ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ವಿಳಂಬ ಧೋರಣೆ ಪ್ರಶ್ನಿಸಿ ಸ್ಪೀಕರ್ ವಿರುದ್ಧ ನಾಳೆ ರಾಜ್ಯಪಾಲರಿಗೆ ದೂರು ಸಲ್ಲಿಸಲು ಬಿಜೆಪಿ ನಿರ್ಧರಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಶಾಸಕರ ರಾಜೀನಾಮೆಯಿಂದ ಸರ್ಕಾರ ಬಹುಮತ ಕಳೆದುಕೊಂಡಿದ್ದು ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂಬುದು ಬಿಜೆಪಿ ಆಗ್ರಹವಾಗಿದೆ.
![bgl](https://etvbharatimages.akamaized.net/etvbharat/prod-images/3790370_bgl.jpg)
ಈ ಹಿನ್ನೆಲೆಯಲ್ಲಿ ಬುಧವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ಸಿದ್ಧತೆ ನಡೆಸಿದ್ದು, ಬಳಿಕ ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಜೊತೆಗೆ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿಲು ಸ್ಪೀಕರ್ ವಿಳಂಬ ಧೋರಣೆ ಅನುಸರಿಸುತ್ತಿರುವುದರ ವಿರುದ್ಧ ದೂರು ಸಲ್ಲಿಸಲಿದ್ದಾರೆ ಎನ್ನಲಾಗುತ್ತಿದೆ.