ETV Bharat / state

ಪ್ರೊ. ಮುಮ್ತಾಜ್ ಅಲಿ ಖಾನ್ ನಿಧನಕ್ಕೆ ಸಿಎಂ ಸಂತಾಪ - Condolences for Mumtaz Ali Kha

ಮಾಜಿ ಸಚಿವ ಪ್ರೊ.ಮುಮ್ತಾಜ್ ಅಲಿ ಖಾನ್ ನಿಧನಕ್ಕೆ ಸಿಎಂ ಸೇರಿದಂತೆ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.

Ex Minister Mumtaz Ali Khan dies
ಪ್ರೊ.ಮುಮ್ತಾಜ್ ಅಲಿ ಖಾನ್
author img

By

Published : Jun 7, 2021, 1:46 PM IST

ಬೆಂಗಳೂರು : ಮಾಜಿ ಸಚಿವ ಪ್ರೊ. ಮುಮ್ತಾಜ್ ಅಲಿಖಾನ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.

ವಿಧಾನಪರಿಷತ್ ಸದಸ್ಯರಾಗಿ, ಹಜ್, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ್ದ ಅವರು ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಗಮನಾರ್ಹ ಕೊಡುಗೆ ನೀಡಿದ್ದರು. ಅವರ ನಿಧನದಿಂದ ಆತ್ಮೀಯ ಸ್ನೇಹಿತ ಹಾಗೂ ಸರಳ, ಸಜ್ಜನ ಚಿಂತನಾಶೀಲ ರಾಜಕಾರಣಿಯೊಬ್ಬರನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ಮತ್ತು ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

  • ಮಾಜಿ ಸಚಿವರು, ಆತ್ಮೀಯರೂ ಆಗಿದ ಪ್ರೊ ಮಮ್ತಾಜ್ ಅಲಿ ಖಾನ್ ವಿಧಿವಶರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಸರಳ, ಸಜ್ಜನ ರಾಜಕಾರಣಿಯಾಗಿದ್ದ ಅವರೊಂದಿಗಿನ ಒಡನಾಟದ ನೆನಪುಗಳು ಸದಾ ಹಸಿರಾಗಿದೆ. ದೇವರು ಅವರಿಗೆ ಸದ್ಗತಿಯನ್ನು ಕರುಣಿಸಲಿ, ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

    — B.S. Yediyurappa (@BSYBJP) June 7, 2021 " class="align-text-top noRightClick twitterSection" data=" ">

ಹಿರಿಯ ನಾಯಕರು, ಮಾಜಿ ಅಲ್ಪಸಂಖ್ಯಾತ ಕಲ್ಯಾಣ, ಹಜ್, ವಕ್ಫ್ ಖಾತೆ ಸಚಿವರಾಗಿದ್ದ ಪ್ರೊ. ಮುಮ್ತಾಜ್ ಅಲಿಖಾನ್ ಅವರ ನಿಧನದ ಸುದ್ದಿ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ-ಹಿತೈಷಿ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ದೊರಕಲಿ ಎಂದು ಡಿಸಿಎಂ ಅಶ್ವತ್ಥನಾರಾಯಣ್ ಸಂತಾಪ ಸೂಚಿಸಿದ್ದಾರೆ.

  • ಹಿರಿಯ ನಾಯಕರು, ಮಾಜಿ ಅಲ್ಪಸಂಖ್ಯಾತ ಕಲ್ಯಾಣ, ಹಜ್, ವಕ್ಫ್ ಖಾತೆ ಸಚಿವರಾಗಿದ್ದ ಪ್ರೊ. ಮುಮ್ತಾಜ್ ಅಲಿಖಾನ್ ಅವರ ನಿಧನದ ಸುದ್ದಿ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ-ಹಿತೈಷಿ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ.

    ಓಂ ಶಾಂತಿ. pic.twitter.com/W4ClTTKhu9

    — Dr. Ashwathnarayan C. N. (@drashwathcn) June 7, 2021 " class="align-text-top noRightClick twitterSection" data=" ">

ಮುಮ್ತಾಜ್ ಅಲಿ ಖಾನ್ 2008ರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟದಲ್ಲಿ ಹಜ್, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಮೃತರ ಕುಟುಂಬ, ಬಂಧುಮಿತ್ರರಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

  • ರಾಜ್ಯದ ಮಾಜಿ ಸಚಿವರಾಗಿದ್ದ ಡಾ. ಮುಮ್ತಾಜ್ ಅಲಿ ಖಾನ್ ಸಾಹೇಬ್ ಅವರು ನಿಧನರಾಗಿರುವ ವಿಚಾರ ತಿಳಿದು ಬೇಸರವಾಯಿತು.
    ಅವರ ಕುಟುಂಬದವರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/ZI1dzhiHXp

    — Nalinkumar Kateel (@nalinkateel) June 7, 2021 " class="align-text-top noRightClick twitterSection" data=" ">

ಓದಿ : ಮಾಜಿ ಸಚಿವ ಮುಮ್ತಾಜ್ ಅಲಿ ಖಾನ್ ನಿಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.