ETV Bharat / state

ಒಂದು ವರ್ಷ ಪೂರೈಸುವತ್ತ ಬೊಮ್ಮಾಯಿ ಸರ್ಕಾರ: ಬಿಜೆಪಿಯಲ್ಲಿ 15 ನಾಯಕರ ಚಿತ್ತ ಸಿಎಂ ಕುರ್ಚಿಯತ್ತ! - ಬಿಜೆಪಿಯಲ್ಲಿ ಸಿಎಂ ಕುರ್ಚಿಯ ಆಕಾಂಕ್ಷಿಗಳು

ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆಯ ಬಂಡಾಯ ನಾಯಕ ಏಕನಾಥ ಶಿಂಧೆ ಅವರ ಗುಂಪಿನ ಜೊತೆಗೂಡಿ ಮೈತ್ರಿ ಸರ್ಕಾರ ರಚಿಸಿದ ಅನಿರೀಕ್ಷಿತ ರಾಜಕೀಯ ವಿದ್ಯಮಾನದಂತೆ ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರ ನಾಯಕತ್ವವನ್ನು ಹೈಕಮಾಂಡ್ ಬದಲಿಸಬಹುದು ಎನ್ನುವ ನಿರೀಕ್ಷೆಯನ್ನು ಆಡಳಿತ ಪಕ್ಷದ ಶಾಸಕರು, ಸಚಿವರು ಹೊಂದಿದ್ದಾರೆ.

bjp-leaders-start-lobby-for-cm-post-in-karnataka
ಒಂದು ವರ್ಷದ ಪೂರೈಸುವತ್ತ ಬೊಮ್ಮಾಯಿ ಸರ್ಕಾರ: ಬಿಜೆಪಿಯಲ್ಲಿ 15 ನಾಯಕರ ಚಿತ್ತ ಸಿಎಂ ಕುರ್ಚಿಯತ್ತ!
author img

By

Published : Jul 9, 2022, 3:22 PM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದು ವರ್ಷದ ಆಡಳಿತ ಪೂರೈಸುವ ದಿನಗಳು ಸಮೀಪಿಸುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ರಾಜಕಿಯ ಚಟುವಟಿಕೆಗಳು ಮತ್ತೆ ಗರಿಗೆದರತೊಡಗಿವೆ. ಒಂದೆಡೆ ಶಾಸಕರು ಸಚಿವ ಸ್ಥಾನಕ್ಕೆ ಲಾಬಿ ನಡೆಸಿದರೆ, ಮತ್ತೊಂದೆಡೆ ಹಲವು ಹಿರಿಯ ಮುಖಂಡರು ಮುಖ್ಯಮಂತ್ರಿ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ. ಹೇಗಾದರೂ ಮಾಡಿ ಹೈಕಮಾಂಡ್ ಕೃಪೆಗಳಿಸಿ ಮುಖ್ಯಮಂತ್ರಿಯಾಗಲು ತೆರೆಮರೆಯಲ್ಲಿ ತೀವ್ರ ತರದ ಕಸರತ್ತು ನಡೆಸುತ್ತಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಹಲವಾರು ರಾಜಕೀಯ ಲೆಕ್ಕಾಚಾರಗಳೊಂದಿಗೆ ಸಿಎಂ ಹುದ್ದೆಯ ಮೇಲೆಯೇ ತಮ್ಮ ಗಮನ ಕೇಂದ್ರೀಕರಿಸಿ ರಾಜಕೀಯ ಚದುರಂಗದಾಟದಲ್ಲಿ ಆಕಾಂಕ್ಷಿಗಳು ತೊಡಗಿದ್ದಾರೆ. ಹಿರಿಯ ನಾಯಕರಾಗಿದ್ದ ಬಿ.ಎಸ್​​. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಎರಡು ವರ್ಷದ ಆಡಳಿತ ಪೂರೈಸುತ್ತಿದ್ದಂತೆಯೇ ಅವರನ್ನು ಬದಲಾಯಿಸಿದಂತೆ ಪಕ್ಷದ ಹೈಕಮಾಂಡ್ ಇದೇ ಜುಲೈ 28ಕ್ಕೆ ಒಂದು ವರ್ಷದ ಆಡಳಿತ ಪೂರೈಸುತ್ತಿರುವ ಬಸವರಾಜ ಬೊಮ್ಮಾಯಿ ಅವರನ್ನೂ ಬದಲಿಸುವ ಸಾದ್ಯತೆಗಳಿವೆ ಎನ್ನುವ ಲೆಕ್ಕಾಚಾರ ಇದೆ. ಈ ಹಿನ್ನೆಲೆಯಲ್ಲೇ ಖಾಲಿ ಇರದ ಸಿಎಂ ಕುರ್ಚಿಗಾಗಿ ಹಲವಾರು ಮುಖಂಡರು ತಮ್ಮದೇ ಆದ ರೀತಿಯಲ್ಲಿ ಲಾಬಿ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.

ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆಯ ಬಂಡಾಯ ನಾಯಕ ಏಕನಾಥ ಶಿಂಧೆ ಅವರ ಗುಂಪಿನ ಜೊತೆಗೂಡಿ ಮೈತ್ರಿ ಸರ್ಕಾರ ರಚಿಸಿದ ಅನಿರೀಕ್ಷಿತ ರಾಜಕೀಯ ವಿದ್ಯಮಾನದಂತೆ ರಾಜ್ಯದಲ್ಲಿಯೂ ಬಿಜೆಪಿ ಸರ್ಕಾರ ನಾಯಕತ್ವವನ್ನು ಹೈಕಮಾಂಡ್ ಬದಲಿಸಬಹುದೆನ್ನುವ ನಿರೀಕ್ಷೆಯನ್ನು ಆಡಳಿತ ಪಕ್ಷದ ಕೆಲವು ಶಾಸಕರು, ಸಚಿವರು ಹೊಂದಿದ್ದಾರೆ ಎನ್ನಲಾಗುತ್ತಿದೆ.

ಸಮೀಕ್ಷೆಗಳ ಮುನ್ಸೂಚನೆ : ಮುಖ್ಯಮಂತ್ರಿ ಬೊಮ್ಮಾಯಿ ನಾಯಕತ್ವದಲ್ಲಿ ಬರಲಿರುವ ವಿಧಾನಸಭೆ ಚುನಾವಣೆ ಎದುರಿಸಿದರೆ ಬಿಜೆಪಿ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರುವ ಸಾಧ್ಯತೆಗಳು ಕಡಿಮೆ ಎನ್ನುವ ಬಗ್ಗೆ ಪಕ್ಷದ ಆಂತರಿಕ ಸಮೀಕ್ಷೆಗಳೇ ಮುನ್ಸೂಚನೆ ನೀಡಿವೆ. ಇದೇ ಕಾರಣವನ್ನು ಮುಂದಿಟ್ಟು ಮುಖ್ಯಮಂತ್ರಿಗಳ ಬದಲಾವಣೆಗೆ ಹಲವರು ಒತ್ತಡ ಹಾಕುತ್ತಿದ್ದಾರೆ. ಈ ನಡುವೆ ಪಕ್ಷದ ಹೈಕಮಾಂಡ್ ಸಹ ಪೂರಕವಾಗಿಲ್ಲದ ಸಮೀಕ್ಷೆಗಳ ವರದಿಯಿಂದ ಆತಂಕಕ್ಕೀಡಾಗಿದೆ ಎಂದು ವಿಶ್ವಸನೀಯ ಮೂಲಗಳು ಹೇಳಿವೆ.

ಬೊಮ್ಮಾಯಿ ಅವರನ್ನು ಬದಲಾವಣೆ ಮಾಡುವ ನಿರ್ಧಾರಕ್ಕೆ ಹೈಕಮಾಂಡ್ ಬಂದರೆ ತಮ್ಮನ್ನು ಪರಿಗಣಿಸುವಂತೆ ಬಿಜೆಪಿಯ ಹಲವಾರು ಕೆಂದ್ರದ ನಾಯಕರು ಮತ್ತು ರಾಜ್ಯದ ಹಿರಿಯ ಮುಖಂಡರು ತಮ್ಮದೇ ಆದ ನೆಟ್​ವರ್ಕ್​ ಮೂಲಕ ಹೈಕಮಾಂಡ್​ ಕೃಪಾಕಟಾಕ್ಷಕ್ಕೆ ಒಳಗಾಗಿ ಸಿಎಂ ಆಗುವ ಕನಸು ನನಸು ಮಾಡಿಕೊಳ್ಳಲು ಭಗೀರಥ ಪ್ರಯತ್ನದಲ್ಲಿ ತೊಡಗಿದ್ದಾರೆ ಎಂದೂ ಹೇಳಲಾಗುತ್ತಿದೆ.

ಸಿಎಂ ಕುರ್ಚಿಯ ಆಕಾಂಕ್ಷಿಗಳು: ಬಿಜೆಪಿಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿತರಿಗಿಂತ ಮುಖ್ಯಮಂತ್ರಿ ಕುರ್ಚಿಯ ಮೇಲೆ ಕುಳಿತುಕೊಳ್ಳುವ ಕನಸು ಕಾಣುತ್ತಿರುವವರ ಸಂಖ್ಯೆ ಹೆಚ್ಚಿದೆ. ಸುಮಾರು 15ಕ್ಕೂ ಹೆಚ್ಚಿನ ಸಂಖ್ಯೆಯ ಮುಖಂಡರುಗಳು ಸಿಎಂ ಆಗುವ ಗುರಿಹೊಂದಿದ್ದು ಆ ನಿಟ್ಟಿನ ರಾಜಕೀಯ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಬಿಜೆಪಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಂಬಲಿಸುತ್ತ ಬಂದಿರುವ ಲಿಂಗಾಯತ ಸಮುದಾಯದ ಪೈಕಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಕೇಂದ್ರದ ಮಾಜಿ ಸಚಿವ, ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಂಸದ ಶಿವಕುಮಾರ್ ಉದಾಸಿ ಮತ್ತು ಶಾಸಕ ಅರವಿಂದ ಬೆಲ್ಲದ ಹೆಸರು ಪ್ರಮುಖವಾಗಿ ಕೇಳಿಬರುತ್ತಿವೆ.

