ETV Bharat / state

ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ವಾಪಸ್​ ಹೇಳಿಕೆ: ಬಿಜೆಪಿ ನಾಯಕರು ಹೇಳಿದ್ದೇನು?

ರಾಜ್ಯದ ಎಲ್ಲೆಡೆ ಹಿಜಾಬ್ ನಿಷೇಧ ಆಗಿಯೇ ಇಲ್ಲ. ಎಲ್ಲಿ ಡ್ರೆಸ್ ಕೋಡ್ ಇದೆ ಅಲ್ಲಿ ಮಾತ್ರ ನಿಷೇಧ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Etv Bharatbjp-leaders-reaction-on-cm-siddaramaiah-statement-over-hijab
ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ವಾಪಸ್​ ಹೇಳಿಕೆ: ಬಿಜೆಪಿ ನಾಯಕರು ಹೇಳಿದ್ದೇನು?
author img

By ETV Bharat Karnataka Team

Published : Dec 23, 2023, 3:41 PM IST

Updated : Dec 23, 2023, 7:45 PM IST

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: "ರಾಜಕೀಯ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಜಾಬ್ ಪ್ರಸ್ತಾಪ ಮಾಡಿದ್ದಾರೆ. ಶಾಲಾ ಮಕ್ಕಳಲ್ಲಿ ಒಡಕು ಉಂಟು ಮಾಡುವ ಉದ್ದೇಶ ಇದರಲ್ಲಿದೆ. ಸುಪ್ರಿಂಕೋರ್ಟ್ ನಲ್ಲಿ ಪ್ರಕರಣ ಇದ್ದಾಗ ಈ ಬಗ್ಗೆ ಹೇಳಿಕೆ ನೀಡುವ ಅಗತ್ಯ ಏನಿತ್ತು. ಕೋರ್ಟ್ ಈ ಬಗ್ಗೆ ಗಮನ ಹರಿಸುತ್ತದೆ ಎನ್ನುವ ವಿಶ್ವಾಸ ಇದೆ" ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಆರ್​ಟಿ ನಗರ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಎಲ್ಲೆಡೆ ಹಿಜಾಬ್ ನಿಷೇಧ ಆಗಿಯೇ ಇಲ್ಲ. ಎಲ್ಲಿ ಡ್ರೆಸ್ ಕೋಡ್ ಇದೆ ಅಲ್ಲಿ ಮಾತ್ರ ನಿಷೇಧ ಇದೆ. ಮಹಿಳೆಯರು ಎಲ್ಲಿ ಬೇಕು ಅಲ್ಲಿ ಹಾಕಿಕೊಂಡು ಓಡಾಡುತ್ತಿದ್ದಾರೆ. ಹಿಜಾಬ್ ನಿಷೇಧ ಆಗಿಯೇ ಇಲ್ಲ. 1984 ರಲ್ಲಿ ಸಮಗ್ರ ಶಿಕ್ಷಣ ಕಾಯ್ದೆ ಅಡಿ ಡ್ರೆಸ್ ಕೊಡ್ ಮಾಡಲಾಗಿದ್ದು, ಅದನ್ನು ಹಿಂದೆ ಪಡೆಯುವ ಮಾತನಾಡಿದ್ದಾರೆ. ಈಗಾಗಲೇ ಕೊರ್ಟ್​ನಲ್ಲಿ ಪ್ರಕರಣ ಇದೆ. ರಾಜಕೀಯ ಕಾರಣಕ್ಕೆ ಹಿಜಾಬ್ ಪ್ರಸ್ತಾಪ ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ" ಎಂದರು.

