣೆಗಳು, ಗ್ರಾಪಂ ಚುನಾವಣೆಯಲ್ಲಿ ಮೇಲುಗೈ ಸಾಧಿಸಿ ಉತ್ಸಾಹದಲ್ಲಿರುವ ರಾಜ್ಯ ಬಿಜೆಪಿ, ಇದೀಗ ಸದ್ಯದಲ್ಲೇ ಎದುರಾಗಲಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆಗೆ ಸಜ್ಜಾಗುತ್ತಿದೆ. ಅದಕ್ಕಾಗಿ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ 'ಜನಸೇವಕ ಸಮಾವೇಶ'ವನ್ನು ಜನವರಿ 11ರಿಂದ 13ರವರೆಗೆ ಆಯೋಜಿಸಿದೆ.

ಪ್ರತಿ ಚುನಾವಣೆಗೂ ಒಂದೊಂದು ರೀತಿಯ ಕಾರ್ಯತಂತ್ರ ರೂಪಿಸುವ ಬಿಜೆಪಿ ಇದೀಗ ಜಿಲ್ಲಾ ಮತ್ತು ತಾಪಂ ಚುನಾವಣೆಗೂ ಕಾರ್ಯತಂತ್ರ ಹೆಣೆದಿದೆ. ಸಚಿವರು, ಶಾಸಕರು, ಸಂಸದರು, ಪಕ್ಷದ ಪ್ರಮುಖರನ್ನೊಳಗೊಂಡ ಐದು ತಂಡಗಳನ್ನು ರಚಿಸಿ ರಾಜ್ಯಾದ್ಯಂತ ಪ್ರವಾಸ ನಡೆಸಿ ಸಮಾವೇಶಗಳನ್ನು ನಡೆಸಲಿದೆ.

ಗ್ರಾಪಂ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ, ಜನಸೇವಕ ಸಮಾವೇಶದಲ್ಲಿ ನೂತನ ಗ್ರಾಪಂ ಸದಸ್ಯರನ್ನು ಸನ್ಮಾನಿಸಲಿದೆ. ಆ ಮೂಲಕ ಮುಂಬರಲಿರುವ ಜಿಲ್ಲಾ ಮತ್ತು ತಾಪಂ ಚುನಾವಣೆಗೆ ಅವರನ್ನೆಲ್ಲಾ ಸನ್ನದ್ದುಗೊಳಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡಲಿದ್ದಾರೆ.

ಐದು ತಂಡ : ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ನೇತೃತ್ವದ ಮೊದಲ ತಂಡದಲ್ಲಿ ಸಚಿವರಾದ ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ರಾಜ್ಯ ಉಪಾಧ್ಯಕ್ಷ ಎಂ.ರಾಘವೇಂದ್ರ, ಎಸ್‌ಟಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ತಂಡದ ಸಂಚಾಲಕರಾಗಿ ರಾಜ್ಯ ಪ್ರ. ಕಾರ್ಯದರ್ಶಿ ಅಶ್ವತ್ಥ್‌ ನಾರಾಯಣ್ ಇರಲಿದ್ದಾರೆ. ಜನವರಿ 11ರಂದು ಮೈಸೂರು, ಚಾಮರಾಜನಗರ, 12 ರಂದು ಹಾಸನ ಮತ್ತು ಮಂಡ್ಯ, 13ರಂದು ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಮಾವೇಶ ನಡೆಸಲಿದೆ.

ಓದಿ: ಶಿಸ್ತು ಉಲ್ಲಂಘಿಸಿ ಮಾತನಾಡುವವರ ವಿರುದ್ಧ ಶಿಸ್ತು ಕ್ರಮ: ಸಚಿವ ಆರ್. ಅಶೋಕ್

2ನೇ ತಂಡದ ನೇತೃತ್ವವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ವಹಿಸಲಿದ್ದಾರೆ. ಈ ತಂಡದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ, ರಾಜ್ಯ ಪ್ರ. ಕಾರ್ಯದರ್ಶಿ ಎನ್.ರವಿಕುಮಾರ್ ಸಂಚಾಲಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಜನವರಿ 11 ರಂದು ಚಿಕ್ಕಮಗಳೂರು ಮತ್ತು ಉಡುಪಿ, 12 ರಂದು ಮಡಿಕೇರಿ ಮತ್ತು ಮಂಗಳೂರು, 13 ರಂದು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ತಂಡ ಪ್ರವಾಸ ಮಾಡಲಿದೆ.

3ನೇ ತಂಡದ ನೇತೃತ್ವವನ್ನು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ವಹಿಸಲಿದ್ದಾರೆ. ಸಚಿವರಾದ ವಿ.ಸೋಮಣ್ಣ, ರಮೇಶ್ ಜಾರಕಿಹೊಳಿ, ರಾಜ್ಯ ಎಸ್‌ಟಿ ಮೋರ್ಚಾ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್, ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಇರುವ ಈ ತಂಡದ ಸಂಚಾಲಕರಾಗಿ ರಾಜ್ಯ ಕಾರ್ಯದರ್ಶಿ ತುಳಸಿ ಮುನಿರಾಜು ಕಾರ್ಯ ನಿರ್ವಹಿಸಲಿದ್ದಾರೆ.

