ETV Bharat / state

ಸರ್ಕಾರದ ವಿರುದ್ಧ ಜಂಟಿ ಹೋರಾಟ: ಬಿಜೆಪಿ ಜೆಡಿಎಸ್ ನಾಯಕರ ಒಮ್ಮತದ ನಿರ್ಧಾರ - ​ ETV Bharat Karnataka

ಇಂದು ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಆಯ್ಕೆ ಪ್ರಮುಖ ನಾಯಕರು ಅಧಿವೇಶನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ಹೋರಾಟಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದರು.

ಬಿಜೆಪಿ ಮತ್ತು ಜೆಡಿಎಸ್
ಬಿಜೆಪಿ ಮತ್ತು ಜೆಡಿಎಸ್
author img

By ETV Bharat Karnataka Team

Published : Dec 1, 2023, 4:37 PM IST

ಬೆಂಗಳೂರು : ಸೋಮವಾರದಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು ,ಜನ ವಿರೋಧಿ ನೀತಿಗಳ ವಿರುದ್ಧ ಜಂಟಿಯಾಗಿ ಹೋರಾಟ ನಡೆಸಲು ಪ್ರತಿಪಕ್ಷದಲ್ಲಿರುವ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮಹತ್ವದ ನಿರ್ಧಾರ ಕೈಗೊಂಡಿವೆ.

ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರ ಅಪಾರ್ಟ್‌ಮೆಂಟ್​ನಲ್ಲಿ ಮೈತ್ರಿಕೂಟದ ಪಕ್ಷಗಳಾಗಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಭೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ‌, ಆರ್.ಅಶೋಕ್, ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಆಯ್ಕೆ ಪ್ರಮುಖ ನಾಯಕರು ಸಭೆ ನಡೆಸಿದರು.

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಯಾವ ರೀತಿ ಹೋರಾಟ ನಡೆಸಬೇಕು ಎನ್ನುವ ಕುರಿತು ಉಭಯ ಪಕ್ಷಗಳ ನಾಯಕರು ಚರ್ಚಿಸಿದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ವೈಫಲ್ಯ, ಬರ ನಿರ್ವಹಣೆಯಲ್ಲಿ ವಿಫಲವಾಗಿರುವುದು, ಜನ ವಿರೋಧಿ ನೀತಿ ಅನುಸರಿಸುತ್ತಿರುವ, ಗುತ್ತಿಗೆದಾರರಿಂದ ಕಮೀಷನ್ ಪಡೆಯುತ್ತಿರುವ ಆರೋಪ, ಗುತ್ತಿಗೆದಾರರ ಆತ್ಮಹತ್ಯೆ, ಸಾವು ಪ್ರಕರಣಗಳು, ಶಾಸಕರಿಗೆ ಅನುದಾನ ಬಿಡುಗಡೆ ಮಾಡದಿರುವುದು, ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲದಿರುವುದು ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಒಟ್ಟಾಗಿ ರಾಜ್ಯ ಸರ್ಕಾರದ ವಿರುದ್ಧ ಸದನದಲ್ಲಿ ಹೋರಾಟ ನಡೆಸಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ.

ಸ್ಪೀಕರ್ ಯು.ಟಿ ಖಾದರ್ ಅವರಿಗೆ ಬಿಜೆಪಿ ಶಾಸಕರು ಕೈ ಮುಗಿದು ಗೌರವ ಕೊಡುವಂತೆ ಮಾಡುತ್ತೇವೆ ಎಂದು ಶಾಸಕ ಜಮೀರ್ ಅಹಮದ್ ನೀಡಿದ್ದ ಹೇಳಿಕೆ ಕುರಿತು ಸದನದಲ್ಲಿ ಪ್ರಸ್ತಾಪಿಸಿ ಜಮೀರ್ ಕ್ಷಮೆಯಾಚನೆಗೆ ಪಟ್ಟುಹಿಡಿಯುವ ನಿರ್ಧಾರ ಮಾಡಲಾಯಿತು ಎಂದು ತಿಳಿದು ಬಂದಿದೆ. ಒಟ್ಟಿನಲ್ಲಿ ಈ ಬಾರಿಯ ಅಧಿವೇಶನದಲ್ಲಿ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕು. ಅದಕ್ಕಾಗಿ ಉಭಯ ಪ್ರತಿಪಕ್ಷಗಳು ಒಟ್ಟಾಗಿ ಹೋರಾಟ ಮಾಡಬೇಕು. ವಿಷಯಗಳ ಮೇಲಿನ ಚರ್ಚೆಯ ವೇಳೆ ಪರಸ್ಪರ ಸಹಕಾರ ಕೊಟ್ಟು ಸರ್ಕಾರದ ವಿರುದ್ಧ ನಿಲ್ಲಬೇಕು ಎನ್ನುವ ನಿರ್ಧಾರಕ್ಕೆ ಬರಲಾಯಿತು.

ಸಭೆ ನಂತರ ಬಿಜೆಪಿ ನಾಯಕರಾದ ಬಿ.ವೈ ವಿಜಯೇಂದ್ರ, ಬಸವರಾಜ ಬೊಮ್ಮಾಯಿ, ಆರ್.ಅಶೋಕ್ ಮಾಧ್ಯಮಗಳಿಗೆ ಯಾವುದೇ ಮಾಹಿತಿ ನೀಡಲಿಲ್ಲ. ಆದರೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಮಾತ್ರ ಸದನದಲ್ಲಿನ ಹೋರಾಟದ ಬಗ್ಗೆ ಇಂದು ಸಭೆ ಸೇರಿ ಮಾತನಾಡಿದ್ದೇವೆ. ಯಾವ ರೀತಿಯ ಹೋರಾಟ ಎಂದು ಮುಂದೆ ಹೇಳುತ್ತೇವೆ ಎಂದಷ್ಟೇ ಹೇಳಿ ಹೊರಟರು. ಕುಮಾರಸ್ವಾಮಿ ಅವರ ಕಾರಿನಲ್ಲೇ ಆರ್​. ಅಶೋಕ್ ಕೂಡ ತೆರಳಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ : ಬಾಂಬ್ ಬೆದರಿಕೆ ಕಳವಳಕಾರಿ, ದುಷ್ಟರ ಹೆಡೆಮುರಿ ಕಟ್ಟಬೇಕು: ಹೆಚ್.ಡಿ.ಕುಮಾರಸ್ವಾಮಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.