ಬೆಂಗಳೂರು: ಉಪ ಚುನಾವಣಾ ಕಣ ರಂಗೇರುತ್ತಿದ್ದು, ಪ್ರಚಾರ ಕಾರ್ಯದ ಜವಾಬ್ದಾರಿ ನಿರ್ವಹಣೆ ಕಾರ್ಯತಂತ್ರದ ಕುರಿತು ಬಿಜೆಪಿ ಮಾಧ್ಯಮ ವಿಭಾಗದ ಮಹತ್ವದ ಸಭೆ ನಡೆಸಲಾಯಿತು.
ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ಉಪ ಚುನಾವಣೆ-2020 ಪ್ರಯುಕ್ತ ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರೊಂದಿಗೆ ಮಾಧ್ಯಮ ವಿಭಾಗದ ಉಸ್ತುವಾರಿ ಸಮಿತಿಯ ಸದಸ್ಯರು ವರ್ಚುವಲ್ ಸಭೆಯಲ್ಲಿ ಪಾಲ್ಗೊಂಡರು.
ನ. 3ರ ಉಪ ಚುನಾವಣೆಯ ಮಾಧ್ಯಮ ವಿಭಾಗದ ಕಾರ್ಯತಂತ್ರದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಹಿಂದಿನ ಚುನಾವಣೆಯ ತಂತ್ರಗಾರಿಕೆಯ ಜೊತೆಯಲ್ಲಿ ಈ ಬಾರಿ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುವ ನಿರ್ಣಯ ಕೈಗೊಳ್ಳಲಾಯಿತು.