ಬೆಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಹುಟ್ಟುಹಬ್ಬಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಶುಭ ಕೋರಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಜನ್ಮದಿನದ ಶುಭಾಶಯಗಳು. ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಆ ದೇವರು ನಿಮಗೆ ಕರುಣಿಸಲಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡ ಟ್ವೀಟ್ ಮಾಡಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರು ಅವರಿಗೆ ಉತ್ತಮ ಆರೋಗ್ಯ ಹಾಗೂ ಹೆಚ್ಚಿನ ಆಯಸ್ಸು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಜೊತೆಗೆ ಡಿಸಿಎಂ ಡಾ. ಅಶ್ವತ್ಥ ನಾರಾಯಣ್, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಸೇರಿದಂತೆ ಬಿಜೆಪಿ ನಾಯಕರು ರಾಷ್ಟ್ರಪತಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