ETV Bharat / state

ಬಹುಮತ ಸಾಬೀತು, ಹಣಕಾಸು ವಿಧೇಯಕ ಅಂಗೀಕಾರ ಆಗುವ ತನಕ ಶಾಂತವಾಗಿರಲು ಬಿಜೆಪಿ ನಿರ್ಧಾರ​​

author img

By

Published : Jul 28, 2019, 11:01 PM IST

ರಾಜ್ಯದಲ್ಲಿನ ಬರ ಪರಿಸ್ಥಿತಿ, ಅಭಿವೃದ್ಧಿ ಕಾರ್ಯಗಳ ಕುರಿತು ಆಗಸ್ಟ್ 2 ರಂದು ಸಿಎಂ ಯಡಿಯೂರಪ್ಪ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಮೂರು ದಿನದ ನಂತರ ಎಲ್ಲಾ ಶಾಸಕರು ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್.

ಬಿಜೆಪಿ ಶಾಸಕಾಂಗ ಸಭೆ

ಬೆಂಗಳೂರು: ಬಹುಮತ ಸಾಬೀತು ಹಾಗೂ ಹಣಕಾಸು ವಿಧೇಯಕ ಸದನದಲ್ಲಿ ಅಂಗೀಕಾರಗೊಳ್ಳುವವರೆಗೆ ಪ್ರತಿಪಕ್ಷಗಳ ಯಾವುದೇ ಟೀಕೆಗೂ ಪ್ರತಿಕ್ರಿಯೆ ನೀಡದೇ ಶಾಂತಿಯುತವಾಗಿ ಕಲಾಪದಲ್ಲಿ ಇರಬೇಕು ಎನ್ನುವ ನಿರ್ಧಾರವನ್ನು ಬಿಜೆಪಿ ಶಾಸಕಾಂಗ ಸಭೆಯಲ್ಲಿ ಕೈಗೊಳ್ಳಲಾಗಿದೆ.

ನಗರದ ಚಾನ್ಸರಿ ಪೆವಿಲಿಯನ್ ಹೋಟೆಲಗ್​​ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ನಾಳೆ ಬಿಜೆಪಿ ಬಹುಮತ ಸಾಬೀತುಪಡಿಸುವ ಕುರಿತು ಸಭೆಯಲ್ಲಿ ಚರ್ಚೆ ಆಗಿದೆ. ನಾಳೆ 10.30ಕ್ಕೆ ವಿಧಾನಸೌಧದ ಸಿಎಂ ಕಚೇರಿಯಲ್ಲಿ ಶಾಸಕಾಂಗ ಸಭೆ ನಡೆಸಲಾಗುತ್ತದೆ. 11 ಗಂಟೆಯೊಳಗೆ ಸದನಕ್ಕೆ ತಲುಪಲು ಶಾಸಕರಿಗೆ ಸೂಚಿಸಲಾಗಿದೆ. ಮಧ್ಯಾಹ್ನ 1 ಗಂಟೆಯೊಳಗೆ ಬಿಜೆಪಿಯ ಎಲ್ಲಾ ಶಾಸಕರು ಸದನಕ್ಕೆ ಹಾಜರಾಗುವಂತೆ ನೋಡಿಕೊಳ್ಳಲು ಸುಮಾರು 12 ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್

ನಾಳೆಯೇ ಹಣಕಾಸು ವಿಧೇಯಕವನ್ನು ಸದನದಲ್ಲಿ ಮಂಡನೆ ಮಾಡಲಾಗುತ್ತದೆ. ಹಣಕಾಸು ವಿಧೇಯಕ ಅಂಗೀಕಾರಕ್ಕೆ ಸಹಕರಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಮನವಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ನಿರ್ಧಾರದ ಕುರಿತು ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಯಿತು. ಸ್ಪೀಕರ್ ನಿರ್ಧಾರ ಏಕಪಕ್ಷೀಯವಾಗಿದೆ. ಅವರ ನಿರ್ಧಾರವನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಖಂಡಿಸಿದೆ ಎಂದರು.

ಜೆಡಿಎಸ್ ಬಿಜೆಪಿಗೆ ಬಾಹ್ಯ ಬೆಂಬಲ ನೀಡುವ ವಿಷಯ ಸಂಬಂಧ ಇಂದಿನ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಆದರೆ ಜೆಡಿಎಸ್ ವರಿಷ್ಠರು ಮೊದಲು ನಿರ್ಧಾರ ಕೈಗೊಂಡ ನಂತರ ಬಿಜೆಪಿ ಚರ್ಚೆ ನಡೆಸಲಿದೆ ಎಂದರು. ರಾಜ್ಯದಲ್ಲಿನ ಬರ ಪರಿಸ್ಥಿತಿ, ಅಭಿವೃದ್ಧಿ ಕಾರ್ಯಗಳ ಕುರಿತು ಆಗಸ್ಟ್ 2ರಂದು ಸಿಎಂ ಯಡಿಯೂರಪ್ಪ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಮೂರು ದಿನದ ನಂತರ ಎಲ್ಲಾ ಶಾಸಕರು ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿದ್ದಾರೆ. ಆಗಸ್ಟ್ 11ರವರೆಗೂ ಸದಸ್ಯತ್ವ ಅಭಿಯಾನ ನಡೆಸಿ ನಿರೀಕ್ಷಿತ ಗುರಿ ತಲುಪಲು ಸಹಕಾರಿಯಾಗಲಿದ್ದಾರೆ ಎಂದು ರವಿಕುಮಾರ್ ತಿಳಿಸಿದರು.