"ಬೆಳಗಾವಿ ಅಧಿವೇಶನ ನಡೆಯುತ್ತಿರುವಾಗ ಹುಬ್ಬಳ್ಳಿಯಲ್ಲಿ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುವುದಾಗಿ ಘೋಷಣೆ ಮಾಡಿದರು. ಅಭಿವೃದ್ಧಿಗೆ ಇವರ ಬಳಿ ಹಣ ಇಲ್ಲ. ಅವರ ಪಕ್ಷದ ಶಾಸಕರೇ ಬಹಿರಂಗವಾಗಿ ಇದನ್ನು ಹೇಳಿದ್ದಾರೆ.‌ ಪತ್ರ ಕೂಡ ಬರೆದಿದ್ದಾರೆ. ರಾಜ್ಯದಲ್ಲಿ ಬರ ಇದೆ. ಮಹಿಳೆಯರಿಗೆ ರಕ್ಷಣೆ ಇಲ್ಲ. ಮಕ್ಕಳಿಂದ ಶೌಚಾಲಯ ತೊಳೆಸುವ ಮಟ್ಟಕ್ಕೆ ಇಳಿದಿದೆ. ಬರ ಇದೆ, ಇದೆಲ್ಲ ಮರೆತು ರಾಜ್ಯದ ಜನರ ದಾರಿ ತಪ್ಪಿಸಲು ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ" ಎಂದು ಟೀಕಿಸಿದರು.

ಇದು ಜನರ ಗಮನ ಬೇರೆಡೆಗೆ ಸೆಳೆಯುವ ಕುತಂತ್ರ - ಕಾರಜೋಳ(ಕೊಪ್ಪಳ): ಮತ್ತೊಂದೆಡೆ, ಕೊಪ್ಪಳದಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಮಾತನಾಡಿ, "ಸಿಎಂ ಸಿದ್ದರಾಮಯ್ಯ ಅವರು ಅಭಿವೃದ್ಧಿ ಕೆಲಸ ಮಾಡಲು ಖಜಾನೆ ಖಾಲಿಯಾಗಿದೆ. ಹೀಗಾಗಿ ಭಾವಾತ್ಮಕ ಸಮಸ್ಯೆಗಳನ್ನು ಹುಟ್ಟಿಸಿ, ಜನರ ಭಾವನೆಗಳನ್ನು ಮತ್ತು ಗಮನವನ್ನು ಬೇರೆಡೆಗೆ ಸೆಳೆಯಲು ಕುತಂತ್ರ ಮಾಡುತ್ತಿದ್ದಾರೆ" ಎಂದು ಹೇಳಿದರು.

ಇದು ತುಷ್ಟೀಕರಣದ ಪರಮಾವಧಿ - ಮಹೇಶ ಟೆಂಗಿನಕಾಯಿ(ಹುಬ್ಬಳ್ಳಿ): ಇನ್ನು, ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ತುಷ್ಟೀಕರಣದ ಪರಮಾವಧಿ ತಲುಪಿದ್ದಾರೆ. ಹಿಜಾಬ್‌ ವಿಷಯ ಈಗಾಗಲೇ ನ್ಯಾಯಾಲಯದಲ್ಲಿ ಇರುವುದರಿಂದ ಹೇಳಿಕೆ ನೀಡಬಾರದು ಎನ್ನುವುದು ಸಾಮಾನ್ಯ ತಿಳಿವಳಿಕೆ. ಆದರೂ ಮುಖ್ಯಮಂತ್ರಿ ಅವರು ತುಷ್ಟೀಕರಣಕ್ಕಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.

ಯತ್ನಾಳ್​ ವಾಗ್ದಾಳಿ - (ವಿಜಯಪುರ): ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್, ಸಿಎಂ ಸಿದ್ದರಾಮಯ್ಯನವರು ಒಂದು ವರ್ಗವನ್ನು ತುಷ್ಟೀಕರಣ ಮಾಡಲು ಹೊರಟಿದ್ದಾರೆ. ಅವರಷ್ಟೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ ಹಾಕುತ್ತಾರೆ ಎಂಬಂತೆ ಮಾಡುತ್ತಿದ್ದಾರೆ. ಕೊನೆಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅವರದ್ದಷ್ಟೇ ಮತಗಳು ಅವರಿಗೆ ಬೀಳುತ್ತವೆ ಎಂದು​ ಟೀಕಿಸಿದರು. ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.‌ರವಿ‌ ಕೂಡ ಸಿಎಂ ಹಿಜಾಬ್ ಪ್ರಸ್ತಾಪಕ್ಕೆ ಕಿಡಿ ಕಾರಿದ್ಧಾರೆ.

ಇದನ್ನೂ ಓದಿ: ಹಿಜಾಬ್ ನಿಷೇಧ ವಾಪಸ್ ಪಡೆಯುವ ವಿಚಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

Last Updated : Dec 23, 2023, 7:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.