ETV Bharat / state

ರಾಜ್ಯ ಬಿಜೆಪಿಯಲ್ಲಿ ಕಾಣಿಸಿಕೊಂಡಿರುವ ಅಸಮಾಧಾನದ ಗಾಯಕ್ಕೆ ದೆಹಲಿ ವರಿಷ್ಠರಿಂದ ಸಿಗುವುದೇ ಔಷಧ? - ಬಿಜೆಪಿ ನಾಯಕರ ಅಸಮಾಧಾನ

ಪ್ರಸ್ತುತ ರಾಜಕೀಯ ಬೆಳವಣಿಗೆಯಿಂದ ಅಸಮಾಧಾನಗೊಂಡಿರುವ ಕೆಲ ಬಿಜೆಪಿ ನಾಯಕರು ಡಿ.7ರಂದು ದೆಹಲಿಗೆ ತೆರಳಿ ಕೇಂದ್ರದ ನಾಯಕರನ್ನು ಭೇಟಿ ಮಾಡಲಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಕಾಣಿಸಿಕೊಂಡಿರುವ ಅಸಮಾಧಾನ

author img

By ETV Bharat Karnataka Team

Published : Nov 27, 2023, 7:53 PM IST

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಚುಕ್ಕಾಣಿ ಹಿಡಿದರೆ, ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆರ್. ಅಶೋಕ್ ಅವರು ನೇಮಕಗೊಂಡ ಬಳಿಕ ಪಕ್ಷದ ಕೆಲ ನಾಯಕರ ಅಸಮಾಧಾನ ಸ್ಫೋಟಗೊಂಡಿರುವುದು ರಹಸ್ಯವಾಗಿಯೇನೂ ಉಳಿದಿಲ್ಲ.

ಬಿಜೆಪಿಯೊಳಗಿನ ಒಂದು ಬಣ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದೆ. ಆಯ್ಕೆ ಮಾಡುವ ಮುನ್ನ ದೆಹಲಿ ವರಿಷ್ಠರು ಸೌಜನ್ಯಕ್ಕಾದರೂ ರಾಜ್ಯ ನಾಯಕರ ಜೊತೆ ಮಾತುಕತೆ ನಡೆಸಿಲ್ಲ. ಹಿರಿಯರನ್ನು ಕಡೆಗಣಿಸಿ ಕೇವಲ ಯಡಿಯೂರಪ್ಪ ಪುತ್ರ ಎಂಬ ಒಂದೇ ಕಾರಣಕ್ಕಾಗಿ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಒಂದು ಬಣ ಅಸಮಾಧಾನ ವ್ಯಕ್ತಪಡಿಸಿದೆ.

ವಿಧಾನಸಭೆ ಚುನಾವಣೆಯಲ್ಲಿ ಸೋಲು, ರಾಜ್ಯದಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆಗಳ ಕುರಿತು ವರಿಷ್ಠರ ಜೊತೆ ಚರ್ಚಿಸಲು ಡಿಸೆಂಬರ್ 7 ರಂದು ಕೆಲವು ಅಸಮಾಧಾನಿತ ನಾಯಕರು ದೆಹಲಿಗೆ ತೆರಳಲಿದ್ದಾರೆ. ಅಸಮಾಧಾನ ಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಮತ್ತಿತರ ನಾಯಕರು, ಡಿಸೆಂಬರ್ 7 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಸೇರಿ ಹಲವು ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ನಡುವೆಯೇ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಆರ್.ಅಶೋಕ್ ಅವರನ್ನು ನೇಮಕ ಮಾಡಿರುವುದಕ್ಕೂ ವಿರೋಧಿ ಬಣ ಕುದಿಯುತ್ತಿದೆ. ಅದರಲ್ಲೂ ಪ್ರತಿಪಕ್ಷದ ನಾಯಕ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರಂತೂ ವರಿಷ್ಠರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಂದು ಹಂತದಲ್ಲಿ ಬಿ.ವೈ. ವಿಜಯೇಂದ್ರ ಅವರು, ಯತ್ನಾಳ್ ಅವರ ಮನೆಗೆ ಹೋಗಿ ಭೇಟಿ ಮಾಡುವುದಾಗಿ ಹೇಳಿದ್ದರು. ನನ್ನ ಮನೆಗೆ ಅವರು ಬರುವ ಅಗತ್ಯವಿಲ್ಲ ಎಂದು ಯತ್ನಾಳ್ ನೇರವಾಗಿಯೇ ಹೇಳಿದ್ದಾರೆ.

