ಬೆಂಗಳೂರು : ಜೂನ್ 13ರಂದು ನಡೆಯಲಿರುವ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಗೆ ಜೂನ್ 6ರಿಂದ ಮೂರು ದಿನಗಳ ಕಾಲ ರಾಜ್ಯ ನಾಯಕರು ಪ್ರವಾಸ ಕೈಗೊಂಡು ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ಶಿಕ್ಷಕರು, ಪದವೀಧರ ಕ್ಷೇತ್ರಗಳ ಚುನಾವಣೆ ಹಿನ್ನೆಲೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಪ್ರಚಾರ ಕಾರ್ಯಕ್ಕೆ ಇಳಿಯಲಿದ್ದಾರೆ. ಜೂನ್ 6, 7, 8 ಹಾಗೂ 11ರಂದು ಎಲ್ಲ ನಾಯಕರು ಪ್ರತ್ಯೇಕವಾಗಿ ಪ್ರವಾಸ ಕೈಗೊಂಡು ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ.
ಜೂನ್ 9ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. ಜೂನ್ 10ಕ್ಕೆ ರಾಜ್ಯಸಭೆ ಚುನಾವಣೆಗೆ ಮತದಾನ ಮಾಡುವ ಸಂಬಂಧ ಈ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಯಾವ ಶಾಸಕ, ಯಾವ ಅಭ್ಯರ್ಥಿಗೆ ಮತ ಚಲಾಯಿಸಬೇಕೆಂದು ಅಂದಿನ ಸಭೆಯಲ್ಲಿ ನಿರ್ಣಯಿಸಲಾಗುತ್ತದೆ. ಜೊತೆಗೆ ಅಂದೇ ಎಲ್ಲ ಶಾಸಕರಿಗೆ ವಿಪ್ ಜಾರಿಗೊಳಿಸುವ ಸಾಧ್ಯತೆ ಇದೆ.
ಇದನ್ನೂ ಓದಿ: ನಮಗೆ ಚಡ್ಡಿಯೇ ಸಾಕಷ್ಟು ಕಲಿಸಿದೆ, ಆರ್ಎಸ್ಎಸ್ ಟೀಕಿಸುವ ಸಿದ್ದರಾಮಯ್ಯಗೆ ಎಲ್ಲೂ ಚಿಕಿತ್ಸೆ ಇಲ್ಲ: ಕೆ.ಎಸ್. ಈಶ್ವರಪ್ಪ