Intro:

ಬೆಂಗಳೂರು:ಬಹುಮತ ಸಾಬೀತು ಹಾಗು ಹಣಕಾಸು ವಿಧೇಯಕ ಸದನದಲ್ಲಿ ಅಂಗೀಕಾರಗೊಳ್ಳುವವರೆಗೆ ಪ್ರತಿಪಕ್ಷಗಳ ಯಾವುದೇ ಟೀಕೆಗೂ ಪ್ರತಿಕ್ರಿಯೆ ನೀಡದೇ ಶಾಂತಿಯುತವಾಗಿ ಕಲಾಪದಲ್ಲಿ ಇರಬೇಕು ಎನ್ನುವ ನಿರ್ಧಾರವನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೈಗೊಳ್ಳಲಾಗಿದೆ.

ನಗರದ ಚಾನ್ಸರಿ ಪೆವಿಲಿಯನ್ ಹೋಟೆಲ್ ನಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್,
ನಾಳೆ ಬಿಜೆಪಿ ಬಹುಮತ ಸಾಬೀತುಪಡಿಸುವ ಕುರಿತು ಸಭೆಯಲ್ಲಿ ಚರ್ಚೆ ಆಗಿದೆ‌ ನಾಳೆ ಬೆಳಿಗ್ಗೆ ಮತ್ತೊಮ್ಮೆ 10.30 ಕ್ಕೆ ವಿಧಾನಸೌಧದ ಸಿಎಂ ಕಚೇರಿಯಲ್ಲಿ ಶಾಸಕಾಂಗ ಸಭೆ ನಡೆಸಲಾಗುತ್ತದೆ ನಂತೆ 11 ಗಂಟೆಯೊಳಗೆ ಸದನಕ್ಕೆ ತಲುಪಲು ಶಾಸಕರಿಗೆ ಸೂಚಿಸಲಾಗಿದೆ.ಮಧ್ಯಾಹ್ನ 1 ಗಂಟೆಯೊಳಗೆ ಬಿಜೆಪಿಯ ಎಲ್ಲಾ ಶಾಸಕರು ಸದನಕ್ಕೆ ಹಾಜರಾಗುವಂತೆ ನೋಡಿಕೊಳ್ಳಲು ಸುಮಾರು 12 ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ ಎಂದರು.

ನಾಳೆಯೇ ಹಣಕಾಸು ವಿಧೇಯಕವನ್ನು ಸದನದಲ್ಲಿ ಮಂಡನೆ ಮಾಡಲಾಗುತ್ತದೆ, ಹಣಕಾಸು ವಿಧೇಯಕ ಅಂಗೀಕಾರಕ್ಕೆ ಸಹಕರಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಮನವಿ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ನಿರ್ಧಾರದ ಕುರಿತು ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಯಿತು, ಸ್ಪೀಕರ್ ನಿರ್ಧಾರ ಏಕ ಪಕ್ಷೀಯವಾಗಿದೆ ಅವರ ನಿರ್ಧಾರವನ್ನು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಖಂಡಿಸಿದೆ ಎಂದರು.

ಜೆಡಿಎಸ್ ಬಿಜೆಪಿಗೆ ಬಾಹ್ಯ ಬೆಂಬಲ ನೀಡುವ ಕುರಿತ ವಿಷಯ ಸಂಬಂಧ ಇಂದಿನ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಆದರೆ ಜೆಡಿಎಸ್ ವರುಷ್ಠರು ಮೊದಲು ನಿರ್ಧಾರ ಕೈಗೊಂಡ ನಂತರ ಬಿಜೆಪಿ ಚರ್ಚೆ ನಡೆಸಲಿದೆ ಎಂದರು.

ರಾಜ್ಯದಲ್ಲಿನ ಬರ ಪರಿಸ್ಥಿತಿ, ಅಭಿವೃದ್ಧಿ ಕಾರ್ಯಗಳ ಕುರಿತು ಆಗಸ್ಟ್ 2 ರಂದು ಸಿಎಂ ಯಡಿಯೂರಪ್ಪ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಮೂರು ದಿನದ ನಂತರ ಎಲ್ಲಾ ಶಾಸಕರು ಬಿಜೆಪಿಯ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿದ್ದಾರೆ. ಆಗಸ್ಟ್ 11 ರವರೆಗೂ ಸದಸ್ಯತ್ವ ಅಭಿಯಾನ ನಡೆಸಿ ನಿರೀಕ್ಷಿತ ಗುರಿ ತಲುಪಲು ಸಹಕಾರಿಯಾಗಲಿದ್ದಾರೆ ಎಂದು ರವಿಕುಮಾರ್ ತಿಳಿಸಿದರು.
Body:ಪ್ರಶಾಂತ್ ಕುಮಾರ್Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.