ಈ ತಂಡವು 11ರಂದು ಬೆಳಗಾವಿ, ಚಿಕ್ಕೋಡಿ, 12 ರಂದು ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆ, 13ರಂದು ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದೆ. 4ನೇ ತಂಡದ ನೇತೃತ್ವವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ವಹಿಸಲಿದ್ದಾರೆ. ಈ ತಂಡದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ, ಸಚಿವರಾದ ಶಶಿಕಲಾ ಜೊಲ್ಲೆ, ಪ್ರಭು ಚೌಹಾಣ್, ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್, ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ. ಸಂದೀಪ್ ಇರಲಿದ್ದು, ಈ ತಂಡದ ಸಂಚಾಲಕರಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಭಾಗವಹಿಸಲಿದ್ದಾರೆ. ಜನವರಿ 11 ರಂದು ಬೀದರ್ ಮತ್ತು ಕಲಬುರ್ಗಿ, 12ರಂದು ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ, 13 ರಂದು ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಈ ತಂಡ ಪ್ರವಾಸ ಮಾಡಲಿದೆ.

5ನೇ ತಂಡದ ನೇತೃತ್ವವನ್ನು ಉಪ ಮುಖ್ಯಮಂತ್ರಿಗಳಾದ ಡಾ.ಅಶ್ವತ್ಥ್ ನಾರಾಯಣ ವಹಿಸಲಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷೆ ಶೋಭಾ ಕರಂದ್ಲಾಜೆ, ಸಂಸದ ಶಿವಕುಮಾರ್ ಉದಾಸಿ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ಇರಲಿದ್ದು, ಕಾರ್ಯಕ್ರಮದ ಸಂಚಾಲಕರಾಗಿ ರಾಜ್ಯ ಕಾರ್ಯದರ್ಶಿ ನವೀನ್ ಇರಲಿದ್ದಾರೆ. ಈ ತಂಡವು ಜನವರಿ 11 ರಂದು ಹಾವೇರಿ ಮತ್ತು ದಾವಣಗೆರೆ ಜಿಲ್ಲೆ, 12 ರಂದು ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆ, 13 ರಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಮಾವೇಶ ನಡೆಸಲಿದೆ.

ಸಮಾರೋಪಕ್ಕೆ‌ ಅಮಿತ್ ಶಾ : ಜನವರಿ 16 ಅಥವಾ 17ರಂದು ಬೆಂಗಳೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 16 ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಭದ್ರಾವತಿಯಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ. ಅವರ ಸಮಯಾವಕಾಶ ಖಚಿತಪಡಿಸಿಕೊಂಡು ಸಮಾರೋಪ ಸಮಾರಂಭಕ್ಕೆ ರಾಜ್ಯ ಬಿಜೆಪಿ ನಾಯಕರು ಸಿದ್ಧತೆ ಮಾಡಿಕೊಳ್ಳಲಿದ್ದಾರೆ. ಅಮಿತ್ ಶಾ ಅವರಿಂದ‌ ಸಮಾರೋಪ ಸಮಾರಂಭ ಉದ್ಘಾಟನೆ ಮಾಡಿಸಲು ನಿರ್ಧರಿಸಿದ್ದಾರೆ.

ಕಾಯ್ದೆಗಳ ಕುರಿತು ಜಾರಿ : ಒಂದು ದೇಶ ಒಂದು ತೆರಿಗೆ, ಒಂದು ದೇಶ ಒಂದು ಪಡಿತರ ಚೀಟಿ ಅನುಷ್ಠಾನ. ಒಂದು ದೇಶ ಒಂದೇ ಚುನಾವಣೆ ಕುರಿತ ಚರ್ಚೆ ವ್ಯಾಪಕವಾಗಿ ಆಗಬೇಕು. ಇದರಿಂದ ಸಂಪನ್ಮೂಲದ ಸದ್ಬಳಕೆ ಮತ್ತು ಅಭಿವೃದ್ಧಿ ಕಾರ್ಯ ಇನ್ನಷ್ಟು ವೇಗದಿಂದ ನಡೆಯಲು ಸಾಧ್ಯವಿದೆ. ಇದರ ಸಾಧಕ ಬಾಧಕಗಳ ಕುರಿತು ಚರ್ಚೆ ಅಗತ್ಯವಿದೆ. ಇದನ್ನು ಜನಸೇವಕ ಸಮಾವೇಶದಲ್ಲಿ ಪ್ರಸ್ತಾಪ ಮಾಡಲಾಗುತ್ತದೆ.

ಇದರ ಜೊತೆಯಲ್ಲಿ ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ಸಂಬಂಧಿ ಕಾಯ್ದೆಗಳ ಕುರಿತು ಜಾಗೃತಿ ಮೂಡಿಸಲಾಗುತ್ತದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.