ETV Bharat / state

ಅನುದಾಕ್ಕಾಗಿ ಕಾಲಿಗೆ ಬಿದ್ದು ಮನವಿ ಪತ್ರ ನೀಡಿದ ಮುನಿರತ್ನ; ಸೀನ್ ಕ್ರಿಯೆಟ್ ಮಾಡುವ ಅಗತ್ಯವಿರಲಿಲ್ಲ ಎಂದ ಡಿ.ಕೆ.ಶಿವಕುಮಾರ್

ಕಂಬಳ ಕರೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕಾಲಿಗೆ ಬಿದ್ದು ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಮುನಿರತ್ನ ಮನವಿ ಮಾಡಿದರು.

DCM DK Shivakumar spoke to the media.
ಡಿಸಿಎಂ ಡಿ ಕೆ ಶಿವಕುಮಾರ್ ಮಾಧ್ಯಮದವರ ಜೊತೆ ಮಾತನಾಡಿದರು.
author img

By ETV Bharat Karnataka Team

Published : Oct 11, 2023, 7:40 PM IST

Updated : Oct 11, 2023, 7:51 PM IST

ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಂಗಳೂರು: ಶಾಸಕ ಮುನಿರತ್ನ ಅವರು ನನ್ನ ಭೇಟಿಗೆ ಮೊದಲೇ ಅವಕಾಶ ಕೇಳಿದ್ದರೆ ಕೊಡುತ್ತಿದ್ದೆ. ಕಂಬಳ ಕರೆ ಭೂಮಿ ಪೂಜೆ (ಗುದ್ದಲಿಪೂಜೆ) ಕಾರ್ಯಕ್ರಮದ ಬಳಿ ಬಂದು ಸೀನ್ ಕ್ರಿಯೇಟ್ ಮಾಡುವ ಅವಶ್ಯಕತೆ ಇರಲಿಲ್ಲ. ಅವರನ್ನು ಕಾಲಿಗೆ ಬೀಳಿಸಿಕೊಳ್ಳಲು ನಾನೇನು ಮಠದ ಸ್ವಾಮೀಜಿಯೇನೂ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಸದಾಶಿವನಗರದ ನಿವಾಸದಲ್ಲಿ ಮುನಿರತ್ನ ಭೇಟಿಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಮುನಿರತ್ನ ರಾಜರಾಜೇಶ್ವರಿ ಕ್ಷೇತ್ರಕ್ಕೆ ಅನುದಾನದ ವಿಚಾರವಾಗಿ ಚರ್ಚೆ ನಡೆಸಿದರು. 'ದ್ವೇಷದ ರಾಜಕಾರಣ' ಎಂದು ಹೇಳಿದರು. ಅದಕ್ಕೆ ನಾನು ಬಿಜೆಪಿ ಸರ್ಕಾರವಿದ್ದಾಗ ಕಾಂಗ್ರೆಸ್ ಶಾಸಕರ ಅನುದಾನಕ್ಕೇಕೆ ಕತ್ತರಿ ಹಾಕಿದ್ದರು? ಹೋಗಿ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರನ್ನೇ ಕೇಳಿ ನೋಡಿ. ಕನಕಪುರಕ್ಕೆ ಬಂದಿದ್ದ ವೈದ್ಯಕೀಯ ಕಾಲೇಜನ್ನು ಹೇಗೆ ತೆಗೆದರು?. ಅದನ್ನು ಯಾವ ರಾಜಕಾರಣ ಎಂದು ಕರೆಯುತ್ತಾರೆ ಎಂದು ಮುನಿರತ್ನರಿಗೆ ಕೇಳಿದ್ದಾಗಿ ತಿಳಿಸಿದರು.

ಅದಕ್ಕೆ ಮುನಿರತ್ನ, ನಾನು ಚಿಕ್ಕವನು. ಇದಕ್ಕೆಲ್ಲ ನನ್ನನ್ನು ಮುಂದೆ ಬಿಡಬೇಡಿ ಎಂದರು. ಇನ್ನೂ ಅನೇಕ ವಿಚಾರಗಳು ಚರ್ಚೆಯಾದವು. ಅದನ್ನೆಲ್ಲಾ ಮಾಧ್ಯಮಗಳಿಗೆ ಹೇಳಲು ಆಗುವುದಿಲ್ಲ. ನಿಮಗೆ ಅದೆಲ್ಲಾ ಅರ್ಥವಾಗಿರುತ್ತದೆ. ಕಾಲಿಗೆ ಬೀಳುವುದೆಲ್ಲ ಇಟ್ಟುಕೊಳ್ಳಬೇಡಿ, ಸುಮ್ಮನೆ ಹೊರಡಿ ಎಂದು ಅವರಿಗೆ ಹೇಳಿದೆ ಎಂದರು.