ಒಕ್ಕಲಿಗರ ಸಮುದಾಯದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಡಾ.ಅಶ್ವತ್ಥ ನಾರಾಯಣ, ಆರ್.ಅಶೋಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆದರೆ, ಬ್ರಾಹ್ಮಣ ಸಮುದಾಯದಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವ ಸುರೇಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವಕಾಶ ಸಿಕ್ಕರೆ ಈ ಅವಧಿಯಲ್ಲೇ ಮುಖ್ಯಮಂತ್ರಿಗಳಾಗುವ ಹೆಬ್ಬಯಕೆ ಹೊಂದಿದ್ದಾರೆ ಎನ್ನಲಾಗಿದೆ. ಇತ್ತ, ದಲಿತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕೆನ್ನುವ ಕೂಗು ಕೇಳಿಬಂದರೆ ಗೋವಿಂದ ಕಾರಜೋಳ ಸಹ ಮುಖ್ಯಮಂತ್ರಿ ಜವಾಬ್ದಾರಿ ನಿರ್ವಹಿಸಲು ಸಹ ಸೈ ಎನ್ನುತ್ತಿದ್ದಾರಂತೆ.

ಗುಟ್ಟು ಬಿಟ್ಟುಕೊಡದ ಹೈಕಮಾಂಡ್: ರಾಜ್ಯದಲ್ಲಿ ಮುಖ್ಯಮಂತ್ರಿಗಳಾಗಲು ಆಸಕ್ತಿ ತೋರುತ್ತಿರುವವರ ಬಗ್ಗೆ ಮಾಹಿತಿ ಹೊಂದಿರುವ ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಗುಟ್ಟು ಮಾತ್ರ ಬಿಟ್ಟುಕೊಟ್ಟಿಲ್ಲ. ಸಿಎಂ ಬೊಮ್ಮಾಯಿ ನಾಯಕತ್ವ ಬದಲಾಯಿಸಿದರೆ ಉಂಟಾಗುವ ರಾಜಕೀಯ ಪರಿಣಾಮಗಳೇನು?, ವಿಧಾನಸಭೆ ಚುನಾವಣೆಯಲ್ಲಿ ಯಾವ ತರಹದ ಪರಿಣಾಮ ಪಕ್ಷದ ಮೇಲೆ ಬೀರಲಿದೆ ಎನ್ನುವ ಬಗ್ಗೆ ಅಧ್ಯಯನ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ಅಲ್ಲದೇ, ಬಿಜೆಪಿ ಸರ್ಕಾರದ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್​ಗೂ ಸ್ಪಷ್ಟತೆ ಇಲ್ಲ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಅಧಿಕಾರದಿಂದ ಕೆಳಗಿಳಿಸಿದ ನಂತರ ನಿರೀಕ್ಷಿತ ಮಟ್ಟದಲ್ಲಿ ಪಕ್ಷದ ಸಾಮರ್ಥ್ಯ ಹೆಚ್ಚಾಗದಿರುವುದು ಬಿಜೆಪಿಯ ದೆಹಲಿ ನಾಯಕರನ್ನು ಕಳವಳಕ್ಕೀಡುಮಾಡಿದೆ.

ಉಪ ಚುನಾವಣೆ ಮತ್ತು ವಿಧಾನ ಪರಿಷತ್ತಿನ ಶಿಕ್ಷಕರ, ಪದವೀಧರರ ಚುನಾವಣೆಯಲ್ಲಿ ಪಕ್ಷದ ಸಾಧನೆ ಮನಗಂಡಿರುವ ದೆಹಲಿ ವರಿಷ್ಠರು ನಾಯಕತ್ವ ಬದಲಾವಣೆ ವಿಚಾರದಲ್ಲಿ ಬಹಳ ಎಚ್ಚರಿಕೆಯ ಹೆಜ್ಜೆಯಿಡುವ ರಾಜಕೀಯ ಸನ್ನಿವೇಶ ನಿರ್ಮಾಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ಚಾಲಕನ ವರ್ಗಾವಣೆಗೊಳಿಸಿದ್ದಕ್ಕೆ ಐಎಎಸ್ ಅಧಿಕಾರಿಗೇ ಅವಾಜ್​.. ಸಚಿವರ ಆಪ್ತನೆಂದು ಬೆದರಿಕೆ ಹಾಕಿದವ ಅಂದರ್​ ​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.