ಈ ಅಸಮಾಧಾನ ಇನ್ನಷ್ಟು ಬೆಳೆಯಬಹುದು ಎಂಬ ಆತಂಕಕ್ಕೆ ಒಳಗಾಗಿರುವ ವರಿಷ್ಠರು, ಸೋಮಣ್ಣ , ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಸಿ.ಪಿ.ಯೋಗೇಶ್ವರ್ ಸೇರಿದಂತೆ ಕೆಲವು ನಾಯಕರನ್ನು ದೆಹಲಿಗೆ ಬರುವಂತೆ ಕರೆದಿದ್ದಾರೆ ಎನ್ನಲಾಗಿದೆ. ವಿಜಯೇಂದ್ರ ಮತ್ತು ಆರ್.ಅಶೋಕ್ ಅವರನ್ನು ಎರಡು ಪ್ರಮುಖ ಸ್ಥಾನಗಳಿಗೆ ಆಯ್ಕೆ ಮಾಡಿರುವುದಕ್ಕೆ ಹಲವರು ವಿರೋಧ ವ್ಯಕ್ತಪಡಿಸಿರುವುದರಿಂದ ರಾಷ್ಟ್ರೀಯ ನಾಯಕರ ಭೇಟಿ ಮಹತ್ವ ಪಡೆದುಕೊಂಡಿದೆ.

ಭೇಟಿ ಸಂದರ್ಭದಲ್ಲಿ ವಿಧಾನಸಭೆ ಚುನಾವಣೆ ವೇಳೆ ತಮಗೆ ಪಕ್ಷದಲ್ಲಿ ಯಾವ ರೀತಿ ಹಿನ್ನಡೆ ಆಯಿತು, ಇದಕ್ಕೆ ಯಾರು ಕಾರಣ ಎಂಬುದು ಸೇರಿ ಇತರ ವಿಷಯಗಳನ್ನು ವರಿಷ್ಠರ ಗಮನಕ್ಕೆ ತರಲು ಮುಂದಾಗಿದ್ದಾರೆ. ಕೆಲವರು ತಮ್ಮ ಸ್ವಾರ್ಥಕ್ಕಾಗಿ ಹಾಗೂ ಕುಟುಂಬದ ಹಿತ ಕಾಪಾಡಲು ಒಳ ಒಪ್ಪಂದ ಮಾಡಿಕೊಂಡು ಚುನಾವಣೆಯಲ್ಲಿ ಹಿನ್ನಡೆ ಉಂಟು ಮಾಡಿದರೂ ಪುನಃ ಇಂಥವರಿಗೆ ಪಕ್ಷದಲ್ಲಿ ಮಣೆ ಹಾಕಿದರೆ ನಾವು ಹೇಗೆ ರಾಜಕಾರಣ ಮಾಡಬೇಕು ಎಂಬ ಪ್ರಶ್ನೆ ಮುಂದಿಡಲಿದ್ದಾರೆ. ಒಂದು ರಾಜಕೀಯ ಪಕ್ಷ ಕೇವಲ ಕುಟುಂಬಕ್ಕೆ ಸೀಮಿತವಾಗಬಾರದು ಎಂಬ ಪ್ರಶ್ನೆ ಅಸಮಾಧಾನಿತರದ್ದು. ಇದಕ್ಕೆ ವರಿಷ್ಠರು ಅಸಮಾಧಾನಿತರನ್ನು ಯಾವ ರೀತಿ ಸಮಾಧಾನಪಡಿಸುತ್ತಾರೆ ಎಂಬುದೇ ಸದ್ಯಕ್ಕಿರುವ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಸಚಿವ ನಾಗೇಂದ್ರ ವಿರುದ್ಧ ಸಿಎಂ ಶಿಫಾರಸು ಮಾಡಿದ ಪ್ರಕರಣ ಏಕೆ ಹಿಂಪಡೆಯಬಾರದು?: ಶಾಸಕ ಜಿ. ಜನಾರ್ದನ ರೆಡ್ಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.