ETV Bharat / state

ಮಾ.25ರಂದು ದಾವಣಗೆರೆಯಲ್ಲಿ ಬಿಜೆಪಿ ಮಹಾ ಸಂಗಮ: ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ - ಈಟಿವಿ ಭಾರತ ಕನ್ನಡ

ದಾವಣಗೆರೆಯಲ್ಲಿ ಬಿಜೆಪಿ ಮಹಾಸಂಗಮ - ಮಲ್ಲೇಶ್ವರ ಬಿಜೆಪಿ ಕಚೇರಿಯಲ್ಲಿ ಮಹತ್ವ ಸಭೆ - ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿ

bjp-meeting-on-vijaya-sankalpa-yathra-at-davangere
ಮಾ.25ರಂದು ದಾವಣಗೆರೆಯಲ್ಲಿ ಬಿಜೆಪಿ ಮಹಾಸಂಗಮ: ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ
author img

By

Published : Mar 18, 2023, 9:51 AM IST

ಬೆಂಗಳೂರು: ಮಾರ್ಚ್ 25ರಂದು ವಾಣಿಜ್ಯನಗರಿ ದಾವಣಗೆರೆಯಲ್ಲಿ ಬಿಜೆಪಿ ಮಹಾ ಸಂಗಮ ಕಾರ್ಯಕ್ರಮ ಹಿನ್ನೆಲೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಚುನಾವಣಾ ಪೂರ್ವದಲ್ಲಿ ಸಮಾವೇಶವನ್ನು ಬೃಹತ್ ಪ್ರಮಾಣದಲ್ಲಿ ನಡೆಸಿ ಯಶಸ್ವಿಗೊಳಿಸುವ ಕುರಿತು ಚರ್ಚಿಸಲಾಯಿತು.

ನಗರದ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ರಾಜ್ಯ ಉಸ್ತುವಾರಿಗಳು ಮತ್ತು ರಾಜ್ಯ ನಾಯಕರ ಮಹತ್ವದ ಸಭೆ ನಡೆಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ, ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಷ್ಟ್ರೀಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಭೆಯಲ್ಲಿ ಭಾಗಿಯಾಗಿದ್ದರು. ಮಾರ್ಚ್ 25 ರಂದು ದಾವಣಗೆರೆಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ರಥಯಾತ್ರೆಗಳ ಬೃಹತ್ ಸಮಾರೋಪ ಸಮಾವೇಶದ ಸಿದ್ಧತೆಗಳ ಕುರಿತು ಪೂರ್ವಭಾವಿಯಾಗಿ ಸಭೆ ನಡೆಸಿದರು.

ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು, ಸುಮಾರು 10 ಲಕ್ಷ ಜನ ಸೇರಿಸಲು ಬಿಜೆಪಿ ಯೋಜನೆ ರೂಪಿಸಿದೆ. ಹಾಗಾಗಿ ಸಮಾವೇಶ ಯಶಸ್ವಿಯಾಗುವಂತೆ ಮಾಡುವ ಕಾರ್ಯತಂತ್ರ ಮತ್ತು ಪ್ರಮುಖರಿಗೆ ಜವಾಬ್ದಾರಿ ಹಂಚುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ನಡೆಯಲಿರುವ ಬಿಜೆಪಿಯ ಅತಿದೊಡ್ಡ ಕಾರ್ಯಕ್ರಮ ಇದಾಗಿರುವ ಹಿನ್ನೆಲೆಯಲ್ಲಿ ಯಾವುದೇ ಲೋಪದೋಷವಾಗದಂತೆ ಕಾರ್ಯಕ್ರಮ ಆಯೋಜಿಸುವ ಕುರಿತು ಸಮಾಲೋಚನೆ ನಡೆಸಲಾಯಿತು.

ಸಮಾವೇಶ ಮುನ್ನ ದಿನ ಬೃಹತ್​ ರೋಡ್​ ಶೋ : ದಾವಣಗೆರೆಯಲ್ಲಿ 25ರಂದು ಸಮಾವೇಶ ನಡೆಯುವ ಮುನ್ನಾ ದಿನ ಮಾರ್ಚ್ 24ರಂದು ನಗರದಲ್ಲಿ ನಾಲ್ಕು ಬೃಹತ್ ರೋಡ್ ಶೋ ನಡೆಯಲಿದೆ. ಇದರಲ್ಲಿ ರಾಜ್ಯ ನಾಯಕರು, ರಾಜ್ಯ ಉಸ್ತುವಾರಿಗಳು ಭಾಗಿಯಾಗುತ್ತಿದ್ದು, ಯಾವ ರೀತಿ ರೋಡ್ ಶೋ ಆಯೋಜನೆ ಮಾಡಬೇಕು,ಯಾವ ಯಾವ ತಂಡದಲ್ಲಿ ಯಾವ ಯಾವ ನಾಯಕರು ಇರಬೇಕು ಎನ್ನುವ ಕುರಿತು ಚರ್ಚಿಸಲಾಯಿತು.

ಮಧ್ಯ ಕರ್ನಾಟಕದ ಕೇಂದ್ರ ಭಾಗವಾಗಿರುವ ದಾವಣಗೆರೆಯಲ್ಲಿ ಕಾಂಗ್ರೆಸ್ ನ ಸಿದ್ದರಾಮೋತ್ಸವ ಅದ್ದೂರಿಯಾಗಿ ಅತ್ಯಂತ ಯಶಸ್ವಿಯಾಗಿ ನಡೆದಿತ್ತು. ಹಾಗಾಗಿ ಅದೇ ದಾವಣಗೆರೆಯಲ್ಲಿ ಬೃಹತ್ ಶಕ್ತಿ ಪ್ರದರ್ಶನ ಮಾಡಲು ಬಿಜೆಪಿ ಸಾಕಷ್ಟು ದಿನದಿಂದ ಯೋಜನೆ ರೂಪಿಸಿತ್ತು. ಇದೀಗ ಆ ಕಾರ್ಯಕ್ರಮ ಸಿದ್ದರಾಮೋತ್ಸವಕ್ಕಿಂತ ಕಡಿಮೆ ಇಲ್ಲದಂತೆ ನಡೆಸಬೇಕಿದೆ ಹಾಗಾಗಿ ಎಲ್ಲ ನಾಯಕರು ಸೇರಿ ಚರ್ಚಿಸಿದ್ದಾರೆ.

ವಿಜಯಸಂಕಲ್ಪ ರಥಯಾತ್ರೆಯಲ್ಲಿ ಪ್ರಧಾನಿ ಮೋದಿ ಭಾಗಿ : ವಿಜಯ ಸಂಕಲ್ಪ ರಥಯಾತ್ರೆ ಅಂತಿಮ ಹಂತ ತಲುಪಿದೆ. ಮಾರ್ಚ್ 25 ರಂದು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಸಮಾರೋಪ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಸುಮಾರು 10 ಲಕ್ಷ ಜನರನ್ನು ಸೇರಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿದ್ದರು.

ಇದನ್ನೂ ಓದಿ : ಕಾರ್ಯಕ್ರಮ ಆಯೋಜನೆ ವಿಚಾರಕ್ಕೆ ಗಲಾಟೆ: ಕಾಂಗ್ರೆಸ್ - ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.