ಸರ್ಕಾರದಿಂದ ಕಾಮಗಾರಿಗಳ ತನಿಖೆ ನಡೆಸಲಾಗುವುದೇ ಎನ್ನುವ ಪ್ರಶ್ನೆಗೆ, ಈಗಾಗಲೇ ತನಿಖೆ ನಡೆಯುತ್ತಿದೆಯಲ್ಲಾ. ಯಾರು ಸರಿಯಾಗಿ ಕೆಲಸ ಮಾಡಿದ್ದಾರೋ ಅವರಿಗೆ ಬಿಲ್ ಬಿಡುಗಡೆ ಮಾಡಲಾಗುವುದು. ಬೊಮ್ಮಾಯಿ ಸಾಹೇಬರು ವಿಧಾನಸಭೆಯಲ್ಲಿ ವರದಿ ನೀಡಿ, ಹೇಳಿಕೆ ನೀಡಿದ್ದರು. ಮುನಿರತ್ನ ಸಹ ನನ್ನ ಕ್ಷೇತ್ರದಲ್ಲಿ ಅನ್ಯಾಯ ನಡೆದಿದೆ ಎಂದು ಪತ್ರ ಬರೆದಿದ್ದರು. ಅದನ್ನೆಲ್ಲಾ ತನಿಖೆಗೆ ನೀಡಿದ್ದೇವೆ. ಬೊಮ್ಮಾಯಿ ಹಾಗೂ ಇವರು ಹೇಳಿದ್ದಕ್ಕೆ ಲೋಕಾಯುಕ್ತ ತನಿಖೆಗೆ ನೀಡಿದ್ದೇವೆ. ವರದಿ ಬಂದ ಬಳಿಕ ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳುತ್ತೇವೆ ಎಂದು ತಿಳಿಸಿದರು.

ಕಾಮಗಾರಿಗಳ ಪಟ್ಟಿ ತಂದುಕೊಡುವುದಾಗಿ ಮುನಿರತ್ನ ಅವರು ಹೇಳಿರುವ ಬಗ್ಗೆ ಕೇಳಿದಾಗ, ಯಾವ ಕಾಮಗಾರಿ, ಯಾವುದು ಆದ್ಯತೆಯ ಮೇಲೆ ನಡೆಯಬೇಕು, ಯಾವ ಕೆಲಸ ಎಂದು ಪಟ್ಟಿ ತಂದುಕೊಡಿ ಎಂದು ಹೇಳಿ ಕಳಿಸಿದ್ದೇನೆ ಎಂದು ಹೇಳಿದರು.

ಡಿ.ಕೆ.ಸಹೋದರರು ಏನು ಮಾಡಿಕೊಂಡು ಬಂದಿದ್ದಾರೋ ನಾನು ಅದನ್ನೇ ಮಾಡುತ್ತಿದ್ದೇನೆ ಎಂಬ ಮುನಿರತ್ನ ಹೇಳಿಕೆ ಬಗ್ಗೆ ಕೇಳಿದಾಗ ನಾನು ಎಕ್ಸಿಬಿಟರ್, ನಟ, ನಿರ್ಮಾಪಕ ಅಲ್ಲ. ಆದರೆ ನಮ್ಮಲ್ಲಿ ಹಾಗೂ ನಮ್ಮ ಲೋಕಸಭಾ ಕ್ಷೇತ್ರದಲ್ಲಿ ಬಹಳಷ್ಟು ಜನ ನಟರು, ನಿರ್ಮಾಪಕರು, ವಿತರಕರು ಸೇರಿಕೊಂಡು ಬಿಟ್ಟಿದ್ದಾರೆ. ನಾನು ಈ ಹಿಂದೆ ಪ್ರದರ್ಶಕ ಆಗಿದ್ದೆ, ಈಗಲ್ಲ ಎಂದು ತಿಳಿಸಿದರು.

ಅರಮನೆ ಮೈದಾನದಲ್ಲಿ ಮುನಿರತ್ನ ಹೈಡ್ರಾಮಾ: ಇದಕ್ಕೂ ಮುನ್ನ ನಗರದ ಅರಮನೆ ಮೈದಾನದಲ್ಲಿ ನಡೆದ ಬೆಂಗಳೂರು ಕಂಬಳ- ನಮ್ಮ ಕಂಬಳದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡುತ್ತಿದ್ದಾಗ, ಅಲ್ಲಿಗೆ ಬಂದ ಮುನಿರತ್ನ ಮನವಿ ಸಲ್ಲಿಸಲು ಬಂದಿರುವುದಾಗಿ ಹೇಳಿ ಸಭೆಯ ಬಳಿ ಕೆಲಕಾಲ ಗೊಂದಲ ಮೂಡಿಸಿದರು.

