ಬೆಂಗಳೂರು : ಮೊಮ್ಮಗಳ ಆತ್ಮಹತ್ಯೆಯಿಂದ ದುಃಖದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಸಾಂತ್ವನ ಹೇಳಿ, ಧೈರ್ಯ ತುಂಬಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ನಿವಾಸ ಕಾವೇರಿಗೆ ಸಿಎಂ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ, ಕಂದಾಯ ಸಚಿವ ಆರ್.ಅಶೋಕ್, ಗೋವಿಂದ ಕಾರಜೋಳ, ಗೋಪಾಲಯ್ಯ ಸೇರಿದಂತೆ ಶಾಸಕರು, ಆಪ್ತರು ದೌಡಾಯಿಸಿದ್ದು, ಮೊಮ್ಮಗಳನ್ನು ಕಳೆದುಕೊಂಡು ದುಃಖದ ಮಡುವಿನಲ್ಲಿದ್ದ ಮಾಜಿ ಸಿಎಂ ಬಿಎಸ್ವೈಗೆ ಸಾಂತ್ವನ ಹೇಳಿದರು.
ನಂತರ ಮೊಮ್ಮಗಳ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸುತ್ತಿರುವ ಬೌರಿಂಗ್ ಆಸ್ಪತ್ರೆಗೆ ಯಡಿಯೂರಪ್ಪ ತೆರಳಿದರು. ಬಿಎಸ್ವೈಗೆ ಬೆಂಬಲಿಗರು ಸಾಥ್ ನೀಡಿದರು.
ಇದನ್ನೂ ಓದಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಆತ್ಮಹತ್ಯೆ