ETV Bharat / state

ಸರ್ಕಾರದ ಪರಿಹಾರ ಸಾಮಗ್ರಿ ಮೇಲೆ ಬಿಜೆಪಿ ನಾಯಕರ ಫೋಟೋ: ಹೆಚ್​ಡಿಕೆ ಕಿಡಿಕಿಡಿ - ಬಿಜೆಪಿ ನಾಕಯರು ಫೋಟೋ ಹಾಕಿಕೊಂಡು ಪ್ರಚಾರ

ಸರ್ಕಾರದಿಂದ ನೀಡುವ ಪರಿಹಾರ ಸಾಮಗ್ರಿ ಮೇಲೆ ಬಿಜೆಪಿ ನಾಕಯರು ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್​ ಮೂಲಕ ಟೀಕಿಸಿದ್ದಾರೆ.

ಹೆಚ್​ಡಿಕೆ ಟೀಕೆ
ಹೆಚ್​ಡಿಕೆ ಟೀಕೆ
author img

By

Published : Apr 9, 2020, 6:33 PM IST

ಬೆಂಗಳೂರು: ಕೊರೊನಾ ಸಂಕಟದಿಂದ ಹೇಗೆ ಪಾರಾಗುವುದು ಎಂದು ಇಡೀ ಜಗತ್ತು ಚಿಂತಿಸುತ್ತಿದ್ದರೆ, ಬಿಜೆಪಿಯ ಕೆಲ ನಾಯಕರು ಸರ್ಕಾರದ ಪರಿಹಾರ ಸಾಮಗ್ರಿ ಮೇಲೆ ತಮ್ಮ ಫೋಟೋ ಹಾಕಿಕೊಂಡು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಇದೇನು ಜನಸಾಮಾನ್ಯರಿಗೆ ಸರ್ಕಾರ ನೀಡುವ ಪರಿಹಾರ ಸಾಮಾಗ್ರಿಯೋ?, ಬಿಜೆಪಿ ಪಕ್ಷದ ಕೊಡುಗೆಯೋ? ಅಥವಾ ಲಿಂಬಾವಳಿಯವರ ವೈಯಕ್ತಿಕ ದಾನವೋ? ಅಥವಾ ಲಜ್ಜೆಗೇಡಿ ರಾಜಕಾರಣವೋ? ಪ್ರಧಾನಿ ಮೋದಿ ಮತ್ತು ಸಿಎಂ ಯಡಿಯೂರಪ್ಪ ಉತ್ತರ ಹೇಳುವರೇ? ಎಂದು ಪ್ರಶ್ನಿಸಿದ್ದಾರೆ.

  • ಒಂದು ಸಮುದಾಯವನ್ನು ಕೊರೋನ ಮಹಾಮಾರಿಗೆ ಸಮೀಕರಿಸುವವರ ಬಗ್ಗೆ ದಿವ್ಯ ಮೌನ ತಳೆದ ಪ್ರಧಾನಿಗಳು ಬಡ ಕಾರ್ಮಿಕರ ಪರಿಹಾರ ಸಾಮಗ್ರಿಯನ್ನು ಕೆಲ ಪ್ರಚಾರಪ್ರಿಯರು ತಮ್ಮ ಫೋಟೋ ಸ್ಟಿಕರ್ ಅಂಟಿಸಿ ನೀಡುವುದಕ್ಕೆ ಸಮ್ಮತಿ ಸೂಚಿಸಿದ್ದಾರೆಯೇ?
    3/3

    — H D Kumaraswamy (@hd_kumaraswamy) April 9, 2020 " class="align-text-top noRightClick twitterSection" data=" ">

ಒಂದು ಸಮುದಾಯವನ್ನು ಕೊರೊನಾ ಮಹಾಮಾರಿಗೆ ಸಮೀಕರಿಸುವವರ ಬಗ್ಗೆ ದಿವ್ಯ ಮೌನ ತಳೆದ ಪ್ರಧಾನಿಗಳು ಬಡ ಕಾರ್ಮಿಕರ ಪರಿಹಾರ ಸಾಮಗ್ರಿಯನ್ನು ಕೆಲ ಪ್ರಚಾರಪ್ರಿಯರು ತಮ್ಮ ಫೋಟೋ ಸ್ಟಿಕರ್ ಅಂಟಿಸಿ ನೀಡುವುದಕ್ಕೆ ಸಮ್ಮತಿ ಸೂಚಿಸಿದ್ದಾರೆಯೇ? ಎಂದು ಕಿಡಿಕಾರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.