ಇದನ್ನು ಗಮನಿಸಿದ ಡಿ.ಕೆ.ಶಿವಕುಮಾರ್ ವೇದಿಕೆ ಮೇಲಿಂದ ಪ್ರತಿಕ್ರಿಯಿಸಿ, ನಾಟಕ ಮಾಡಬೇಕು ಎಂದು ಇಲ್ಲಿಗೆ ಬಂದಿದ್ದಾರೆ, ಅವರನ್ನು ನಿಧಾನಕ್ಕೆ ಭೇಟಿಯಾಗೋಣ. ನಾಟಕ ಮಾಡುವ, ಸಿನಿಮಾ ತೆಗೆಯುವ ನಿರ್ಮಾಪಕರಲ್ಲವೇ? ಅವರದ್ದು ಒಂದೊಂದು ಕಥೆ ಇರುತ್ತದೆ. ಇವನ್ನೆಲ್ಲಾ ಅರಗಿಸಿಕೊಳ್ಳೋಣ. ನಡೆ ಮುಂದೆ, ನಡೆ ಮುಂದೆ ನುಗ್ಗಿ ನಡೆ ಮುಂದೆ ಎಂದು ನಾವು ಮುನ್ನಡೆಯಬೇಕು ಎಂದು ತಿಳಿಸಿದರು.

ಅವರದ್ದು ಏನೋ ತೊಂದರೆ ಇದೆ. ಆದರೆ ಈ ಕಾರ್ಯಕ್ರಮಕ್ಕೆ ಅಡ್ಡಿಯಾಗದಂತೆ ಅದನ್ನು ಬಗೆಹರಿಸಿ. ಬೆಂಗಳೂರಿನಲ್ಲಿ ಕಂಬಳ ಮಾಡಬೇಕು ಎಂದು ಮಂಗಳೂರಿನಿಂದ ಜನರು ಬಂದು ಉತ್ಸಾಹದಿಂದ ಇಲ್ಲಿ ಸೇರಿದ್ದಾರೆ. ಈ ಕಾರ್ಯಕ್ರಮಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಅವರಿಗೆ ಹೇಳಿದರು.

ಕಾರ್ಯಕ್ರಮ ಮುಗಿಸಿ ಹೊರಟ ಡಿಸಿಎಂ ಶಿವಕುಮಾರ್, ಮನವಿ ಸಲ್ಲಿಸಲು ಬಂದ ಮುನಿರತ್ನ ಅವರಿಗೆ ಮಧ್ಯಾಹ್ನ ಮನೆಯ ಬಳಿ ಬನ್ನಿ, ಈ ಕುರಿತು ಚರ್ಚೆ ಮಾಡೋಣ ಎಂದರು. ಈ ಸಂದರ್ಭದಲ್ಲಿ ಶಾಸಕ ಮುನಿರತ್ನ, ಡಿ.ಕೆ.ಶಿವಕುಮಾರ್ ಕಾಲಿಗೆ ಬಿದ್ದು, ಮನವಿ ಪತ್ರ ನೀಡಿದರು.

ಅರಮನೆ ಮೈದಾನದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ಮುನಿರತ್ನ ಪ್ರತಿಭಟನೆ ಮಾಡಲು ಬಂದಿದ್ದಾರೆ ಎಂದು ಹೇಳಿದ್ದೀರಿ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡಲು ಅವಕಾಶವಿದೆ. ಕಂಬಳ ಭೂಮಿ ಪೂಜೆಯ ಬಳಿ ಬಂದು 'ಸೀನ್ ಕ್ರಿಯೇಟ್ʼ ಮಾಡುವ ಅವಶ್ಯಕತೆ ಇರಲಿಲ್ಲ. ದಸರಾ ಕ್ರೀಡಾಕೂಟ ಉದ್ಘಾಟನೆಗೆ ಮೈಸೂರಿಗೆ ಹೋಗಬೇಕಾಗಿದ್ದು, ಸಮಯ ಸಿಕ್ಕರೆ ಭೇಟಿಗೆ ಅವಕಾಶ ನೀಡುತ್ತೇನೆ ಎಂದರು.

ಡಿ.ಕೆ.ಶಿವಕುಮಾರ್ ಅವರ ಸದಾಶಿವನಗರದ ನಿವಾಸಕ್ಕೆ ಧಾವಿಸಿದ ಮುನಿರತ್ನ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.

ಇದನ್ನೂಓದಿ: ಅನುದಾನ ರದ್ದು: ಮೌನ ಪ್ರತಿಭಟನೆ ವಾಪಸ್ ಪಡೆದು ಡಿ.ಕೆ.ಸುರೇಶ್‌ಗೆ ಟಾಂಗ್‌ ಕೊಟ್ಟ ಮುನಿರತ್ನ

Last Updated : Oct 11, 2023, 7:51 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.